ಮಕ್ಕಳ ವ್ಯಕ್ತಿತ್ವ ರೂಪಿಸುವ ಹೊಣೆ ಶಿಕ್ಷಕರದ್ದು

KannadaprabhaNewsNetwork |  
Published : Sep 06, 2025, 01:01 AM IST
ಫೋಟೋ ಸೆ.೫ ವೈ.ಎಲ್.ಪಿ. ೦೪ | Kannada Prabha

ಸಾರಾಂಶ

ಮಕ್ಕಳ ವ್ಯಕ್ತಿತ್ವ ರೂಪಿಸುವ ಶಿಕ್ಷಕರ ಮೇಲೆ ಬಹುದೊಡ್ಡ ಹೊಣೆಗಾರಿಕೆ ಇದೆ.

ಯಲ್ಲಾಪುರ: ಮಕ್ಕಳ ವ್ಯಕ್ತಿತ್ವ ರೂಪಿಸುವ ಶಿಕ್ಷಕರ ಮೇಲೆ ಬಹುದೊಡ್ಡ ಹೊಣೆಗಾರಿಕೆ ಇದೆ. ಅವರು ಸನ್ಮಾರ್ಗದಲ್ಲಿ ನಡೆಯುವ ಮೂಲಕ ಸಮಾಜದಲ್ಲಿ ಆದರ್ಶಪ್ರಾಯರಾಗಿ ಬದುಕನ್ನು ನಡೆಸಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಅವರು ಶುಕ್ರವಾರ ಪಟ್ಟಣದ ಎಪಿಎಂಸಿ ರೈತಭವನದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ-ಗುರು ಗೌರವಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡುತ್ತಿದ್ದರು.

ಶಿಕ್ಷಕರು ಸಮಾಜ ಪರಿವರ್ತನೆಯ ಹರಿಕಾರರು. ಗುರುವಿನ ಸ್ಥಾನ ಶ್ರೇಷ್ಠವಾದದ್ದು, ಶಿಕ್ಷಕರು ತಮ್ಮ ಸ್ಥಾನದ ಶ್ರೇಷ್ಠತೆ, ಗೌರವವನ್ನು ಅರಿತು ನಡೆಯಬೇಕು ಎಂದರು.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ರಾಮದಾಸ ಪೈ, ಸತೀಶ ಶೆಟ್ಟಿ, ಮಮತಾಜ್ ನದಾಫ, ಪ್ರೌಢಶಾಲಾ ವಿಭಾಗದಲ್ಲಿ ಶ್ಯಾಮಲಾಬಾಯಿ, ಸದಾನಂದ ನಾಯ್ಕ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಳೆದ ಸಾಲಿನಲ್ಲಿ ನಿವೃತ್ತರಾದ ಶಿಕ್ಷಕರನ್ನು ಇಲಾಖೆಯಿಂದ ಗೌರವಿಸಲಾಯಿತು. ಶಿಕ್ಷಕರ ದಿನಾಚರಣೆ ಪ್ರಯುಕ್ತ ಏರ್ಪಡಿಸಿದ್ದ ವಿವಿಧ ಸಾಂಸ್ಕೃತಿಕ, ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ನೀಡಿದರು. ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಶಿಕ್ಷಕರನ್ನು ಅಭಿನಂದಿಸಲಾಯಿತು.

ಅಂಕೋಲಾ ಅರ್ಬನ್ ಕೋ-ಆಪರೇಟಿವ್ ಅಧ್ಯಕ್ಷ ರಾಜೇಂದ್ರ ಶೆಟ್ಟಿ, ಪಪಂ ಅಧ್ಯಕ್ಷೆ ನರ್ಮದಾ ನಾಯ್ಕ, ಉಪಾಧ್ಯಕ್ಷ ಅಮಿತ್ ಅಂಗಡಿ, ಭಾರತ ಸೇವಾದಳದ ತಾಲೂಕಾಧ್ಯಕ್ಷ ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯಕ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜಯ ನಾಯಕ, ತಾಲೂಕು ಅಧ್ಯಕ್ಷ ಚಂದ್ರಶೇಖರ ಎಸ್.ಸಿ, ಬಿಇಒ ರೇಖಾ ನಾಯ್ಕ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ಭಟ್ಟ, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ, ಬಿಆರ್ಸಿ ಸಂಯೋಜಕ ಸಂತೋಷ ಜಿಗಳೂರ ಇದ್ದರು.

ಶಿಕ್ಷಕರಾದ ಎಂ.ಎ. ಬಾಗೇವಾಡಿ ತಂಡದವರು ನಾಡಗೀತೆ ಹಾಡಿದರು. ಜ್ಯೋತಿ ಎಂ.ಡಿ., ನೆಲ್ಸನ್ ಗೊಲ್ಸಾನ್ವಿಸ್, ಮೋಹನ ನಾಯ್ಕ ನಿರ್ವಹಿಸಿದರು.

PREV

Recommended Stories

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ: 9ರಂದು ಬೃಹತ್ ಜನಾಗ್ರಹ ಸಭೆ
ಮೋದಿ ಸರ್ಕಾರದಿಂದ ಜಿಎಸ್‌ಟಿ ಇಳಿಕೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ್‌ ಕಾಮತ್