ಶಿಕ್ಷಕರ ಗೈರು ವಿರುದ್ಧ ಶಾಲೆಗೆ ಬೀಗ ಜಡಿದು ಪ್ರತಿಭಟನೆ

KannadaprabhaNewsNetwork | Published : Nov 8, 2023 1:01 AM

ಸಾರಾಂಶ

ಕೆ ಮತ್ತಿಘಟ್ಟ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ 30 ವರ್ಷಗಳಿಂದಲೂ ಶಿಕ್ಷಕರು ಪಾಠ ಶಾಲೆಗೆ ಬರುತ್ತಿಲ್ಲವೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಗುಬ್ಬಿ: ಕೆ ಮತ್ತಿಘಟ್ಟ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ 30 ವರ್ಷಗಳಿಂದಲೂ ಶಿಕ್ಷಕರು ಪಾಠ ಶಾಲೆಗೆ ಬರುತ್ತಿಲ್ಲವೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಎಸ್ ಡಿಎಂಸಿ ಅಧ್ಯಕ್ಷ ಲೋಕೇಶ್ ಈ ಪಾಠ ಶಾಲೆಗೆ 30 ವರ್ಷಗಳಿಂದಲೂ ಒಬ್ಬರೇ ಶಿಕ್ಷಕರಿದ್ದು, ಮಕ್ಕಳಿಗೆ ಪಾಠ ಮಾಡುತ್ತಿಲ್ಲ. ಮಕ್ಕಳ ಭವಿಷ್ಯ ಹಾಳಾಗಿದೆ ಎಂದ ಸಂಬಂಧಪಟ್ಟ ಅಧಿಕಾರಿಗಳಿಗೂ ದೂರು ನೀಡಿದರು ಸಹ ಕ್ರಮ ತೆಗೆದುಕೊಂಡಿಲ್ಲ.

ಈ ಶಿಕ್ಷಕರನ್ನೇ ಮುಂದುವರಿಸಿದರೆ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಬೇಕಾಗುತ್ತದೆ. ಹೊಸ ಶಿಕ್ಷಕರನ್ನು ನೇಮಕ ಮಾಡಬೇಕೆಂದು ಒತ್ತಾಯಿಸಿದರು.

ಸದಸ್ಯೆ ಮುನಿಯಪ್ಪ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುತ್ತಿಲ್ಲ. ಈ ಕಾರಣಕ್ಕೆ ಬೇರೆ ಶಿಕ್ಷಕರನ್ನು ನೇಮಿಸಿ, ಮುಂದಿನ ದಿನಗಳಲ್ಲಿ ಮಕ್ಕಳು ಚೆನ್ನಾಗಿ ಓದಲಿ ಅವರ ಭವಿಷ್ಯ ರೂಪಿಸಲಿ ಎಂದರು.

ದಲಿತ ಮುಖಂಡ ಕೃಷ್ಣಮೂರ್ತಿ ಮಾತನಾಡಿ, ಈ ಶಾಲೆಯ ಬಗ್ಗೆ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಇದೇ ರೀತಿ ಮುಂದುವರಿದಲ್ಲಿ ಮಕ್ಕಳ ಭವಿಷ್ಯಕ್ಕಾಗಿ ತಾಲೂಕು ಮಟ್ಟದಲ್ಲಿ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಮುನಿಯಪ್ಪ, ನಾಗರಾಜು, ಡಿಎಸ್ ಕೃಷ್ಣಮೂರ್ತಿ, ಚನ್ನಬಸವಯ್ಯ, ಚೆನ್ನೇಗೌಡ, ದೇವರಾಜು, ಮುನಿರಾಜು, ಧರ್ಮಣ್ಣ, ಕಮಲಮ್ಮ, ಲಾವಣ್ಯ ಹಾಗೂ ಪೋಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

7 ಜಿ ಯು ಬಿ 1

ಗುಬ್ಬಿ ತಾಲೂಕಿನ ಕೆ ಮತ್ತಿಘಟ್ಟ ಕಾಲೋನಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಸುಮಾರು 30 ವರ್ಷಗಳಿಂದಲೂ ಸರಿಯಾಗಿ ಪಾಠಶಾಲೆಗೆ ಬರುತ್ತಿಲ್ಲವೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದು ಪ್ರತಿಭಟನೆ.

Share this article