ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲೆಯ ವಡಗೇರಾ ಪಟ್ಟಣದ ಪ್ರೌಢ ಶಾಲಾವರಣದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ವಡಗೇರಾ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ವಡಗೇರಾ ತಾಲೂಕಿನ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಕುರಿತು ನಡೆದ ವಿಶೇಷ ಕಾರ್ಯಾಗಾರ ಮತ್ತು ರಸಪ್ರಶ್ನೆ ಕಾರ್ಯಕ್ರಮವನ್ನು ಬಸವಣ್ಣನವರ ಭಾವಚಿತ್ರಕ್ಕೆ ಪೂಜಿ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ. ವಿದ್ಯಾರ್ಥಿಗಳು ಹೆಚ್ಚು ಓದಿನ ಕಡೆ ಗಮನ ಕೊಟ್ಟು ಪರೀಕ್ಷಾ ಫಲಿತಾಂಶದಲ್ಲಿ ಹೆಚ್ಚು ಅಂಕ ಗಳಿಸಿ ಶಾಲೆ, ತಾಲೂಕು ಹಾಗೂ ಜಿಲ್ಲೆಗೂ ಕೀರ್ತಿ ತರುವಂತೆ ಹೇಳಿದರು.ತಾಪಂ ಇಒ ಮಲ್ಲಿಕಾರ್ಜುನ ಸಂಗ್ವಾರ ಮಾತನಾಡಿ, ಈ ಬಾರಿ ನಮ್ಮ ತಾಲೂಕಿನಲ್ಲಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಳಕ್ಕಾಗಿ ನುರಿತ ಶಿಕ್ಷಣ ತಜ್ಞರಿಂದ ತರಬೇತಿ ರಸಪ್ರಶ್ನೆ ಕಾರ್ಯಾಗಾರ ಹಮ್ಮಿಕೊಂಡಿದ್ದೇವೆ ಎಂದರು.
ಈ ವೇಳೆ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿ ಶೀಬಾ ಜಿಲಿಯನ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್ ರಾಠೋಡ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರೆಪ್ಪ , ನೀತಿ ಆಯೋಗದ ಮಹತ್ವಾಕಾಂಕ್ಷಿ ಹಾಗೂ ತಾಲೂಕು ಸಂಯೋಜಕಿ ಕಾವೇರಿ ಯಾದಗಿರಿ, ಸಿಆರ್‌ಪಿ ಶಾಂತಕುಮಾರ ಇತರರರಿದ್ದರು.