ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಟಿ.ಡಿ.ಮೇಘರಾಜ್‌ ಪುನರ್‌ ನೇಮಕ

KannadaprabhaNewsNetwork |  
Published : Jan 16, 2024, 01:47 AM IST
ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಪುನರ್‌ ನೇಮಕಗೊಂಡ ಟಿ. ಡಿ. ಮೇಘರಾಜ್‌ ಅವರು ಸಂಸದ ಬಿ. ವೈ. ರಾಘವೇಂದ್ರ ಅವರನ್ನು ಭೇಟಿ ಮಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಟಿ.ಡಿ. ಮೇಘರಾಜ್‌ ಮರುನೇಮಕ ಆಗಿದ್ದಾರೆ. ಇವರ ಆಯ್ಕೆ ಲೋಕಸಭೆ ಚುನಾವಣೆ ದೃಷ್ಟಿಯಿಂದ ಮಾತ್ರವಲ್ಲದೇ, ಯಡಿಯೂರಪ್ಪ ಬಣದಲ್ಲಿ ಮೇಘರಾಜ್‌ ಗುರುತಿಸಿಕೊಂಡಿರುವುದರಿಂದಲೂ ಮುಂದುವರಿಸಲಾಗಿದೆ ಎಂಬ ಲೆಕ್ಕಾಚಾರ ಶುರುವಾಗಿದೆ

ಶಿವಮೊಗ್ಗ: ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಟಿ.ಡಿ. ಮೇಘರಾಜ್‌ ಅವರನ್ನು ಮರುನೇಮಕ ಮಾಡಲಾಗಿದೆ.

ಈ ಹಿಂದಿನ ಅವಧಿಗೂ ಟಿ.ಡಿ. ಮೇಘರಾಜ್‌ ಅವರೇ ಅಧ್ಯಕ್ಷರಾಗಿದ್ದು, ಈ ಬಾರಿ ಹಿರಿಯ ಜೊತೆಗೆ ಹೊಸಮುಖಗಳ ಹೆಸರು ಪ್ರಮುಖವಾಗಿ ಕೇಳಿಬಂದಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಟಿ.ಡಿ. ಮೇಘರಾಜ್‌ ಅವರನ್ನೇ ನೇಮಿಸಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

ಯಡಿಯೂರಪ್ಪ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಟಿ.ಡಿ. ಮೇಘರಾಜ್‌ ಆಯ್ಕೆ ಲೋಕಸಭಾ ಚುನಾವಣಾ ಹಿನ್ನೆಲೆ ಕಾರಣ ಆಗಿರಬಹುದು ಎಂಬ ಲೆಕ್ಕಾಚಾರ ಕೇಳಿಬಂದಿದೆ. ಹೊಸಬರು ಬಂದರೆ ಇಡೀ ಜಿಲ್ಲೆಯ ಪರಿಚಯ ಮತ್ತು ತಳಮಟ್ಟದ ಕಾರ್ಯಕರ್ತರ ಸಂಪರ್ಕ ಹೊಸದಾಗಿ ಮಾಡಿಕೊಳ್ಳಬೇಕಾಗುತ್ತದೆ. ಆದರೆ, ಟಿ.ಡಿ. ಮೇಘರಾಜ್ ಅವರಿಗೆ ಈಗಾಗಲೇ ಕೆಲಸ ಮಾಡಿದ ಅನುಭವ ಮತ್ತು ಸಂಪರ್ಕ ಇರುವುದರಿಂದ ಚುನಾವಣೆಯ ಸಿದ್ಧತೆ ನಡೆಸಲು ಸುಲಭವಾಗುತ್ತದೆ ಎಂಬ ಲೆಕ್ಕಾಚಾರ ಕೇಳಿಬಂದಿದೆ.

ಆದೇಶ ಹೊರಬೀಳುತ್ತಿದ್ದಂತೆ ಸೋಮವಾರ ಬೆಳಗ್ಗೆ ಟಿ.ಡಿ. ಮೇಘರಾಜ್‌ ಅವರು ನಗರದ ಹತ್ತಿರದ ಮತ್ತೂರು ಗ್ರಾಮಕ್ಕೆ ತೆರಳಿ ಆರ್‌.ಎಸ್‌.ಎಸ್‌. ಪ್ರಾಂತ ಸಹ ಕಾರ್ಯವಾಹಕ ಪಟ್ಟಾಭಿರಾಮ್‌ ಮತ್ತು ಮಾಜಿ ವಿಧಾನ ಪರಿಷತ್ತು ಸದಸ್ಯ ಭಾನುಪ್ರಕಾಶ್‌ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಇದಕ್ಕೂ ಮೊದಲು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಭೇಟಿ ಮಾಡಿದರು.

- - - -ಫೋಟೋ:

ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಪುನರ್‌ ನೇಮಕಗೊಂಡ ಟಿ. ಡಿ. ಮೇಘರಾಜ್‌ ಅವರು ಸಂಸದ ಬಿ. ವೈ. ರಾಘವೇಂದ್ರ ಅವರನ್ನು ಭೇಟಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಚ್ಚೆತ್ತ ಬೆಂ.ವಿವಿ: ಲೋಪ ಸರಿಪಡಿಸಿ 400 ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ
ಕುದುರೆಗಳಲ್ಲಿ ಗ್ಲ್ಯಾಂಡರ್ಸ್ ರೋಗ ಪತ್ತೆ: ಟರ್ಫ್ ಕ್ಲಬ್‌ ಸುತ್ತ ಪ್ರಾಣಿ ಸಂಚಾರ ನಿರ್ಬಂಧ