ಕ್ರಿಯಾಶೀಲರಾಗಿರಲು ಶಿಕ್ಷಕರಿಗೂ ಕ್ರೀಡೆ ಅಗತ್ಯ: ಬಿಇಒ ಮೋಹನ್ ಕುಮಾರ್

KannadaprabhaNewsNetwork |  
Published : Jan 29, 2024, 01:34 AM IST
ನಗರದ ಜೇನುಕಲ್ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಕ್ರೀಡಾಕೂಟವನ್ನು ಉದ್ಘಾಟಿಸಿ  ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್  ಮಾತನಾಡಿದರು  | Kannada Prabha

ಸಾರಾಂಶ

ದೇಹ ಸದೃಢವಾಗಿದ್ದರೆ ಮನಸ್ಸು ಸದೃಢವಾಗಿರುತ್ತದೆ. ತರಗತಿಯಲ್ಲಿ ಉತ್ಸಾಹಿಯಾಗಿ ಮಕ್ಕಳಿಗೆ ಬೋಧಿಸಲು ಶಿಕ್ಷಕರು ಹಸನ್ಮುಖಿಗಳಾಗಿರಬೇಕು. ಇದಕ್ಕೆ ಕ್ರೀಡೆಯು ಸಹಕಾರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಅಭಿಪ್ರಾಯಪಟ್ಟರು. ಅರಸೀಕೆರೆಯಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಮಾತನಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಕ್ರೀಡಾಕೂಟ

ಕನ್ನಡಪ್ರಭ ವಾರ್ತೆ ಅರಸೀಕೆರೆ

ದೇಹ ಸದೃಢವಾಗಿದ್ದರೆ ಮನಸ್ಸು ಸದೃಢವಾಗಿರುತ್ತದೆ. ತರಗತಿಯಲ್ಲಿ ಉತ್ಸಾಹಿಯಾಗಿ ಮಕ್ಕಳಿಗೆ ಬೋಧಿಸಲು ಶಿಕ್ಷಕರು ಹಸನ್ಮುಖಿಗಳಾಗಿರಬೇಕು. ಇದಕ್ಕೆ ಕ್ರೀಡೆಯು ಸಹಕಾರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಅಭಿಪ್ರಾಯಪಟ್ಟರು

ನಗರದ ಜೇನುಕಲ್ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಶಿಕ್ಷಕರಿಗೂ ಒತ್ತಡವಿರುತ್ತದೆ. ಅವರಿಗೂ ಬದಲಾವಣೆಬೇಕು. ಕ್ರೀಡಾ ಚಟುವಟಿಕೆಗಳು ಅಗತ್ಯ, ಇಂದು ಹೋಬಳಿ ಮಟ್ಟದಲ್ಲಿ ತಂಡಗಳನ್ನು ರಚನೆ ಮಾಡಿಕೊಂಡು ಕ್ರೀಡೆಯಲ್ಲಿ ಶಿಕ್ಷಕರು ತೊಡಗಿದ್ದಾರೆ. ಕ್ರೀಡೆಯಲ್ಲಿ ತೋರುವ ಉತ್ಸಾಹದಂತೆ ಅವರು ನಿತ್ಯ ತಮ್ಮ ಕರ್ತವ್ಯದಲ್ಲಿ ಉತ್ಸಾಹದೊಂದಿಗೆ ಕೆಲಸ ಮಾಡಿದಾಗ ಸಮುದಾಯದ ಗುರಿಯನ್ನು ಮುಟ್ಟಲು ಸಾಧ್ಯವಾಗುತ್ತದೆ. ತಾಲೂಕು ಶೈಕ್ಷಣಿಕ ಹಾಗೂ ಕ್ರೀಡಾ ಪ್ರಗತಿಯಲ್ಲಿ ವಿದ್ಯಾರ್ಥಿಗಳು ಇದ್ದಾರೆ ಎಂದರೆ ಅದಕ್ಕೆ ಶಿಕ್ಷಕರು ಮೂಲ ಕಾರಣ. ಶಿಕ್ಷಕರು ಸದಾ ಹಸುನ್ಮುಖರಾಗಿರಬೇಕು. ಇಂತಹ ಒಂದು ವಿಶೇಷ ಸಂದರ್ಭಗಳನ್ನು ಒದಗಿಸಿ ಕೊಟ್ಟಾಗ ಅವರಲ್ಲಿ ಇನ್ನೂ ಹೆಚ್ಚಿನ ಉತ್ಸಾಹ ಮೂಡುತ್ತದೆ ಎಂದರು.

ತಾಲೂಕು ಕ್ಷೇತ್ರ ಸಮನ್ವಯ ಅಧಿಕಾರಿ ಶಂಕರ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಶಂಕರ್, ಪ್ರಾಥಮಿಕರ ಶಾಲಾ ಜಿಲ್ಲಾ ಸಂಘದ ಅಧ್ಯಕ್ಷ ಅಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಬಸವರಾಜ್ ತಾಲೂಕು ಸಂಘದ ಅಧ್ಯಕ್ಷ ಸದಾನಂದಮೂರ್ತಿ, ಉಪಾಧ್ಯಕ್ಷ ಹಾಲಪ್ಪ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್, ನಿರ್ದೇಶಕರು ಕ್ರೀಡಾಪಟುಗಳಿಗೆ ಶುಭ ಕೋರಿದರು. ಬಿಇಒ ಬೋಲಿಂಗ್ ಕ್ಷೇತ್ರ ಸಮನ್ವಯ ಅಧಿಕಾರಿ ಶಂಕರ್ ಬ್ಯಾಟಿಂಗ್ ಎಲ್ಲರ ಗಮನ ಸೆಳೆಯಿತು.

ನಗರದ ಜೇನುಕಲ್ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾವಣಗೆರೆ, ಬಾಗಲಕೋಟೆ ಕ್ಷೇತ್ರ ನಮ್ದೆ : ಡಿ.ಕೆ.ಶಿವಕುಮಾರ್‌
ಟಿಬಿ ಡ್ಯಾಂ ಹಿನ್ನೀರಿನ ಕೈಗಾರಿಕೆ ಲೈಸೆನ್ಸ್‌ ರದ್ದತಿಗಾಗಿ ಹೋರಾಟ