ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಹರಿಹರಪುರ, ಮಡುವಿನಕೋಡಿ, ಗವೀಮಠ, ಬಳ್ಳೇಕೆರೆ, ವಿಠಲಾಪುರ, ಗಂಜೀಗೆರೆ, ಸೋಮನಹಳ್ಳಿ, ಆಲಂಬಾಡಿ ಕಾವಲು, ಜೈನಹಳ್ಳಿ, ಅಕ್ಕಿಹೆಬ್ಬಾಳು, ಬೀರವಳ್ಳಿ, ಆಲೇನಹಳ್ಳಿ, ಮಂದಗೆರೆ ಮತ್ತು ತೇಗನಹಳ್ಳಿಯ ಆಶೀರ್ವಾದ ಶಾಲೆ ಸೇರಿದಂತೆ ಹಲವು ಗ್ರಾಮಗಳ ಶಾಲಾ ಕಾಲೇಜುಗಳಲ್ಲಿ ಶಿಕ್ಷಕ ಮತದಾರರನ್ನು ಭೇಟಿ ಮಾಡಿ ಮತಯಾಚಿದರು.
ಮರಿತಿಬ್ಬೇಗೌಡರು ಕಳೆದ 4 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಶಿಕ್ಷಕರ ಪರ ಕೆಲಸ ಮಾಡಿದ್ದಾರೆ. ಈಗ ಕಾಂಗ್ರೆಸ್ ನಿಂದ ಕಣಕ್ಕೆ ಇಳಿದಿದ್ದಾರೆ. ಪರಿಷತ್ ಮತ್ತು ಹೊರಗೆ ಮರಿತಿಬ್ಬೇಗೌಡರು ಶಿಕ್ಷಕರ ಪರವಾಗಿ ಹೋರಾಟ ನಡೆಸಿದ್ದಾರೆ ಎಂದರು.ಮೈತ್ರಿ ಅಭ್ಯರ್ಥಿ ಕೆ.ವಿವೇವಾಕನಂದರಿಗೆ ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕನಿಷ್ಠ ಅರಿವೂ ಇಲ್ಲ. ಇವರಿಗೆ ಪ್ರಜ್ಞಾವಂತ ಶಿಕ್ಷಕ ಸಮುದಾಯ ಮತ ಚಲಾಯಿಸಿದರೆ ಶಾಸನ ಸಭೆಯಲ್ಲಿ ಶಿಕ್ಷಕರ ಧ್ವನಿ ಇಲ್ಲದಂತಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದ್ದು ಮರಿತಿಬ್ಬೇಗೌಡ ಮರು ಆಯ್ಕೆಯಾದರೆ ಶಿಕ್ಷಕರ ಸಮಸ್ಯೆ ಬಗೆಹರಿಸಲು ಸುಲುಭವಾಗಲಿದೆ. ಶಿಕ್ಷಕ ಸಮುದಾಯ ಹೋರಾಟಗಾರ ಮರಿತಿಬ್ಬೇಗೌಡರಿಗೆ ತಮ್ಮ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಮರು ಆಯ್ಕೆ ಮಾಡುವಂತೆ ಮನವಿ ಮಾಡಿದರು.
ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕ್‌ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಎಸ್ಟಾಬ್ಲಿಷ್‌ಮೆಂಟ್‌ಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಮತದಾರರಿಗೆ ಜೂನ್ 3 ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸರ್ಕಾರದ ಆಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.