ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿನಕುರಳಿ ಗ್ರಾಮದ ಎಸ್‌ಟಿಜಿ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಸಂಜೆ ನಡೆದ ಸಂಸ್ಕೃತಿ ಸಮಾಗಮ ಶಾಲಾ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ತಾಂತ್ರಿಕತೆ, ಟಿವಿ ಮಾಧ್ಯಮ ಹಾಗೂ ಸೋಷಿಯಲ್ ಮೀಡಿಯಾ ಹಾವಳಿಗೆ ಮಕ್ಕಳು ಸಿಲುಕಿ ಮಾನವೀಯ ಮೌಲ್ಯಗಳ ಜತೆಗೆ ಪರಸ್ಪರ ಪ್ರೀತಿಸುವುದನ್ನೇ ಮರೆಯುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಪೋಷಕರು ಹಣದ ಹಿಂದೆ ಓಡುವುದನ್ನು ಬಿಟ್ಟು ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಂಡು ಅವರೊಳಗಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು. ಮಕ್ಕಳನ್ನು ಬೆಳೆಸುವ ಜತೆಗೆ ಪೋಷಕರು ಬೆಳೆಯುವ ಕೆಲಸಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಜನರನ್ನು ಪ್ರೀತಿಸುವ ಹೃದಯವಂತಿಕೆ ಬೆಳೆಸಿಕೊಂಡಿದ್ದಾರೆ. ತಾವು ಹುಟ್ಟಿದ ಊರಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಉತ್ತಮ ಪರಿಸರದಲ್ಲಿ ಶಿಕ್ಷಣ ಸಂಸ್ಥೆ ಆರಂಭಿಸಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಕೆಲಸ ಮಾಡುತ್ತಿದ್ದಾರೆ ಎಂದು ಬಣ್ಣಿಸಿದರು.
ನಾನು ಸಾರ್ವಜನಿಕ ಕ್ಷೇತ್ರದಲ್ಲಿ ಶಾಸಕನಾಗಿ ಕೆಲಸಮಾಡುವ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಕೆಲಸ ಮಾಡಿದ್ದೇನೆ, ತಾಲೂಕಿಗೆ 12 ಪ್ರೌಢಶಾಲೆ, 5 ಪದವಿ ಪೂರ್ವ ಕಾಲೇಜು, 3 ಡಿಗ್ರಿ ಕಾಲೇಜು, ಹೋಬಳಿಗೆ ಎರಡು ವಸತಿ ಶಾಲೆಗಳನ್ನು ಆರಂಭಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವಾಗಿದ್ದೇನೆ ಎಂದು ತಿಳಿಸಿದರು.
ಇದೇ ವೇಳೆ ಚಿತ್ರನಟ ಅರುಣ್ ಸಾಗರ್ ಅವರನ್ನು ಅಭಿನಂದಿಸಲಾಯಿತು. ಸಮಾರಂಭದಲ್ಲಿ ಸಂಸ್ಥೆಯ ಸಿಇಒ ಸಿ.ಪಿ.ಶಿವರಾಜು, ಆಡಳಿತಾಧಿಕಾರಿ ನಿವೇದಿತ ನಾಗೇಶ್, ಪ್ರಾಂಶುಪಾಲರಾದ ಮಾಚಮ್ಮ, ಉಪಪ್ರಾಂಶುಪಾಲ ಲಿಂಗರಾಜು, ಅನಂತು, ಜಿಪಂ ಮಾಜಿ ಸದಸ್ಯ ಸಿ.ಅಶೋಕ್, ಮನ್ ಮುಲ್ ನಿರ್ದೇಶಕ ಸಿ.ಶಿವಕುಮಾರ್ ಸೇರಿದಂತೆ ಹಲವರು ಇದ್ದರು.