ಬೆಲೆ ಏರಿಕೆ ನಿಯಂತ್ರಿಸದ ಬಿಜೆಪಿಗೆ ಪಾಠ ಕಲಿಸಿ-ಶಾಸಕ ಶಿವಣ್ಣನವರ

KannadaprabhaNewsNetwork |  
Published : Apr 02, 2024, 01:02 AM IST
೧ಎಚ್‌ವಿಆರ್೭ | Kannada Prabha

ಸಾರಾಂಶ

ಬೆಲೆ ಏರಿಕೆ ನಿಯಂತ್ರಿಸದೇ ಕೋಮು ಭಾವನೆಗಳನ್ನು ಪ್ರಚೋದಿಸಿ ಅಧಿಕಾರಕ್ಕೇರಿದ ಬಿಜೆಪಿಗೆ ಈ ಬಾರಿ ತಕ್ಕ ಪಾಠ ಕಲಿಸುವ ಜೊತೆಗೆ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಬದುಕನ್ನು ಗಟ್ಟಿಗೊಳಿಸಿದ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಅಮೂಲ್ಯ ಮತ ನೀಡಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಹಾವೇರಿ:ಬೆಲೆ ಏರಿಕೆ ನಿಯಂತ್ರಿಸದೇ ಕೋಮು ಭಾವನೆಗಳನ್ನು ಪ್ರಚೋದಿಸಿ ಅಧಿಕಾರಕ್ಕೇರಿದ ಬಿಜೆಪಿಗೆ ಈ ಬಾರಿ ತಕ್ಕ ಪಾಠ ಕಲಿಸುವ ಜೊತೆಗೆ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಬದುಕನ್ನು ಗಟ್ಟಿಗೊಳಿಸಿದ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಅಮೂಲ್ಯ ಮತ ನೀಡಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.ಸಮೀಪದ ದೇವಗಿರಿಯಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಮತಯಾಚಿಸಿ ಅವರು ಮಾತನಾಡಿದರು.ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿರುವುದು ಅಷ್ಟೇ ಅಲ್ಲದೇ ಸರ್ವರನ್ನು ಸಮಭಾವದಿಂದ ಕಾಣುವ ಕಾಂಗ್ರೆಸ್ ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಿದರೆ ಮಾತ್ರ ನಮಗೆ ಉಜ್ವಲ ಭವಿಷ್ಯವಿದೆ ಎಂದರು. ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ತಮ್ಮ ಮತಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೂ ಕೆಲವರು ಬೆಲೆ ಕಟ್ಟಲು ಮುಂದೆ ಬರಬಹುದು. ಈ ಹಿನ್ನೆಲೆಯಲ್ಲಿ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ತಮ್ಮ ಮತವನ್ನು ನನಗೆ ನೀಡಿ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಾನಪ್ಪ ಚೂರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಸವರಾಜ ಹೆಡಿಗೊಂಡ, ರಮೇಶ ಆನವಟ್ಟಿ ಮಾತನಾಡಿದರು. ಶಿವನಗೌಡ ಪಾಟೀಲ, ಸುರೇಶಗೌಡ ಪಾಟೀಲ, ವೀರೇಶ ಮತ್ತಿಹಳ್ಳಿ, ಹನುಮಂತಗೌಡ ಕಟ್ಟೆಗೌಡ್ರ, ಹೊಳಿಯಪ್ಪ ಸೂರದ, ರುದ್ರಪ್ಪ ಕಾಳಪ್ಪನವರ, ಜಗದೀಶ ಮನ್ನಂಗಿ, ಅಸ್ಲಾಂ ಶೇತಸನದಿ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ