ಚುನಾವಣೆಯಲ್ಲಿ ಮುಖ ತೋರಿಸುವ ಎಂಪಿಗೆ ತಕ್ಕಪಾಠ ಕಲಿಸಿ

KannadaprabhaNewsNetwork |  
Published : May 04, 2024, 12:36 AM IST
ಕುಡಚಿ ವಿಧಾನಸಭೆ ಕ್ಷೇತ್ರದಲ್ಲಿ ಚಿಕ್ಕೋಡಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾಜಾರಕಿಹೊಳಿ ಮತಯಾಚನೆ ಮಾಡಿದರು. | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿಕ್ಷೇತ್ರಕ್ಕೆ ಬರುವ ಗ್ರಾಮಗಳಲ್ಲಿ ಅಭಿವೃದ್ಧಿ ಮಾಡದೇ ಬರಿ ಚುನಾವಣೆ ಬಂದಾಗ ಮುಖ ತೋರಿಸುವ ಹಾಲಿ ಎಂಪಿಗೆ ಮತದಾರರು ತಕ್ಕ ಪಾಠ ಕಲಿಸಲು ಮುಂದಾಗಬೇಕು ಎಂದು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿಕ್ಷೇತ್ರಕ್ಕೆ ಬರುವ ಗ್ರಾಮಗಳಲ್ಲಿ ಅಭಿವೃದ್ಧಿ ಮಾಡದೇ ಬರಿ ಚುನಾವಣೆ ಬಂದಾಗ ಮುಖ ತೋರಿಸುವ ಹಾಲಿ ಎಂಪಿಗೆ ಮತದಾರರು ತಕ್ಕ ಪಾಠ ಕಲಿಸಲು ಮುಂದಾಗಬೇಕು ಎಂದು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮನವಿ ಮಾಡಿದರು.

ರಾಯಭಾಗ ವಿಧಾನಸಭಾ ಕ್ಷೇತ್ರದ ಕಂಕಣವಾಡಿ ಹಾಗೂ ಕುಡುಚಿ ಕ್ಷೇತ್ರದ ಮುಗಳಖೋಡ ಹಾಗೂ ಹಿಡಕಲ್‌ ಗ್ರಾಮದಲ್ಲಿ ಹಮ್ಮಿಕೊಂಡ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಹಿಂದಿನ ಅವಧಿಯಲ್ಲಿ ಬಿಜೆಪಿಯಿಂದ ಜೊಲ್ಲೆ ಸಂಸದರಾಗಿ ಆಯ್ಕೆಯಾಗಿ ಬಂದರೂ ಈ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಇಲ್ಲಿಯ ಪರಿಸ್ಥಿತಿ ನೋಡಿದರೇ ರೈತರ ಬಗ್ಗೆ ಕಾಳಜಿ ಇಲ್ಲದ ಸಂಸದರಾಗಿದ್ದಾರೆ ಎಂದು ಕಿಡಿಕಾರಿದರು.

ನಮ್ಮ ಕ್ಷೇತ್ರದಲ್ಲಿರುವ ಯುವಕರಿಗೆ ನಮ್ಮ ಕ್ಷೇತ್ರದಲ್ಲಿ ಮೆಡಿಕಲ್‌ ಹಾಗೂ ಇಂಜಿನಿಯರಿಂಗ್‌ ಕಾಲೇಜು ಇಲ್ಲದರಿಂದ ಬೆಂಗಳೂರು ನಂತಹ ನಗರಗಳಿಗೆ ಹೋಗಿ ಶಿಕ್ಷಣ ಕಲಿತು ಉದ್ಯೋಗ ಹುಡುಕುವ ಪರಿಸ್ಥಿತಿ ಎದುರಾಗಿದೆ. ಬರುವ ದಿನಗಳಲ್ಲಿ ನಮ್ಮ ಕ್ಷೇತ್ರದಲ್ಲಿರುವ ಯುವಕರಿಗೆ ಹಾಗೂ ಯುವತಿಯರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಮೆಡಿಕಲ್‌ ಹಾಗೂ ಇಂಜನಿಯರಿಂಗ್‌ ಕಾಲೇಜುಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನಮ್ಮ ದೇಶದ ಪ್ರಧಾನಿಯಾಗಿದ್ದ ನೆಹರು, ಇಂದಿರಾಗಾಂಧಿ, ರಾಜೀವ್ ಗಾಂಧಿಯವರು ಈ ದೇಶಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಸದ್ಯ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದು 5 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಈಗ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೇ ಪಕ್ಷ ದೇಶದ ಜನತೆಗೆ ನೀಡಿರುವ ಎಲ್ಲ ಗ್ಯಾರಂಟಿಗಳನ್ನು ಈಡೇರಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಪಕ್ಷ ಈ ದೇಶದ ರೈತರ, ಬಡವರ ಹಾಗೂ ವಿಶೇಷವಾಗಿ ಮಹಿಳೆಯರಿಗೋಸ್ಕರ್‌ ಸಾಕಷ್ಟು ಯೋಜನೆಗಳನ್ನು ಜಾರಿಗೆ ಮಾಡಿದೆ. ಹೀಗಾಗಿ ಮೇ.7 ರಂದು ನಡೆಯಲಿರುವ ಮತದಾನದಲ್ಲಿ ನನ್ನ ಕ್ರಮ ಸಂಖ್ಯೆ 2ಕ್ಕೆ ಮತ ನೀಡುವ ಮೂಲಕ ಜನ ಸೇವೆಗೆ ಅವಕಾಶ ಕಲ್ಪಿಸಬೇಕು. ನಾನು ಸದಾ ನಿಮ್ಮ ಕಷ್ಟ, ಸುಖದಲ್ಲಿ ಭಾಗಿಯಾಗಿರುತ್ತೇನೆ. ನೀವು ಕೊಡುವ ಅವಕಾಶವನ್ನು ಬಳಸಿಕೊಂಡು ಪ್ರಾಮಾಣಿಕತೆಯಿಂದ, ಶ್ರದ್ಧೆಯಿಂದ ಕೆಲಸ ಮಾಡಿ ನಂಬಿಕೆ ಉಳಿಸಿಕೊಳ್ಳುತ್ತೇನೆ ಎಂದು ತಿಳಿಸಿದರು.

ಈ ವೇಳೆ ಅರ್ಜುನ ನಾಯಕವಾಡಿ, ಕಾಂಗ್ರೆಸ್‌ ಮುಖಂಡ ಮಹಾವೀರ ಮೋಹಿತೆ, ಸಚಿನ ನಾಯಕವಾಡಿ, ಅಪ್ಪಾಸಾಹೇಬ್‌, ಸಿದ್ದು ಬಂಡಗಾರ, ಅಪ್ಪಾಸಾಬ ಕುಲಗುಡೆ, ಬಾಳಪ್ಪ ಅರಭಾವಿ, ಡಾ.ಅರವಿಂದ ಗದಾಡಿ, ನಾರಾಯಣ ಅಗ್ನಪ್ಪಗೋಳ, ರಾಜಶ್ರೂ ಈ ನಾಯಕವಾಡಿ, ನಿರ್ಮಾಲಾ ಪಾಟೀಲ, ಜಯಶ್ರೀ ಮೊಹಿತೆ ಸೇರಿದಂತೆ ಅನೇಕ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.ಬಾಕ್ಸ್...

ಪ್ರಿಯಾಂಕಾಗೆ ಭರ್ಜರಿ ಸ್ವಾಗತ

ಕಂಕಣವಾಡಿ ಗ್ರಾಮಕ್ಕೆ ಆಗಮಿಸಿದ ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಗ್ರಾಮಕ್ಕೆ ಆಗಮಿಸಿದ ನಾಯಕಿಗೆ ಜೆಸಿಬಿಗಳ ಮೂಲಕ ಹೂ ಮಳೆ ಸುರಿಸಿ ಅಭಿಮಾನ ಮೆರೆದರು. ಅಲ್ಲದೇ ಗ್ರಾಮದ ಮಹಿಳೆಯರು ಆರತಿ ಎತ್ತಿ ಹೂ ಮಾಲೆ ಹಾಕುವ ಮೂಲಕ ಸ್ವಾಗತ ಕೋರಿದರು. ಇದಕ್ಕೂ ಮೊದಲು ನಿಪನ್ಯಾಳ ಗ್ರಾಮದಿಂದ ಕಂಕನವಾಡಿವರೆಗೆ ಬೈಕ್‌ ರ್‍ಯಾಲಿ ಹಮ್ಮಿಕೊಳ್ಳುವ ಮೂಲಕ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಅದ್ಧೂರಿ ಸ್ವಾಗತ ಕೋರಿದರು. ಈ ಬೈಕ್‌ ರ್‍ಯಾಲಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಗ್ರಾಮದ ಯುವಕರು ಭಾಗವಹಿಸಿದ್ದರು.ಕೋಟ್‌...ಬರೀ ಮುಖ ತೋರಿಸಿ ಕ್ಷೇತ್ರಕ್ಕೆ ಬರದ ಹಾಲಿ ಎಂಪಿ ಅವರಗಿಂತ ಸದಾ ನಮ್ಮ ಜೊತೆ ನಿಂತು ಅಭಿವೃದ್ಧಿಗಳ ಪರ ಕೆಲಸ ಮಾಡುವ ನನಗೆ ಈ ಬಾರಿ ಮತ ಹಾಕಬೇಕು. ಮುಖ್ಯವಾಗಿ ನಮ್ಮ ತಂದೆಯವರಾದ ಸತೀಶ್‌ ಜಾರಕಿಹೊಳಿ ಹಾಗೂ ಗ್ರಾಮದ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಬರುವ ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಬಗೆ ಹರಿಸಲಾಗುವುದು. ಮತದಾರರು ಅಭಿವೃದ್ಧಿ ಪರವಿರುವ ನನಗೆ ಮತ ನೀಡಬೇಕು.-ಪ್ರಿಯಾಂಕಾ ಜಾರಕಿಹೊಳಿ, ಚಿಕ್ಕೋಡಿ ಕಾಂಗ್ರೆಸ್‌ ಅಭ್ಯರ್ಥಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ