-ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅಭಿಮತ । ಶಹಾಪುರದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಸಚಿವರು
-------ಕನ್ನಡಪ್ರಭ ವಾರ್ತೆ ಶಹಾಪುರ
ಮಕ್ಕಳಿಗೆ ಒಳ್ಳೆಯ ಶಿಕ್ಷಣ ಹಾಗೂ ಶಿಸ್ತಿನ ಜೊತೆಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿ ಇಂದಿನ ಶಿಕ್ಷಕರ ಮೇಲಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕು ಮಟ್ಟ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಈಗ ಕ್ರಾಂತಿಕಾರಿಕ ಬದಲಾವಣೆ ಕಾಣಬಹುದಾಗಿದೆ. ಇತರ ದೇಶಗಳಿಗೆ ಪೈಪೋಟಿ ನೀಡಲು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ರೀತಿಯಲ್ಲಿ ತ್ವರಿತ ಬದಲಾವಣೆಯ ಅಗತ್ಯವಿದೆ. ಖಾಸಗಿ ಶಾಲೆಗಳಿಗಿಂತಲೂ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಶಿಕ್ಷಕರು ಕಾರ್ಯೋನ್ಮುಖರಾಗಬೇಕು ಎಂದರು.
ನಿವೃತ್ತ ಉಪ ನಿರ್ದೇಶಕ ಶಾಂತಗೌಡ ಪಾಟೀಲ್ ಮಾತನಾಡಿ, ಜ್ಞಾನಕ್ಕಿಂತ ಮಿಗಿಲಾದ ವಸ್ತು ಜಗತ್ತಿನಲ್ಲಿ ಯಾವುದು ಇಲ್ಲ. ಜ್ಞಾನ ಸಂಪಾದನೆ ಮತ್ತು ಜ್ಞಾನ ಪ್ರಸಾರ ಶಿಕ್ಷಕನ ಎರಡು ಕಣ್ಣುಗಳಿದ್ದಂತೆ. ಎಲ್ಲ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠ. ಗುರುವಿನ ಸ್ಥಾನ ಹೊಂದಿರುವ ಶಿಕ್ಷಕರು ವೃತ್ತಿಯ ಗೌರವ ಕಾಪಾಡಿಕೊಂಡು ಮಕ್ಕಳಿಗೆ ವಿದ್ಯಾರ್ಜನೆ ಮಾಡಬೇಕು ಎಂದು ತಿಳಿಸಿದರು.ಮಕ್ಕಳ ಸಾಮರ್ಥ್ಯಕ್ಕನುಗುಣವಾಗಿ ಶಿಕ್ಷಕರು ಬೋಧಿಸಿದರೆ ಮಕ್ಕಳ ಕಲಿಕೆಯ ಗುಣಮಟ್ಟಕ್ಕೆ ಪೂರಕವಾಗುತ್ತದೆ. ಗುರು ಮತ್ತು ಶಿಕ್ಷಕ ಪರಂಪರೆ ನಮ್ಮ ದೇಶದಲ್ಲಿ ಪ್ರಾಚೀನ ಕಾಲದಿಂದಲೂ ನಡೆದುಕೊಂಡು ಬಂದಿದೆ. ಶಿಕ್ಷಕರು ನಿಜವಾದ ಜೀವನ ವಿಧಾನವನ್ನು ಕಲಿಸಿ, ಸರಿಯಾದ ಮಾರ್ಗವನ್ನು ಅನುಸರಿಸಲು ಪ್ರೇರೇಪಿಸುತ್ತಾರೆ. ಇಂಥ ಪವಿತ್ರ ಕಾರ್ಯದ ರೂವಾರಿಗಳಾದ ನೀವುಗಳು ಮೌಲ್ಯಗಳು ಉಳಿಸಿಕೊಂಡು ಹೋಗಬೇಕೆಂದು ಶಿಕ್ಷಕರಿಗೆ ಸಲಹೆ ನೀಡಿದರು.
ಹಿರಿಯ ಸಾಹಿತಿ ನಿಂಗನಗೌಡ ದೇಸಾಯಿ ಅವರು ಶಿಕ್ಷಕರ ದಿನಾಚರಣೆಯ ಮಹತ್ವ ಮತ್ತು ಶಿಕ್ಷಕರ ಪಾತ್ರ ಕುರಿತು ವಿಶೇಷ ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ವೇಳೆ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು.
ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ್ ಬಿರಾದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಜಾಹಿದಾ ಬೇಗಂ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಯಪ್ಪಗೌಡ ಹುಡೇದ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಬಿ.ಹೆಚ್. ಸೂರ್ಯವಂಶಿ, ಕ್ಷೇತ್ರ ಸಮನ್ವಯಾಧಿಕಾರಿ ರೇಣುಕಾ ಪಾಟೀಲ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದಪ್ಪ, ವಡಗೇರ ತಾಲೂಕಾಧ್ಯಕ್ಷ ಮಲ್ಲೇಶಪ್ಪ, ಚನ್ನಬಸ್ಸು ವನದುರ್ಗ, ಶಿವಲಿಂಗಪ್ಪ, ಮಂಜುನಾಥ ರಾಠೋಡ, ಚಂದ್ರಶೇಖರ ವೈದ್ಯ, ಭೀಮನಗೌಡ, ಅಯ್ಯಪ್ಪ ಬಡಿಗೇರ, ಶಂಕ್ರಪ್ಪ ಗೊಂದೆನೂರ, ಸಿದ್ದಣ್ಣಗೌಡ ಗೂಗಲ್, ಖಾಜಾ ಮೈನೋದ್ದಿನ್, ಲಕ್ಕಪ್ಪ ಮಲ್ಲಾಬಾದಿ ಇದ್ದರು. ಲಕ್ಷ್ಮಣ ಲಾಳಸೇರಿ ಕಾರ್ಯಕ್ರಮ ನಿರ್ವಹಿಸಿದರು.--------
9ವೈಡಿಆರ್10: ಶಹಾಪುರ ನಗರದ ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮನ್ನು ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಉದ್ಘಾಟಿಸಿದರು.------
9ವೈಡಿಆರ್11: ಶಹಾಪುರ ನಗರದ ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದಲ್ಲಿ ಜರುಗಿದ ಜಿಲ್ಲಾ ಮಟ್ಟ ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು.