ಮದ್ದೂರು ಸಾರಿಗೆ ಡಿಪೋದಲ್ಲಿ ಕ್ಷಯ ರೋಗದ ಬಗ್ಗೆ ಅರಿವು, ತಪಾಸಣೆ

KannadaprabhaNewsNetwork |  
Published : Feb 12, 2025, 12:32 AM IST
11ಕೆಎಂಎನ್ ಡಿ15 | Kannada Prabha

ಸಾರಾಂಶ

100 ದಿನಗಳ ಆಂದೋಲನ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಿ ಕ್ಷಯ ರೋಗಲಕ್ಷಣಗಳ ಬಗ್ಗೆ ತಪಾಸಣೆ ನಡೆಸಲಾಯಿತು. ಸಾರಿಗೆ ಇಲಾಖೆ ಸಿಬ್ಬಂದಿ ಹೆಚ್ಚು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕ್ಷಯ ರೋಗ ಹರಡುವ ಸಾಧ್ಯತೆ ಹೆಚ್ಚು. ಎಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮದ್ದೂರು

ಪಟ್ಟಣದ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸುವ ಜೊತೆಗೆ ತಪಾಸಣೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಣಿ ಮಾತನಾಡಿ, ಕ್ಷಯರೋಗ ಹರಡುವ ಬಗ್ಗೆ ಲಕ್ಷಣಗಳು ಪರೀಕ್ಷೆ ಹಾಗೂ ಚಿಕಿತ್ಸಾ ವಿಧಾನಗಳ ಬಗ್ಗೆ ತಿಳಿಸಿದರು.

100 ದಿನಗಳ ಆಂದೋಲನ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಿ ಕ್ಷಯ ರೋಗಲಕ್ಷಣಗಳ ಬಗ್ಗೆ ತಪಾಸಣೆ ನಡೆಸಲಾಯಿತು. ಸಾರಿಗೆ ಇಲಾಖೆ ಸಿಬ್ಬಂದಿ ಹೆಚ್ಚು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಕ್ಷಯ ರೋಗ ಹರಡುವ ಸಾಧ್ಯತೆ ಹೆಚ್ಚು. ಎಲ್ಲರೂ ತಪಾಸಣೆ ಮಾಡಿಸಿಕೊಳ್ಳುವಂತೆ ಸೂಚಿಸಲಾಯಿತು.

ಕ್ಷಯ ಮುಕ್ತ ಮಂಡ್ಯ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡುವಂತೆ, ರೋಗದ ತೀವ್ರತೆ ಬಗ್ಗೆ ಮಾಹಿತಿ ನೀಡಿ, ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಸಿಬ್ಬಂದಿ, ಆರೋಗ್ಯ ಇಲಾಖೆಯಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ತಮ್ಮೇಗೌಡ, ಎಸ್ ಟಿಎಸ್ ಕೆಂಪೇಗೌಡರು ಹಾಜರಿದ್ದರು.

ಶಿಕ್ಷಕ ಬಸವರಾಜು ಮನೆಗೆ ನಟ ಯುವರಾಜ್ ಕುಮಾರ್ ಭೇಟಿ

ಶ್ರೀರಂಗಪಟ್ಟಣ:

ಪಟ್ಟಣ ಸಮೀಪದ ಗಂಜಾಂನ ಡಾ.ರಾಜ್ ಕುಮಾರ್ ಅಭಿಮಾನಿ ಸರ್ಕಾರಿ ಶಾಲೆ ಶಿಕ್ಷಕ ಬಸವರಾಜು ಅವರ ನೂತನ ಮನೆಗೆ ಯುವ ನಾಯಕನಟ ಯುವರಾಜ್ ಕುಮಾರ್ ಭೇಟಿ ನೀಡಿ ಶುಭ ಹಾರೈಸಿದರು.

ನಮ್ಮ ತಾತ, ವರನಟರಾದ ಡಾ.ರಾಜ್ ಕುಮಾರ್ ಅಭಿಮಾನಿಯ ಕುಟುಂಬದ ಕರೆಗೆ ಮಣಿದು ಮನೆಗೆ ಬಂದಿದ್ದು, ತಮ್ಮ ಕುಟುಂಬದ ಮೇಲೆ ಇಟ್ಟಿರೋ ಅಭಿಮಾನಕ್ಕೆ ಚಿರಋಣಿಯಾಗಿರುವುದಾಗಿ ತಿಳಿಸಿದರು.

ಈ ವೇಳೆ ಅಭಿಮಾನಿ ಕುಟುಂಬವು ಯುವರಾಜ್ ಕುಮಾರ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ತಮ್ಮ ನೂತನ ಮನೆ ಗೋಡೆ ಮೇಲೆ ಯುವರಾಜ್ ಕುಮಾರ್ ರಿಂದ ಹಸ್ತಾಕ್ಷರ ಪಡೆದು ಸಂತಸ ವ್ಯಕ್ತಪಡಿಸಿದರು.ಪಿ.ಎಂ.ನರೇಂದ್ರಸ್ವಾಮಿ ಅಭಿನಂದಿಸಿದ ವಿಜಯ ರಾಮೇಗೌಡ

ಕೆ.ಆರ್.ಪೇಟೆ:

ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡ ಮಳವಳ್ಳಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಜಿಲ್ಲಾ ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ ರಾಮೇಗೌಡ ಅಭಿನಂದಿಸಿದರು.

ಮೈಸೂರಿನ ಮಿತ್ರ ಫೌಂಡೇಷನ್ ಸಾಮಾಜಿಕ ಸಂಸ್ಥೆ ಅಧ್ಯಕ್ಷರೂ ಆಗಿರುವ ವಿಜಯರಾಮೇಗೌಡ ಬೆಂಗಳೂರಿನ ಪರಿಸರ ಮಾಲಿನ್ಯ ನಿಯಂತ್ರಣ ಕಚೇರಿಯಲ್ಲಿ ನೂತನ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಅವರಿಗೆ ಹೂಗುಚ್ಚ ನೀಡಿ ಶುಭಕೊರಿದರು.

ಜಿಲ್ಲೆಯ ಅತ್ಯಂತ ಕ್ರಿಯಾಶೀಲ ರಾಜಕಾರಣಿ ನರೇಂದ್ರಸ್ವಾಮಿ ಶೀಘ್ರದಲ್ಲಿಯೇ ಸಚಿವರಾಗಲಿ. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಜೊತೆ ನರೇಂದ್ರಸ್ವಾಮಿ ಕೈ ಜೋಡಿಸಿದರೆ ಜಿಲ್ಲೆಯ ಅಭಿವೃದ್ಧಿ ವೇಗ ಹಿಮ್ಮಡಿಗೊಳ್ಳಲಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ