ಉಗುರು ಕಟ್ ಮಾಡಲಿಲ್ಲವೆಂದು ಶಿಕ್ಷಕಿ ದೌರ್ಜನ್ಯ: ದೂರು

KannadaprabhaNewsNetwork |  
Published : Nov 07, 2024, 11:58 PM ISTUpdated : Nov 07, 2024, 11:59 PM IST
೭ಕೆಎಂಎನ್‌ಡಿ-೩ಶ್ರೀರಂಗಪಟ್ಟಣದ ನ್ಯೂ ಆಕ್ಸ್‌ಫರ್ಡ್ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ದೌರ್ಜನ್ಯ ನಡೆಸಿರುವುದಾಗಿ ಪೋಷಕರ ದೂರಿನನ್ವಯ ಮಕ್ಕಳ ರಕ್ಷಣಾ ಘಟಕ ಅಧಿಕಾರಿಗಳ ಭೇಟಿ ನೀಡಿ ಪರಿಶೀಲಿಸಿದರು. | Kannada Prabha

ಸಾರಾಂಶ

ಶ್ರೀರಂಗಪಟ್ಟಣದ ನ್ಯೂ ಆಕ್ಸ್‌ಫರ್ಡ್ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ದೌರ್ಜನ್ಯ ನಡೆಸಿರುವುದಾಗಿ ಪೋಷಕರ ದೂರಿನನ್ವಯ ಮಕ್ಕಳ ರಕ್ಷಣಾ ಘಟಕ ಅಧಿಕಾರಿಗಳ ಭೇಟಿ ನೀಡಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಉಗುರು ಕಟ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯ ಕೈಯಿಂದ ರಕ್ತ ಬರುವ ರೀತಿ ಉಗುರು ಕಟ್ ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂದು ಪೊಷಕರು ಆರೋಪಿಸಿ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿದ್ದಾರೆ.

ಪಟ್ಟಣದ ನ್ಯೂ ಆಕ್ಸ್‌ಫರ್ಡ್ ಖಾಸಗಿ ಶಾಲೆಯ ಆರನೇ ತರಗತಿಯ ಮಹಾಲಕ್ಷ್ಮಿ ಎಂಬ ವಿದ್ಯಾರ್ಥಿನಿಗೆ ಶಿಕ್ಷಕಿ ಗೀತಾ ಎಂಬುವವರು ವಿದ್ಯಾರ್ಥಿನಿಗೆ ಕೈಗೆ ಹೊಡೆದು ರಕ್ತ ಬರುವಂತೆ ಉಗುರು ಕಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿನಿ ಹಾಗೂ ಪೋಷಕರು ಪೊಲೀಸ್ ಠಾಣೆ ಮತ್ತು ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿದ್ದು, ಪೋಷಕರ ದೂರಿನನ್ವಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕರ್ನಾಟಕ ಸಂಘದಿಂದ ನ.೧೧ರಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕನ್ನಡಪ್ರಭ ವಾರ್ತೆ ಮಂಡ್ಯ

ಕರ್ನಾಟಕ ಸಂಘದಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನ.೧೧ರಂದು ಸಂಜೆ ೪ ಗಂಟೆಗೆ ನಗರದ ಸ್ವಾಮಿ ವಿವೇಕಾನಂದ ರಂಗ ಮಂದಿರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ತಿಳಿಸಿದರು.

ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಲಿದ್ದು, ಕೊಮ್ಮೇರಹಳ್ಳಿಯ ವಿಶ್ವಮಾನವ ಕ್ಷೇತ್ರದ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಾಜಿ ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪ್ರಶಸ್ತಿ ಪ್ರದಾನ ಮಾಡುವರು, ಜಿಲ್ಲಾಧಿಕಾರಿ ಡಾ.ಕುಮಾರ ಸಂಚಿಕೆ ಬಿಡುಗಡೆ ಮಾಡುವರು. ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್‌ಗೌಡ, ಸರೋಜ ತುಳಸಿದಾಸ್ ಅವರು ಅತಿಥಿಯಾಗಿ ಭಾಗವಹಿಸುವರು ಎಂದು ಹೇಳಿದರು.

ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು. ಸಂಘದ ಕಾರ್ಯದರ್ಶಿ ಚಂದಗಾಲು ಲೋಕೇಶ್ , ನಿರ್ದೇಶಕರಾದ ಮಂಜುಳಾ ಉದಯಶಂಕರ್, ಜಯರಾಮು ಮತ್ತು ಕೀಲಾರ ಶಿವರಾಜು ಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು