ಶಿಕ್ಷಕಿ ಆಶಾಗೆ ಹೊಯ್ಸಳ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

KannadaprabhaNewsNetwork |  
Published : Nov 18, 2026, 01:30 AM IST
 ನರಸಿಂಹರಾಜಪುರ ಪಟ್ಟಣದ ಕೆಪಿಎಸ್ ನ ಪ್ರಾಥಮಿಕ ಶಾಲೆಯ ಶಿಕ್ಷಕಿ ಆರ್ ಆಶಾ ಅವರನ್ನು ಹಾಸನದಲ್ಲಿ ನಡೆದ ಕನ್ನಡ ನುಡಿ ಸಮ್ಮೇಳನದಲ್ಲಿ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಕರ್ನಾಟಕ ಪಬ್ಲಿಕ್ ಸ್ಕೂಲಿನ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಯ ಹಿಂದಿ ಶಿಕ್ಷಕಿ ಆರ್. ಆಶಾ ಅವರಿಗೆ ಹೊಯ್ಸಳ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ನರಸಿಂಹರಾಜಪುರ: ಕರ್ನಾಟಕ ಪಬ್ಲಿಕ್ ಸ್ಕೂಲಿನ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಯ ಹಿಂದಿ ಶಿಕ್ಷಕಿ ಆರ್. ಆಶಾ ಅವರಿಗೆ ಹೊಯ್ಸಳ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಹಾಸನದ ಸಂಸ್ಕೃತ ಭವನದಲ್ಲಿ ಭಾನುವಾರ ಬೆಂಗಳೂರಿನ ಗಂಧದ ಗುಡಿ ಕನ್ನಡ ಸಂಘ ಮತ್ತು ಧಾರವಾಡದ ಚೇತನ ಫೌಂಡೇಷನ್ ಸಂಯುಕ್ತವಾಗಿ ನಡೆಸಿದ ಕನ್ನಡ ನುಡಿ ಸಮ್ಮೇಳನದಲ್ಲಿ ಆರ್.ಆಶಾ ಅವರ ಕಲೆ, ಪ್ರತಿಭೆ ಗುರುತಿಸಿ ಹೊಯ್ಸಳ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. 2023ರಲ್ಲಿ ಆರ್.ಆಶಾ ಅವರು ರಾಜ್ಯ ಮಟ್ಟದ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ, 2024ರಲ್ಲಿ ಜಾನಪದ ಹಾಡಿನಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಆರ್ ಆಶಾ ಅವರಿಗೆ ಹೊಯ್ಸಳ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದಕ್ಕೆ ಕೆಪಿಎಸ್‌ನ ಶಾಲಾಭಿವೃದ್ದಿ ಸಮಿತಿ, ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರು ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇನ್ನರ್ ವ್ಹೀಲ್ ಕ್ಲಬ್ ಹೆಣ್ಣುಮಕ್ಕಳ ಆರೋಗ್ಯ ಅರಿವು ಕಾರ್ಯಕ್ರಮ
ಸಿದ್ದಾಪುರ: ಗುಂಡಿ ಮುಚ್ಚದಿದ್ದರೆ ಉಗ್ರ ಹೋರಾಟ ಎಚ್ಚರಿಕೆ