ಮುಂದಿನ ಪೀಳಿಗೆಗೆ ಕನ್ನಡದ ಮಹತ್ವ ತಿಳಿಸಿಕೊಡಿ: ಡಾ.ನಿಂಗರಾಜ್‌ಗೌಡ

KannadaprabhaNewsNetwork |  
Published : Nov 23, 2026, 01:30 AM IST
೨೨ಕೆಎಂಎನ್‌ಡಿ-೪ಮಂಡ್ಯದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಡಾ.ಜೀ.ಶಂ.ಪ ಸಾಹಿತ್ಯ ವೇದಿಕೆ ವತಿಯಿಂದ ೭೧ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಅಭಿನಂದಿಸಲಾಯಿತು. | Kannada Prabha

ಸಾರಾಂಶ

ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ವಿಶ್ವದ ಲಿಪಿಗಳ ರಾಣಿ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಜಗತ್ತಿನಲ್ಲಿರುವ ೩ ಸಾವಿರ ಭಾಷೆಗಳಲ್ಲಿ ಕೇವಲ ೧೫೦ಕ್ಕೂ ಹೆಚ್ಚು ಭಾಷೆಗಳಿಗೆ ಮಾತ್ರ ಲಿಪಿ ಇದೆ. ಅದರಲ್ಲಿ ಕನ್ನಡ ಭಾಷೆ ಅತ್ಯಂತ ಸುಂದರ ಭಾಷೆ. ಆದರ್ಶ ಭಾಷೆ. ಹತ್ತಾರು ಲಿಪಿಗಳ ನಡುವೆಯೂ ಕನ್ನಡ ಗೊತ್ತಿಲ್ಲದವರೂ ಸಹ ಇದನ್ನು ಸುಂದರ ಲಿಪಿ ಎಂದು ತೋರಿಸುತ್ತಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮಕ್ಕಳಿಗೆ ಕನ್ನಡ ಭಾಷೆಯನ್ನು ಕಲಿಸುವುದರ ಜೊತೆಗೆ ಅದರ ಮಹತ್ವವನ್ನೂ ತಿಳಿಸಿಕೊಟ್ಟಾಗ ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಲು ಸಾಧ್ಯ ಎಂದು ಮೈಸೂರು ವಿಭಾಗದ ಬಿಜೆಪಿ ಸಹ ಪ್ರಭಾರಿ ಡಾ.ಈ.ಸಿ.ನಿಂಗರಾಜ್‌ಗೌಡ ತಿಳಿಸಿದರು.

ನಗರದ ಗಾಂಧಿ ಭವನದಲ್ಲಿ ಡಾ.ಜೀ.ಶಂ.ಪ ಸಾಹಿತ್ಯ ವೇದಿಕೆ ವತಿಯಿಂದ ೭೧ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಭಾನುವಾರ ಆಯೋಜಿಸಲಾಗಿದ್ದ ಕನ್ನಡ ಹಬ್ಬ, ೧೯ನೇ ಅಖಿಲ ಕರ್ನಾಟಕ ಕನ್ನಡ ಅಕ್ಷರ ಜಾತ್ರೆ, ವಿವಿಧ ಪ್ರಶಸ್ತಿ ಪ್ರದಾನ ಹಾಗೂ ಕವಿಗೋಷ್ಠಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ವಿಶ್ವದ ಲಿಪಿಗಳ ರಾಣಿ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಜಗತ್ತಿನಲ್ಲಿರುವ ೩ ಸಾವಿರ ಭಾಷೆಗಳಲ್ಲಿ ಕೇವಲ ೧೫೦ಕ್ಕೂ ಹೆಚ್ಚು ಭಾಷೆಗಳಿಗೆ ಮಾತ್ರ ಲಿಪಿ ಇದೆ. ಅದರಲ್ಲಿ ಕನ್ನಡ ಭಾಷೆ ಅತ್ಯಂತ ಸುಂದರ ಭಾಷೆ. ಆದರ್ಶ ಭಾಷೆ. ಹತ್ತಾರು ಲಿಪಿಗಳ ನಡುವೆಯೂ ಕನ್ನಡ ಗೊತ್ತಿಲ್ಲದವರೂ ಸಹ ಇದನ್ನು ಸುಂದರ ಲಿಪಿ ಎಂದು ತೋರಿಸುತ್ತಾರೆ. ಕನ್ನಡದ ಬಗ್ಗೆ ಅಭಿಮಾನ ಬೆಳೆಯಲು ಇದಕ್ಕಿಂತ ಇನ್ನೇನು ಬೇಕು ಎಂದರು.

ಕನ್ನಡ ಭಾಷೆಯನ್ನು ಜನರು ಹೆಚ್ಚೆಚ್ಚು ಮಾತನಾಡಬೇಕು. ಆಗ ಮಕ್ಕಳು ಕನ್ನಡವನ್ನು ಮಾತನಾಡುತ್ತಾರೆ, ಕಲಿಯುತ್ತಾರೆ. ಆಗ ಭಾಷೆಯೂ ಸುಲಭವಾಗಿ ಬೆಳವಣಿಗೆ ಕಾಣುತ್ತದೆ. ಕನ್ನಡಿಗರು ಮೊದಲು ಭಾಷಾಭಿಮಾನಿಗಳಾಗಬೇಕು. ಕನ್ನಡ ಭಾಷೆಯ ಬೆಳವಣಿಗೆಗೆ ಟೊಂಕಕಟ್ಟಿ ನಿಲ್ಲಬೇಕು ಎಂದರು.

ನಾಡು, ನುಡಿ, ನೆಲ, ಜಲ ಮತ್ತು ಸಂಸ್ಕೃತಿಯ ಗೌರವವನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಕರ್ನಾಟಕದಲ್ಲೇ ಅತಿ ಹೆಚ್ಚು ಕನ್ನಡ ಬಳಕೆಯಾಗುವುದು ನಮ್ಮ ಮಂಡ್ಯ ಜಿಲ್ಲೆಯಲ್ಲಿ. ಜ್ಞಾನ ಎನ್ನುವುದು ಎಲ್ಲಾ ಭಾಷೆಯಲ್ಲೂ ಇದೆ. ಇತರೆ ಭಾಷೆಗಳನ್ನು ಜ್ಞಾನಕ್ಕೆ ಬಳಸಿಕೊಂಡು ಮಾತನಾಡಲು ಕನ್ನಡ ಭಾಷೆಯನ್ನು ಬಳಸುವಂತೆ ಕಿವಿಮಾತು ಹೇಳಿದರು.

ಕನ್ನಡ ಕಂಪನ್ನು ವಿದೇಶದಲ್ಲೂ ಅಲ್ಲಿನ ಕನ್ನಡಿಗರು ಬೆಳೆಸುತ್ತಿದ್ದಾರೆ. ಹಲವು ದೇಶದಲ್ಲಿ ಕನ್ನಡ ಸಂಘಗಳನ್ನು ಕಟ್ಟಿಕೊಂಡಿದ್ದಾರೆ. ನಮ್ಮ ರಾಜ್ಯದಲ್ಲಿ ಇರುವವರು ಮಕ್ಕಳಿಗೆ ಇಂಗ್ಲಿಷ್ ಕಲಿಸಿದರೆ, ವಿದೇಶಿ ಕನ್ನಡಿಗರು ತಮ್ಮ ಮಕ್ಕಳಿಗೆ ಇಲ್ಲಿಂದ ಪುಸ್ತಕಗಳನ್ನು ಅಲ್ಲಿಗೆ ತರಿಸಿಕೊಂಡು ಕನ್ನಡವನ್ನು ತಮ್ಮ ಮಕ್ಕಳಿಗೆ ಕಲಿಸುತ್ತಿದ್ದಾರೆ. ಇದಕ್ಕೆ ಅವರಿಗೆ ವಿಶೇಷ ಅಭಿನಂದನೆ ಎಂದರು.

ಉದ್ಯಮಿ ಡಿ.ಕೃಷ್ಣ ಮಾತನಾಡಿ, ಕನ್ನಡ ಭಾಷೆ ಯಶಸ್ವಿಯಾಗಿ ಬೆಳೆಯಲು ಅನೇಕ ಮಹನೀಯರು, ಕವಿಗಳು ಕಾರಣೀಭೂತರಾಗಿದ್ದಾರೆ. ಕುವೆಂಪು, ಬೇಂದ್ರೆ, ಶಿವರಾಮ ಕಾರಂತ ಸೇರಿದಂತೆ ಹತ್ತಾರು ಸಾಹಿತಿಗಳು, ಹೋರಾಟಗಾರರು, ಸಂಘಟಕರು ಕನ್ನಡವನ್ನು ಕಟ್ಟಿ ಬೆಳೆಸಿದ್ದಾರೆ ಎಂದು ಸ್ಮರಿಸಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಉದ್ಯಮಿ ಡಿ.ಕೃಷ್ಣ, ಕನ್ನಿಕಾ ಶಿಲ್ಪ ನವೋದಯ ಟ್ರಸ್ಟ್‌ನ ಎಚ್.ಆರ್.ಕನ್ನಿಕಾ, ಲೇಖಕರಾದ ನಾಗೇಂದ್ರ ಮತ್ತೀಘಟ್ಟ, ಶಿಲ್ಪ ಮುತ್ತು ಹಾಗೂ ಜಿಲ್ಲಾ ಕುರುಬರ ಸಂಘದ ಮಾಜಿ ಅಧ್ಯಕ್ಷ ದೊಡ್ಡಯ್ಯ ಅವರಿಗೆ ಕರ್ನಾಟಕ ಸೇವಾ ಭೂಷಣ ಪ್ರಶಸ್ತಿ, ಸಾಹಿತ್ಯ ಕ್ಷೇತ್ರದಿಂದ ಮಂಜುಳಾ ರಾಜೇಶ್ವರಿ, ಮುಬಾರಕ್ ರಶೀದ್, ಸಿ.ಚೌಡಯ್ಯ, ಸಮಾಜ ಸೇವಾ ಕ್ಷೇತ್ರದಿಂದ ಆನಂದ್ ಸಿ.ತಿರುಮಲ ಅವರಿಗೆ ಕನ್ನಡ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಹಾಗೂ ಸಾಹಿತಿ ಬನ್ನಂಗಾಡಿ ಸಿದ್ದಲಿಂಗಯ್ಯ, ಡಾ.ಜೀಶಂಪ ಸಾಹಿತ್ಯ ವೇದಿಕೆ ಅಧ್ಯಕ್ಷ ಎಸ್.ಕೃಷ್ಣ ಸ್ವರ್ಣಸಂದ್ರ, ಪ್ರಧಾನ ಕಾರ್ಯದರ್ಶಿ ಶಿವಣ್ಣ ಮಂಗಲ, ಮಹಿಳಾ ಕಾರ್ಯದರ್ಶಿ ನೇತ್ರಾವತಿ ಗೌಡ, ಕಾರ್ಯದರ್ಶಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತಾರಾಷ್ಟ್ರೀಯ ಸಮ್ಮೇಳನ ಯಶಸ್ವಿ
ಸರ್ಕಾರದ ಅನುದಾನದ ಜೊತೆಗೆ ದಾನಿಗಳ ನೆರವು ಪಡೆಯಿರಿ: ವಿಜಯ ಮಾನೆ