ಶಿಕ್ಷಕರೇ ರಾಷ್ಟ್ರ ನಿರ್ಮಾಣದ ಶಿಲ್ಪಿಗಳು

KannadaprabhaNewsNetwork |  
Published : Sep 06, 2024, 01:03 AM IST
ಸಸಸ | Kannada Prabha

ಸಾರಾಂಶ

ಸಮಾಜದಲ್ಲಿ ಶಿಕ್ಷಕ ಪಾತ್ರ ಪ್ರಮುಖವಾಗಿದೆ. ಶಿಕ್ಷಕರೇ ರಾಷ್ಟ್ರ ನಿರ್ಮಾಣದ ಶಿಲ್ಪಿಗಳು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾದಾಮಿ

ಸಮಾಜದಲ್ಲಿ ಶಿಕ್ಷಕ ಪಾತ್ರ ಪ್ರಮುಖವಾಗಿದೆ. ಶಿಕ್ಷಕರೇ ರಾಷ್ಟ್ರ ನಿರ್ಮಾಣದ ಶಿಲ್ಪಿಗಳು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಪಟ್ಟಣದ ಎಸ್.ವಿ.ಪಿ.ಸಂಸ್ಥೆಯ ಬಸವಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲೂಕಾಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳು ಅಭಿವೃದ್ಧಿ ಪಡಿಸುವ ಮಹದಾಸೆ ನನ್ನದಾಗಿದೆ. ದೂರದೃಷ್ಟಿಯಿಂದ ಮಕ್ಕಳ ಭವಿಷ್ಯ ರೂಪಿಸುವ ಮಹತ್ತರ ಯೋಚನೆಗಳು ಅನಾವರಣಗೊಳಿಸಿ ಬದಲಾಯಿಸುವಲ್ಲಿ ನನ್ನ ಬೆಂಬಲ ಮತ್ತು ಪ್ರಯತ್ನ ಮುಂದುವರೆಸುತ್ತೇನೆ. ತಾಲೂಕಿನಲ್ಲಿ ಐದು ಕೆಪಿಎಸ್ ಶಾಲೆ ಮಂಜೂರಿಸಿದ್ದಾರೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಸರ್ಕಾರಿ ಶಾಲಾ ಸುಧಾರಣೆ ತರುವ ಪ್ರಯತ್ನ ಮಾಡುತ್ತೇನೆ. ಸರ್ಕಾರಿ ಪಪೂ, ಪದವಿ ಕಾಲೇಜು ಕಟ್ಟಡಗಳ ನಿರ್ಮಾಣಕ್ಕೆ ಅಣಿಯಾಗಿದೆ. ಶಿಕ್ಷಕರ ಸಮುದಾಯ ಭವನ ನಿರ್ಮಾಣಕ್ಕೆ ₹10 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಎಲ್ಲ ಶಿಕ್ಷಕರೊಂದಿಗೆ ನಾನು ಸದಾ ಇರುತ್ತೇನೆ ಎಂದು ಭರವಸೆ ನೀಡಿದರು. ಬಾಗಲಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಜಿ.ಜಿ.ಹಿರೇಮಠ ಅವರು ಡಾ.ಎಸ್.ರಾಧಾಕೃಷ್ಣನ್ ಕುರಿತು ಜೀವನ ಸಾಧನೆ, ನಡೆದು ಬಂದ ದಾರಿ ಕುರಿತು ಅತಿಥಿ ಉಪನ್ಯಾಸ ನೀಡಿದರು.

ಕೆರೂರಿನ ಚರಂತಿಮಠದ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ವೇದಿಕೆಯ ಮೇಲೆ ಬಾದಾಮಿ ಪುರಸಭೆಯ ಅಧ್ಯಕ್ಷ ಪಾಂಡು ಕಟ್ಟೀಮನಿ, ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಕಮ್ಮಾರ, ಕೆರೂರ ಪ.ಪಂ ಅಧ್ಯಕ್ಷೆ ನಿರ್ಮಲಾ ಮದಿ, ತಹಸೀಲ್ದಾರ್‌ ಜೆ.ಬಿ.ಮಜ್ಜಗಿ, ನೌಕರರ ಸಂಘದ ಅಧ್ಯಕ್ಷ ರಮೇಶ ಅಥಣಿ, ಡಿ.ವಿ.ಜಾಧವ, ಬಿ.ಎಸ್.ಅಬ್ಬಿಗೇರಿ, ಉಜ್ವಲ ಬಸರಿ, ಎಚ್.ಎಂ.ಯತ್ನಟ್ಟಿ, ವೈ.ಎಸ್.ಮಜ್ಜಗಿ, ವಿ.ಡಿ.ವೈಕುಂಟೆ, ಆರ್.ಟಿ.ಪಟ್ಟಣಶೆಟ್ಟಿ, ಎಸ್.ಎಸ್.ಪಟ್ಟಣಶೆಟ್ಟಿ, ಎ.ಪಿ.ಮೇಟಿ, ಎಚ್.ಎಂ.ಹರದೊಳ್ಳಿ, ಬಿ.ಟಿ.ಹಳ್ಳಿ, ಬಿ.ಕೆ.ಚಿಮಲ್, ಎಂ.ಸಿ.ನಾಲತನಾಡ, ವೈ.ಬಿ.ಚಲವಾದಿ, ಎಸ್.ಪಿ.ಗೌಡರ ಸೇರಿದಂತೆ ಸಂಘದ ಪದಾಧಿಕಾರಿಗಳು, ಪತ್ತಿನ ಸಹಕಾರಿ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಸೇವೆಯಿಂದ ನಿವೃತ್ತರಾದ 72 ಜನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಪ್ರಾರಂಭದಲ್ಲಿ ಡಾ.ಎಸ್.ರಾಧಾಕೃಷ್ಣನ್ ಮತ್ತು ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಪುಷ್ಪಾರ್ಚನೆ ಮಾಡಿದರು. ಸ್ಥಳೀಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಚ್.ಹಳಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರವಿ ಕಂಗಳ, ಬಸಮ್ಮಾ ನರಸಾಪೂರ ನಿರೂಪಿಸಿದರು. ಶೀಲಾ ಗೌಡರ ವಂದಿಸಿದರು. ಭಾವಚಿತ್ರದ ಮೆರವಣಿಗೆ:

ಬಾದಾಮಿ ಪಟ್ಟಣದ ಬಸವೇಶ್ವರ ಸರ್ಕಲ್‌ನಿಂದು ಶಿಕ್ಷಕರ ದಿನಾಚರಣೆಯ ನಿಮಿತ್ತ ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಇವರ ಭಾವಚಿತ್ರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಚ್.ಹಳಗೇರಿ ಪೂಜೆ ಸಲ್ಲಿಸಿ ಭಾವಚಿತ್ರದ ಮೆರವಣಿಗೆಗೆ ಚಾಲನೆ ನೀಡಿದರು. ವಿವಿಧ ಸಂಗೀತ ವಾದ್ಯಗಳೊಂದಿಗೆ ಸಾರೊಟಗಿ ಮೂಲಕ ಮೆರವಣಿಗೆಯು ಮುಖ್ಯರಸ್ತೆಯ ಮೂಲಕ ಬಸವಭವನದ ಸಭಾಂಗಣಕ್ಕೆ ಬಂದು ತಲುಪಿತು.

PREV

Recommended Stories

ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಪೇದೆ ನೇಮಕಕ್ಕೆ ವಯೋಮಿತಿ ಸಡಿಲಕ್ಕೆ ಶೀಘ್ರ ಪ್ರಸ್ತಾವ : ಪರಂ