ಶಿಕ್ಷಕರು ಸಮಾಜದ ಪರಿವರ್ತಕರು

KannadaprabhaNewsNetwork |  
Published : Sep 10, 2024, 01:36 AM IST
ಪೊಟೋ೮ಸಿಪಿಟಿ೨: ಭಾವಿಪ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ  ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿಸಲಾಯಿತು. | Kannada Prabha

ಸಾರಾಂಶ

ಚನ್ನಪಟ್ಟಣ: ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು, ಸ್ವಾಸ್ಥ್ಯ ಮತ್ತು ಸುಂದರ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು ಎಂದು ಭಾವಿಪ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಮೋಹನ್ ತಿಳಿಸಿದರು.

ಚನ್ನಪಟ್ಟಣ: ಶಿಕ್ಷಕ ವೃತ್ತಿ ಬಹಳ ಪವಿತ್ರವಾದದ್ದು, ಸ್ವಾಸ್ಥ್ಯ ಮತ್ತು ಸುಂದರ ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು ಎಂದು ಭಾವಿಪ ದಕ್ಷಿಣ ಪ್ರಾಂತ್ಯ ಅಧ್ಯಕ್ಷ ಮೋಹನ್ ತಿಳಿಸಿದರು.

ನಗರದಲ್ಲಿ ಭಾರತ್ ವಿಕಾಸ ಪರಿಷತ್ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಕರು ಸಮಾಜದ ಪರಿವರ್ತಕರು. ನಿಷ್ಠೆ, ಪ್ರಾಮಾಣಿಕತೆ, ದೂರದೃಷ್ಟಿ, ನಿರಂತರ ಅಧ್ಯಯನ ಮೈಗೂಡಿಸಿಕೊಂಡು ಮಕ್ಕಳನ್ನು ಪ್ರಜ್ಞಾವಂತರನ್ನಾಗಿ ಮಾಡಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡುತ್ತಿರುವುದು ತುಂಬಾ ಪವಿತ್ರವಾದ ಕೆಲಸ ಎಂದರು.

ಭಾವಿಪ ಪ್ರಾಂತ್ಯ ಸಂಘಟನಾ ಕಾರ್ಯದರ್ಶಿ ವಸಂತ್‌ಕುಮಾರ್ ಮಾತನಾಡಿ, ಶಿಕ್ಷಕ ವೃತ್ತಿ ಪವಿತ್ರವಾದುದು. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಮರೆಯಲಾಗದ ಏಕೈಕ ವ್ಯಕ್ತಿ ಗುರು. . ಆದ್ದರಿಂದ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ, ಆದರ್ಶವಾಗಿರಬೇಕು ಎಂದರು.

ಭಾವಿಪ ಅಧ್ಯಕ್ಷ ಪಿ.ಗುರುಮಾದಯ್ಯ ಮಾತನಾಡಿ, ಶಿಕ್ಷಕರಾಗಿ ವೃತ್ತಿಯನ್ನು ಪ್ರಾರಂಭಿಸಿ ಭಾರತದ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿ, ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಪ್ರತಿ ಶಿಕ್ಷಕನಿಗೂ ಆದರ್ಶ ಮತ್ತು ಸ್ಫೂರ್ತಿ ಎಂದರು.

ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಮಾತನಾಡಿ, ಗುರುವಿನ ಮಹತ್ವ, ಬದಲಾದ ಶಿಕ್ಷಣ ವ್ಯವಸ್ಥೆ, ಶಿಕ್ಷಕರ ಕರ್ತವ್ಯ, ಶಿಕ್ಷಕರ ಸಮಸ್ಯೆಗಳು, ಶಿಕ್ಷಕರು ಮಾಡಿಕೊಳ್ಳಬೇಕಾದ ಆತ್ಮಾವಲೋಕನ ಕುರಿತು ಮಾತನಾಡಿದರು. ನಿವೃತ್ತ ಶಿಕ್ಷಕರಾದ ಲಕ್ಷ್ಮಣಗೌಡ, ಮಂಗಳಮ್ಮ ಹಾಗೂ ಶೋಭಾ ಅವರನ್ನು ಸನ್ಮಾನಿಸಿಸಲಾಯಿತು. ಭಾವಿಪ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಅರುಣ್ ಗಾಡ್ಕೆ, ಕಾರ್ಯದರ್ಶಿ ವಿ.ಟಿ. ರಮೇಶ್, ಖಜಾಂಚಿ ಬೆಸ್ಕಾಂ ಶಿವಲಿಂಗಯ್ಯ, ರಾಮನಗರ ವಾಲ್ಮೀಕಿ ಶಾಖೆ ಅಧ್ಯಕ್ಷ ರಾ.ಶಿ. ಬಸವರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೊಟೋ೮ಸಿಪಿಟಿ೨:

ಭಾವಿಪ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿಸಲಾಯಿತು.

PREV

Recommended Stories

ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ
ಹಾಡಹಗಲೇ ಮನೆಗೆ ನುಗ್ಗಿ ಚಹಾ ವ್ಯಾಪಾರಿಯ ಕತ್ತು ಕೊಯ್ದು ಹತ್ಯೆ