ಸದೃಢ ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ: ಕ್ಷೇತ್ರ ಶಿಕ್ಷಣಾಕಾರಿ ಸಿಎಂ.ತಿಪ್ಪೇಸ್ವಾಮಿ

KannadaprabhaNewsNetwork |  
Published : Sep 06, 2024, 01:00 AM IST
ಚಿತ್ರ 1 | Kannada Prabha

ಸಾರಾಂಶ

ಡಾ.ರಾಧಾಕೃಷ್ಣನ್ ಈ ದೇಶ ಕಂಡ ಅಪ್ರತಿಮ ಶ್ರೇಷ್ಠ ಶಿಕ್ಷಕರು ಹಾಗೂ ದೇಶಭಕ್ತರು. ತಮ್ಮ ಜೀವನವನ್ನೇ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಟ್ಟಿದ್ದರು

ಕನ್ನಡಪ್ರಭ ವಾರ್ತೆ ಹಿರಿಯೂರು

ಸದೃಢ ದೇಶ ನಿರ್ಮಾಣಕ್ಕೆ ಶಿಕ್ಷಕರ ಸೇವೆ ಅಗತ್ಯ ಮತ್ತು ಅಮೂಲ್ಯ. ಶಿಕ್ಷಕರು ತಮ್ಮ ಜವಾಬ್ದಾರಿ ಅರಿತು ಮಕ್ಕಳ ಪ್ರಗತಿಗೆ ಹೆಚ್ಚಿನ ಕಾಳಜಿ ವಹಿಸುತ್ತಾ ಸೇವೆ ಸಲ್ಲಿಸಬೇಕು ಎಂದು ಕ್ಷೇತ್ರ ಶಿಕ್ಷಣಾಕಾರಿ ಸಿಎಂ.ತಿಪ್ಪೇಸ್ವಾಮಿ ಹೇಳಿದರು.

ನಗರದ ಗುರುಭವನ ಸಭಾಂಗಣದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ವತಿಯಿಂದ ಆಯೋಜಿಸಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಡಾ.ರಾಧಾಕೃಷ್ಣನ್ ಈ ದೇಶ ಕಂಡ ಅಪ್ರತಿಮ ಶ್ರೇಷ್ಠ ಶಿಕ್ಷಕರು ಹಾಗೂ ದೇಶಭಕ್ತರು. ತಮ್ಮ ಜೀವನವನ್ನೇ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಟ್ಟಿದ್ದರು. ಅವರ ತತ್ವಾದರ್ಶಗಳನ್ನು ಅಧ್ಯಯನ ಮಾಡುವುದರ ಜತೆಗೆ ಅವುಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ನಗರಸಭೆ ಅಧ್ಯಕ್ಷ ಜೆ.ಆರ್.ಅಜಯ್‌ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಮಕ್ಕಳಿಗೆ ವಿದ್ಯೆಯ ಜೊತೆಗೆ ಉತ್ತಮ ಸಂಸ್ಕಾರ ಹಾಗೂ ಜೀವನ ಕಟ್ಟಿಕೊಳ್ಳುವಂತಹ ಶಿಕ್ಷಣ ನೀಡುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ ಎಂದರು. ಚಿಕ್ಕಜಾಜೂರು ಎಸ್‌ಜೆಎಂ ಕಾಲೇಜು ಉಪನ್ಯಾಸಕ ನಿಸಾರ್ ಅಹಮದ್ ವಿಶೇಷ ಉಪನ್ಯಾಸ ನೀಡಿದರು.

ಶಿಕ್ಷಕರಿಗಾಗಿ ಏರ್ಪಡಿಸಿದ್ದ ವಿವಿಧ ಆಟೋಟಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮಕ್ಕೂ ಮೊದಲು ನಗರದ ಪ್ರಮುಖ ಬೀದಿಗಳಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರದೊಂದಿಗೆ ವಿವಿಧ ಕಲಾ ತಂಡದೊಂದಿಗೆ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸಿ.ಮಹೇಶ್ವರ ರೆಡ್ಡಿ, ಬಿ.ಆರ್.ಸಿ ಈ.ತಿಪ್ಪೇರುದ್ರಪ್ಪ, ನೌಕರರ ಸಂಘದ ಅಧ್ಯಕ್ಷ ಆರ್.ಶಿವಕುಮಾರ್, ಪ್ರಾ.ಶಾ.ಶಿ.ಸಂ ಅಧ್ಯಕ್ಷ ಎನ್.ಪಿ.ಮಹೇಶಣ್ಣ, ಉಪನ್ಯಾಸಕರ ಸಂಘದ ಅಧ್ಯಕ್ಷ ಕೆ.ಆರ್. ತಿಪ್ಪೇಸ್ವಾಮಿ, ಶಿಕ್ಷಣ ಸಂಯೋಜಕ ಶಿವಾನಂದ್, ಶಿಕ್ಷಣಾಕಾರಿಗಳ ಸಂಘದ ಅಧ್ಯಕ್ಷೆ ವಿ.ಭಾಗ್ಯ, ಎಚ್.ಅಶೋಕ್, ನಾಗ್ಯಾನಾಯ್ಕ್, ರವೀಂದ್ರನಾಯ್ಕ್ ಸೇರಿದಂತೆ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು