ದಾಬಸ್‍ಪೇಟೆ: ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಸಮಾಜದಲ್ಲಿ ಬದುಕುವ ಹಾದಿಯನ್ನು ಕಲಿಯುವುದು ಮುಖ್ಯವಾಗಿದ್ದು ತಮ್ಮ ಏಕಾಗ್ರತೆಗೆ ಅಡ್ಡಿಯಾಗುವ ಎಲ್ಲ ಆಕರ್ಷಣೆಗಳನ್ನು ಮೀರಿ ಗುರಿ ಸಾಧಿಸಿದಾಗ ಮಾತ್ರ ಯಶಸ್ಸು ನಮ್ಮದಾಗುತ್ತದೆ ಎಂದು ಬಸವಣ್ಣದೇವರ ಮಠದ ಶ್ರ್ರೀ ಸಿದ್ದಲಿಂಗ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಕುಮಾರಸ್ವಾಮಿ ಮಾತನಾಡಿ, ಪದವಿ ಹಂತದ ವಿದ್ಯಾರ್ಥಿಗಳು ಕಾಟಾಚಾರಕ್ಕೆ ವಿದ್ಯಾಭ್ಯಾಸ ಮಾಡಬಾರದು. ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಜೀವನದಲ್ಲಿ ಪ್ರಮುಖವಾದ ಘಟ್ಟವಾಗಿದ್ದು, ಈ ಹಂತದಲ್ಲಿ ದಾರಿ ತಪ್ಪುವ ಕೆಲಸ ಮಾಡದೆ ಪದವಿ ವಿದ್ಯಾಭ್ಯಾಸ ಮುಗಿಸಿದಂತಹ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಮತ್ತು ಜೀವನದಲ್ಲಿ ಅವರ ಜವಾಬ್ದಾರಿ ಹೆಚ್ಚಾಗುತ್ತದೆ ಎಂದರು.
ಹಿನ್ನೆಲೆ ಗಾಯಕ ಕಡಬಗೆರೆ ಮುನಿರಾಜು ಮಾತನಾಡಿ, ಇತ್ತೀಚಿನ ಆಧುನಿಕ ಯುಗದಲ್ಲಿ ಯುವಜನತೆ ನಮ್ಮ ಆಚಾರ ವಿಚಾರ ಸಂಸ್ಕಾರ ಸಂಸ್ಕøತಿಗಳನ್ನು ಮರೆಯುತ್ತಿದ್ದಾರೆ. ಕೇವಲ ಅಧಿಕಾರ, ಹಣದಾಸೆಗಾಗಿ ನೆಮ್ಮದಿಯನ್ನು ಕಳೆದುಕೊಂಡು ಜೀವನ ಸಾಗಿಸುತ್ತಿದ್ದಾರೆ. ವಿದ್ಯಾರ್ಥಿಗಳಾದ ನೀವು ಆಧುನಿಕತೆಯ ಜೊತೆಗೆ ನಮ್ಮ ಹಿಂದಿನ ಪೀಳಿಗೆಯ ಆಚಾರ ವಿಚಾರಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುವಂತೆ ಕರೆ ನೀಡಿದರು.ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯೆ ಜಯಮ್ಮ, ಜ್ಞಾನ ಸಂಗಮ ಕಾಲೇಜಿನ ಅಧ್ಯಕ್ಷ ಕುಮಾರಸ್ವಾಮಿ, ಕಾರ್ಯದರ್ಶಿ ಸುಜಾತಕುಮಾರಸ್ವಾಮಿ ಉಪಾಧ್ಯಕ್ಷ ಜಗದೀಶ್, ಜಿಪಂ ಮಾಜಿ ಸದಸ್ಯ ಶಿವರುದ್ರಪ್ಪ, ಸೋಂಪುರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಾಗರುದ್ರಶರ್ಮಾ, ವಿಎಸ್ ಎಸ್ ಎನ್ ಅಧ್ಯಕ್ಷ ಚಂದ್ರಶೇಖರಯ್ಯ, ವೀರಶೈವ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಾಗರಾಜು, ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಮಂಜುನಾಥ್, ನಿಸರ್ಗ ಚಾರಿಟೇಬಲ್ ಅಧ್ಯಕ್ಷ ಶ್ರೀನಾಥ್ ಮೂರ್ತಿ, ಸ್ತ್ರೀಒಕ್ಕೂಟದ ಜಿಲ್ಲಾಧ್ಯಕ್ಷೆ ವೇದಾವತಿ, ಶಿಕ್ಷಣ ಸಂಸ್ಥೆಯ ಮುಖ್ಯಸ್ಥರುಗಳಾದ ವಿರುಪಾಕ್ಷಯ್ಯ, ಅಂಚೆಮನೆ ರಾಜಶೇಖರ್, ರಿಶ್ವಂತ್ ರಾಮ್, ವಕೀಲ ಚಂದಿರಧರ, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪೋಟೋ 3 : ದಾಬಸ್‍ಪೇಟೆಯ ಜ್ಞಾನಸಂಗಮ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜ್ಞಾನ ಸಂಪದ-2025 ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಬಸವಣ್ಣದೇವರ ಮಠದ ಶ್ರ್ರೀ ಸಿದ್ದಲಿಂಗ ಸ್ವಾಮೀಜಿ ಹಾಗೂ ಗಣ್ಯರು ಉದ್ಘಾಟಿಸಿದರು.