ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದಲ್ಲಿ ಗಾಂಧಿ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳನ್ನು ಭೂಮಿ ತಾಯಿ ಎಂದು ಕರೆಯುತ್ತೇವೆ. ಹೀಗಾಗಿ ಆ ಹೆಣ್ಣಿಗೆ ಗೌರವ ಕೊಡಬೇಕೆಂದು ಇಂದಿರಾಗಾಂಧಿ ಹೇಳುತ್ತಿದ್ದರು. ದೇಶದಲ್ಲಿ ಜಾತಿ ಸಮಸ್ಯೆ ಎದುರಿಸುವುದೇ ಬಹಳ ದೊಡ್ಡ ಸವಾಲು ಎಂದು ಇಂದಿರಾಗಾಂಧಿ ಹೇಳಿದ್ದರು ಎಂದು ನೆನಪಿಸಿದರು.
ನಾಡಿನ ತಾಯಿ ಚಾಮುಂಡೇಶ್ವರಿ, ತಾಯಿ ಕಾವೇರಿ ಪೂಜಿಸಲ್ಪಡುತ್ತಿದ್ದಾರೆ. ಹೀಗಿರುವಾಗ ಬಿಜೆಪಿಯ ಮೈತ್ರಿ ಪಕ್ಷವಾದ ಜೆಡಿಎಸ್ ನ ಕುಮಾರಸ್ವಾಮಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆ ಟೀಕಿಸಿದ್ದಾರೆ ಎಂದು ಬೊಟ್ಟು ಮಾಡಿದರು.ತಾಯಂದಿರ ಮನೆ ಬೆಳಗಬೇಕು ಎಂಬುದೇ ಕಾಂಗ್ರೆಸ್ ಗುರಿಯಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮಹಿಳೆಯರಿಗೆ ಸೂಕ್ತ ಗೌರವ ನೀಡಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರಿಗೆ ಕಾಂಗ್ರೆಸ್ ಶಕ್ತಿ ತುಂಬುವ ಕೆಲಸ ಮಾಡಿದೆ. ಇಂಥ ಯೋಜನೆ ಬಗ್ಗೆ ಕುಮಾರಸ್ವಾಮಿ ಟೀಕೆ ಮಾಡುತ್ತಿದ್ದಾರೆ. ಯೋಜನೆಯಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆ ಮಾನವ ಕುಲಕ್ಕೇ ಅವಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬದುಕನ್ನು ಬದಲಾಯಿಸಲು ಕಾಂಗ್ರೆಸ್ ಶಕ್ತವಾಗಿದೆ - 1.20 ಕೋಟಿ ಕುಟುಂಬದವರಿಗೆ ಗ್ಯಾರಂಟಿ ಯೋಜನೆ ಸಿಕ್ಕಿದೆ. ಇವರೆಲ್ಲಾ ದಾರಿ ತಪ್ಪುತ್ತಿದ್ದಾರೆಯೇ ಕುಮಾರಸ್ವಾಮಿಯವರೇ ಎಂದು ಪ್ರಶ್ನಿಸಿದ ಅವರು, ಗ್ಯಾರಂಟಿ ಯೋಜನೆಯನ್ನು ಸಮರ್ಥವಾಗಿ ಜಾರಿಗೊಳಿಸುವ ಮೂಲಕ ಕಾಂಗ್ರೆಸ್ ರಾಜಕೀಯ ಬದ್ದತೆ ಮೆರೆದಿದ್ದೇವೆ ಎಂದರು.