- ಆದಿತ್ಯ ಗುರುಕುಲಂ ಶಾಲೆ ಕಾರ್ಯಕ್ರಮದಲ್ಲಿ ಅಭಿನವ ಗವಿಸಿದ್ದೇಶ್ವರ ಶ್ರೀ ಸಲಹೆ
ಕನ್ನಡಪ್ರಭ ವಾರ್ತೆ ಹೊನ್ನಾಳಿ
ಮಕ್ಕಳಿಗೆ ಶಾಲೆ ಮತ್ತು ಮನೆಯಲ್ಲಿ ಕಡ್ಡಾಯವಾಗಿ ನೈತಿಕ ಶಿಕ್ಷಣವನ್ನು ಕಲಿಸಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ ಎಂದು ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ಡಾಮೀಜಿ ನುಡಿದರು.ಪಟ್ಟಣದ ಹೊರವಲಯದ ಬಲಮುರಿ ಕ್ರಾಸ್‌ನ ಆದಿತ್ಯ ಗುರುಕುಲಂ ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ಹೊಸ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಅಕ್ಷರಾಭ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಮಾಜಿ ಸಂಸದ ಆಯನೂರು ಮಂಜುನಾಥ್ ಮಾತನಾಡಿ, ಜಿ.ಮರಿಗೌಡ ಅವರು ಶಿಕ್ಷಣ ಪ್ರೇಮಿಗಳು. ಗ್ರಾಮೀಣ ಭಾಗದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಸದುದ್ದೇಶದಿಂದ ಆದಿತ್ಯ ಗುರುಕುಲಂ ಶಾಲೆ ಪ್ರಾರಂಭ ಮಾಡಿದ್ದಾರೆ. ಸುಸಜ್ಜಿತ ಕಟ್ಟಡ ನಿರ್ಮಾಣದ ಜೊತೆಗೆ ನಾಗಾಲ್ಯಾಂಡ್, ಕೇರಳಗಳಿಂದ ತರಬೇತಿ ಹೊಂದಿದ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣದ ವ್ಯವಸ್ಥೆ ಮಾಡುತ್ತಿದ್ದಾರೆ. ಪೋಷಕರು ಹೆಚ್ಚಾಗಿ ಈ ಸಂಸ್ಥೆಗೆ ಸಲಹೆ- ಸಹಕಾರ ನೀಡಬೇಕೆಂದು ವಿನಂತಿಸಿದರು.
ಶಾಲೆಗೆ ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ಡಾಮೀಜಿ ಅಕ್ಷರಾಭ್ಯಾಸ ಮಾಡಿಸಿದರು. ಶಿವಮೊಗ್ಗದ ಜಿಪಂ ಮಾಜಿ ಅಧ್ಯಕ್ಷ ಬಸವರಾಜಪ್ಪ, ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್, ಮುಖಂಡರಾದ ಎಚ್.ಎ. ಉಮಾಪತಿ, ಸಣ್ಣಕ್ಕಿ ಬಸವನಗೌಡ, ಗುಳೇದಹಳ್ಳಿ ವಿಶ್ವನಾಥ ಗೌಡ ಪಾಟೀಲ್, ಸಂಸ್ಥೆಯ ಪ್ರಾಂಶುಪಾಲ ಪರಮೇಶ್, ನಿವೃತ್ತ ಪ್ರಾಂಶುಪಾಲ ಡಿ.ಪಿ. ರಂಗನಾಥ್, ಎಡಿವಿಎಸ್ ಸಂಸ್ಥೆ ಪ್ರಾಂಶುಪಾಲ ಎಚ್.ಬಿ. ಗಣಪತಿ, ಹರ್ಲಕಟ್ಟಿ ಶಿವಕುಮಾರ್, ಅಂದಾನಿ ಗಂಗಾಧರ್, ಕೋರಿ ಪುಟ್ಟಣ್ಣ, ಕೋರಿ ಚನ್ನೇಶ್, ಜಗದೀಶ್ ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.
-1ಎಚ್.ಎಲ್.ಐ1.ಜೆಪಿಜಿ: