ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರ ಕಲಿಸಿ: ಟಿ.ಬಿ. ಪಟಗಾರ

KannadaprabhaNewsNetwork |  
Published : Jan 08, 2025, 12:19 AM IST
ಸಿದ್ದಾಪುರ ತಾಲೂಕಿನ ಮುಗದೂರಿನ ಸರ್ಕಾರಿ ಹಿ.ಪ್ರಾ. ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಟಿ.ಬಿ. ಪಟಗಾರ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಕ್ಕಳ ಗುಣಮಟ್ಟದ ಕಲಿಕೆಗೆ ಸಿದ್ಧಗೊಂಡಿರುವ ಸ್ಮಾರ್ಟ್ ಕ್ಲಾಸನ್ನು ವಕೀಲ ಆರ್.ಎಸ್. ಹೆಗಡೆ ಮುಗದೂರು ಉದ್ಘಾಟಿಸಿ, ತಾಂತ್ರಿಕ ಯುಗದಲ್ಲಿ ಸ್ಮಾರ್ಟ್ ಕ್ಲಾಸಿನ ಅನಿವಾರ್ಯತೆಯನ್ನು ಸವಿಸ್ತಾರವಾಗಿ ತಿಳಿಸಿದರು.

ಸಿದ್ದಾಪುರ: ತಾಲೂಕಿನ ಮುಗದೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘವನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು. ಮುಗದೂರಿನ ಸ.ಹಿ.ಪ್ರಾ. ಶಾಲೆಯ ಮುಖ್ಯಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಟಿ.ಬಿ. ಪಟಗಾರ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳು ಶಿಕ್ಷಣದ ಜತೆಗೆ ಸಂಸ್ಕಾರವಂತರಾಗಿ ಬದುಕಬೇಕು. ಪಾಲಕರು, ಮಕ್ಕಳು ಶಿಕ್ಷಕರನ್ನು ಗೌರವ ಭಾವನೆಯಲ್ಲಿ ಕಾಣಬೇಕು ಎಂದರು.

ಮಕ್ಕಳ ಗುಣಮಟ್ಟದ ಕಲಿಕೆಗೆ ಸಿದ್ಧಗೊಂಡಿರುವ ಸ್ಮಾರ್ಟ್ ಕ್ಲಾಸನ್ನು ವಕೀಲ ಆರ್.ಎಸ್. ಹೆಗಡೆ ಮುಗದೂರು ಉದ್ಘಾಟಿಸಿ, ತಾಂತ್ರಿಕ ಯುಗದಲ್ಲಿ ಸ್ಮಾರ್ಟ್ ಕ್ಲಾಸಿನ ಅನಿವಾರ್ಯತೆಯನ್ನು ಸವಿಸ್ತಾರವಾಗಿ ತಿಳಿಸಿದರು.

ಉಗಮ ಎಂಬ ಶೀರ್ಷಿಕೆಯ ಅಡಿಯಲ್ಲಿ ಮಕ್ಕಳಿಂದ ಸಿದ್ಧವಾದ ಹಸ್ತಪತ್ರಿಕೆಯನ್ನು ಬೆಂಗಳೂರಿನ ರಾಜಧಾನಿ ಕಾಲೇಜಿನ ಪ್ರಾಂಶುಪಾಲ ಸ್ವಾಮಿ ಎಂ.ಎಂ. ಬಿಡುಗಡೆಗೊಳಿಸಿ, ಮಕ್ಕಳ ರಚನಾತ್ಮಕತೆ ಮತ್ತು ಗುರುಗಳ ಮಾರ್ಗದರ್ಶನವನ್ನು ಶ್ಲಾಘಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜು ಪಿ. ಮಡಿವಾಳ ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಚಂದ್ರು ಗೌಡರ್, ಖಜಾನೆ ಇಲಾಖೆಯ ಎಸ್.ಬಿ. ನಾಯ್ಕ ಶಿರಸಿ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ಮಾರುತಿ ನಾಯ್ಕ, ಪರಶುರಾಮ್ ಕೆ. ನಾಯ್ಕ, ಮಹಾಬಲೇಶ್ವರ ಮಡಿವಾಳ, ಎಸ್‌ಡಿಎಂಸಿ ಅಧ್ಯಕ್ಷ ವಸಂತ್ ಬಿ. ಮಡಿವಾಳ ಹಾಗೂ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದಿಂದ ಶಾಲೆಗೆ ಒಂದು ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಿನ ಮೊತ್ತದ ಬಣ್ಣ ಹಾಗೂ ಸ್ಮಾರ್ಟ್ ಕ್ಲಾಸ್ ಸಿದ್ಧಪಡಿಸಿರುವುದು ವಿಶೇಷವಾಗಿತ್ತು.ಮುಖ್ಯ ಶಿಕ್ಷಕಿ ಮಂಗಲಾ ನಾಯ್ಕ ಸ್ವಾಗತಿಸಿದರು. ರಾಮಚಂದ್ರ ನಾಯ್ಕ, ದೇವರಾಜ್ ಎಂ. ನಿರೂಪಿಸಿದರು. ಎಂ.ಬಿ. ದಯಾನಂದ ವಂದಿಸಿದರು. ಜಿಲ್ಲಾ ಮಟ್ಟದ ಮುಕ್ತ ಚದುರಂಗ ಸ್ಪರ್ಧೆ

ಕಾರವಾರ: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಾಥಮಿಕ ವಿಭಾಗದ 1ರಿಂದ 7ನೇ ತರಗತಿಯ ಬಾಲಕ- ಬಾಲಕಿಯರಿಗೆ ಮತ್ತು ಮಾಧ್ಯಮಿಕ ವಿಭಾಗದ 8ರಿಂದ 10ನೇ ತರಗತಿ ಬಾಲಕ/ಬಾಲಕಿಯರಿಗೆ ಪ್ರತ್ಯೇಕ ವಿಭಾಗದಲ್ಲಿ ಜಿಲ್ಲಾ ಮಟ್ಟದ ಮುಕ್ತ ಚದುರಂಗ ಸ್ಪರ್ಧೆಯನ್ನು ಜ. 18ರಂದು ಶಿರಸಿಯ ಅರಣ್ಯ ಭವನದಲ್ಲಿ ಏರ್ಪಡಿಸಲಾಗಿದೆ.ವಿಜೇತ ಸ್ಪರ್ಧಾಳುಗಳಿಗೆ ನಗದು ಬಹುಮಾನ ವಿತರಿಸಲಾಗುವುದು. ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯ ಆಸಕ್ತ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ