ಮರಿಯಮ್ಮನಹಳ್ಳಿ: ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಜೊತೆಗೆ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಉತ್ತಮ ಶಿಕ್ಷಣ ನೀಡಲ ಅತ್ಯಂತ ಕಾಳಜಿ ವಹಿಸಬೇಕು ಎಂದು ಶಾಸಕ ಕೆ. ನೇಮರಾಜ್ ನಾಯ್ಕ ಹೇಳಿದರು.ಪಟ್ಟಣದ ಗಣೇಶ್ ಮಲ್ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ಸಿಂಧನೂರು ಶಾಖೆಯ ಸಿಂಧು ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದವರು ಹಮ್ಮಿಕೊಂಡಿದ್ದ ಸಿಂಧು ಶಿಶು ಕಲ್ಯಾಣ ಠೇವಣೆ ಯೋಜನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಿಂಧು ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದವರು ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದ ವಿಷಯಲ್ಲಿ ವಿಧ್ಯಾಭ್ಯಾಸ ಮಾಡುವ 1ನೇ ತರಗತಿಯ ಆಯ್ದ 25 ವಿದ್ಯಾರ್ಥಿನಿಯರಿಗೆ ತಲಾ 5000 ಠೇವಣಿ ಇಡುವುದರಿಂದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ಉಪಯೋಗವಾಗುಂತ ಕೆಲಸ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಅವರು ಹೇಳಿದರು.
ಪದಶ್ರೀ ಪ್ರಶಸ್ತಿ ಪುರಸ್ಕೃತೆ ಮಾತಾ ಮಂಜಮ್ಮ ಜೋಗತಿ ಮಾತನಾಡಿ, ಸರ್ಕಾರದ ಜೊತೆಗೆ ಸಂಘ-ಸಂಸ್ಥೆಗಳು ಹಾಗೂ ಸೌಹಾರ್ದ ಸಹಕಾರಿ ಸಂಘಗಳು ಸಮಾಜಮುಖಿ ಕಾರ್ಯಯದಲ್ಲಿ ತೊಡಗಿಕೊಂಡು ಉತ್ತಮ ಕೆಲಸ ಮಾಡುತ್ತಿರುವುದು ಬಡ ವಿದ್ಯಾರ್ಥಿಗಳ ನೆರವಿಗೆ ಮುಂದಾಗಿರುವುದು ಸಂತೋಷದ ವಿಷಯವಾಗಿದೆ ಎಂದರು.ಕನ್ನಡ ಉಳಿಯಬೇಕು. ಕನ್ನಡ ಬೆಳೆಯಬೇಕೆಂದರೆ ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮದಲ್ಲಿ 1ರಿಂದ 10 ತರಗತಿಯವರೆಗೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಕೊಡಿಸಲು ಮುಂದಾಗಬೇಕು. ಆಗ ಕನ್ನಡ ಉಳಿಯಲು ಸಾಧ್ಯವಾಗುತ್ತಿದೆ ಎಂದು ಅವರು ಹೇಳಿದರು.
ಸಿಂಧು ಕ್ರೆಡಿಟ್ ಸೌಹಾರ್ದ ಸಹಕಾರಿ ಅಧ್ಯಕ್ಷ ಬಿ.ರಾಜಶೇಖರ್, ಹೋಸಪೇಟೆ ಕ್ಷೇತ್ರ ಶಿಕ್ಷಾಣಾಧಿಕಾರಿ ಶೇಖರಪ್ಪ ಹೊರಪೇಟೆ, ಶಾಲಾ ಮುಖ್ಯಗುರುಗಳಾದ ಸಿ.ಬಸಮ್ಮ, ಸ್ಥಳೀಯ ಮುಖಂಡ ಆರ್.ಸಂತೋಷಕುಮಾರ್ ಜೈನ್, ಸೌಹಾರ್ದ ಸಿಬ್ಬಂದಿ ವರ್ಗದವರು, ಶಾಲೆಯ ಸಿಬ್ಬಂದಿ ವರ್ಗದವರು, ವಿಧ್ಯಾರ್ಥಿಗಳು ಹಾಗೂ ಪಟ್ಟಣದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.