ದ್ವಿಚಕ್ರವಾಹನಕ್ಕೆ ಟ್ರ್ಯಾಕ್ಟರ್‌ ಡಿಕ್ಕಿಯಾಗಿ ಶಿಕ್ಷಕಿ ಸಾವು

KannadaprabhaNewsNetwork |  
Published : Feb 17, 2026, 02:00 AM IST
ಶಿಕ್ಷಕಿ ಸಾವು | Kannada Prabha

ಸಾರಾಂಶ

ಲಕ್ಷ್ಮೀಪುರ ಸರ್ಕಾರಿ ಶಾಲೆಯ ಶಿಕ್ಷಕಿ ಯೋಗೇಶ್ವರಿ (46) ಮೃತಪಟ್ಟ ದುರ್ದೈವಿ ಶಿಕ್ಷಕಿ. ಅವರಿಗೆ ಪತಿ, ಒಪ್ಪ ಪುತ್ರ, ಪುತ್ರಿ ಇದ್ದರು. ಶಿಕ್ಷಕಿ ಬೆಂಗಳೂರಿನ ರಘುವನಹಳ್ಳಿಯಲ್ಲಿ ನೆಲೆಸಿದ್ದರು. ಶಿಕ್ಷಕಿ ಎಂದಿನಂತೆ ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದಾಗ ಟ್ರ್ಯಾಕ್ಟರ್ ಚಾಲಕ ಓವರ್ ಟೇಕ್ ಮಾಡಲು ಹೋಗಿ ಶಿಕ್ಷಕಿಯ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ಶಿಕ್ಷಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ಆನೇಕಲ್ ಪೊಲೀಸರು ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಂತರ ವಾರಸುದಾರರ ವಶಕ್ಕೆ ಶವವನ್ನು ನೀಡಿದ್ದಾರೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರದವರು.

ಕನ್ನಡಪ್ರಭ ವಾರ್ತೆ ಆನೇಕಲ್ರಸ್ತೆಯಲ್ಲಿ ಟ್ರ್ಯಾಕ್ಟರ್‌ ಚಾಲಕ ಓವರ್‌ಟೇಕ್ ಮಾಡುವಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಶಾಲಾ ಶಿಕ್ಷಕಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಸೋಮವಾರ ಬೆಳಿಗ್ಗೆ ಆನೇಕಲ್ ಠಾಣಾ ವ್ಯಾಪ್ತಿಯ ಥಳಿ ರಸ್ತೆಯಲ್ಲಿ ನಡೆದಿದೆ.

ಸಮೀಪದ ಲಕ್ಷ್ಮೀಪುರ ಸರ್ಕಾರಿ ಶಾಲೆಯ ಶಿಕ್ಷಕಿ ಯೋಗೇಶ್ವರಿ (46) ಮೃತಪಟ್ಟ ದುರ್ದೈವಿ ಶಿಕ್ಷಕಿ. ಅವರಿಗೆ ಪತಿ, ಒಪ್ಪ ಪುತ್ರ, ಪುತ್ರಿ ಇದ್ದರು. ಶಿಕ್ಷಕಿ ಬೆಂಗಳೂರಿನ ರಘುವನಹಳ್ಳಿಯಲ್ಲಿ ನೆಲೆಸಿದ್ದರು. ಶಿಕ್ಷಕಿ ಎಂದಿನಂತೆ ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಶಾಲೆಗೆ ತೆರಳುತ್ತಿದ್ದಾಗ ಟ್ರ್ಯಾಕ್ಟರ್ ಚಾಲಕ ಓವರ್ ಟೇಕ್ ಮಾಡಲು ಹೋಗಿ ಶಿಕ್ಷಕಿಯ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ಶಿಕ್ಷಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ್ದ ಆನೇಕಲ್ ಪೊಲೀಸರು ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಂತರ ವಾರಸುದಾರರ ವಶಕ್ಕೆ ಶವವನ್ನು ನೀಡಿದ್ದಾರೆ. ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರದವರಾದ ಇವರು ಈ ಹಿಂದೆ ಕನಕಪುರ ತಾಲೂಕಿನಲ್ಲಿ ಉತ್ತಮ ಶಿಕ್ಷಕಿ ಎಂದು ಹೆಸರು ಗಳಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಬ್ಬಿ ಮೆಣಸಿನಕಾಯಿ ಕ್ವಿಂಟಾಲ್‌ಗೆ 90 ಸಾವಿರ ರು. ದಾಖಲೆಯ ದರ!
ಬಾಲವು ನಾಯಿಯನ್ನು ಅಲ್ಲಾಡಿಸಲು ಸಾಧ್ಯವಿಲ್ಲ : ಸಚಿವ ಮಹದೇವಪ್ಪ