ಶಿಕ್ಷಕರು ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಿ

KannadaprabhaNewsNetwork |  
Published : Jan 10, 2025, 12:45 AM IST
ಚಿತ್ರ 2 | Kannada Prabha

ಸಾರಾಂಶ

ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಸಮಾಜ ವಿಜ್ಞಾನ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರವನ್ನು ಎಂ.ಆರ್.ಮಂಜುನಾಥ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಭಯವಿಲ್ಲದೆ ಮಕ್ಕಳು ಪರೀಕ್ಷೆ ಬರೆಯುವಂತಹ ಆತ್ಮವಿಶ್ವಾಸ ಮೂಡಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್ ಹೇಳಿದರು.

ನಗರದ ತರಾಸು ರಂಗಮಂದಿರದಲ್ಲಿ ಗುರುವಾರ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ಸಮಾಜ ವಿಜ್ಞಾನ ಶಿಕ್ಷಕರ ಕ್ಲಬ್‌ವತಿಯಿಂದ ನಡೆದ ಜಿಲ್ಲಾ ಮಟ್ಟದ ಸಮಾಜ ವಿಜ್ಞಾನ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ನಿಮ್ಮಲ್ಲಿರುವ ಕೌಶಲ್ಯವನ್ನು ಬಳಸಿಕೊಂಡು ಮಕ್ಕಳ ಮನಸ್ಸಿಗೆ ನಾಟುವ ರೀತಿಯಲ್ಲಿ ಪಠ್ಯವನ್ನು ಬೋಧಿಸಿದಾಗ ಹತ್ತನೆ ತರಗತಿ ಪರೀಕ್ಷೆಯಲ್ಲಿ ಫಲಿತಾಂಶ ಸುಧಾರಣೆಯಾಗಲಿದೆ. ಹಿಂದುಳಿದ ಚಿತ್ರದುರ್ಗ ಜಿಲ್ಲೆಯಲ್ಲಿ ರೈತರು, ಶ್ರಮಿಕರು, ಗ್ರಾಮೀಣ ಮಕ್ಕಳೇ ಜಾಸ್ತಿಯಿದ್ದಾರೆ. ವೇಳಾಪಟ್ಟಿ ಪ್ರಕಾರ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಂಡು ಮಕ್ಕಳನ್ನು ಪರೀಕ್ಷೆಗೆ ಅಣಿಗೊಳಿಸಲಾಗುತ್ತಿದೆ.

ಈ ಬಾರಿಯ ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆ ಟಾಪ್ 10 ಒಳಗೆ ಬರಬೇಕು. ಜಿಲ್ಲೆಯಲ್ಲಿ ಅದ್ಭುತವಾದ ಶಿಕ್ಷಕರಿದ್ದಾರೆ. ಮಕ್ಕಳ ಭವಿಷ್ಯ ರೂಪಿಸುವ ಕೆಲಸ ನಿಮ್ಮಿಂದಾಗಬೇಕು. ಪೋಷಕರ ಸಭೆ ನಡೆಸಿ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಿದಾಗ ಮಾತ್ರ ಗುಣಮಟ್ಟದ ಫಲಿತಾಂಶ ಸಿಗುತ್ತದೆ ಎಂದು ಹೇಳಿದರು.

ಸಮಾಜ ವಿಜ್ಞಾನ ವಿಷಯ ಪರಿವೀಕ್ಷಕ ಪ್ರಶಾಂತ್ ಮಾತನಾಡಿ, 10ನೇ ತರಗತಿ ಪರೀಕ್ಷೆ ಫಲಿತಾಂಶ ಸುಧಾರಣೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರ ಪಾತ್ರ ಪ್ರಮುಖವಾದುದು. ಮಕ್ಕಳನ್ನು ಕೇವಲ ಪಠ್ಯಕ್ಕೆ ಮಾತ್ರ ಸೀಮಿತಗೊಳಿಸಬಾರದು. ಶಿಕ್ಷಣದ ಜೊತೆ ಸಂಸ್ಕಾರ, ಮೌಲ್ಯವನ್ನು ಕಲಿಸಬೇಕಿದೆ. ಈಗಿನಿಂದಲೆ ಮಕ್ಕಳನ್ನು ಪರೀಕ್ಷೆಗೆ ತಯಾರು ಮಾಡಬೇಕಿದೆ ಎಂದು ತಿಳಿಸಿದರು.

ಈ ವೇಳೆ ವಿದ್ಯಾಧಿಕಾರಿಗಳಾದ ಎನ್.ಆರ್.ತಿಪ್ಪೇಸ್ವಾಮಿ, ಸಿದ್ದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ವಿಷಯ ಪರಿವೀಕ್ಷಕರಾದ ಶಿವಣ್ಣ, ಚಂದ್ರಣ್ಣ, ಗೋವಿಂದಪ್ಪ, ಮಹಲಿಂಗಪ್ಪ, ಸಮಾಜ ವಿಜ್ಞಾನ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ.ಆರ್.ನಾಗರಾಜ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ಶ್ರೀನಿವಾಸ್, ಗೋವಿಂದಪ್ಪ, ಡಿ.ಎಸ್.ಪಾಲಯ್ಯ ಸೇರಿ ಅನೇಕರಿದ್ದರು.

PREV

Recommended Stories

ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಹೊಸೂರಿಗೆ ಮೆಟ್ರೋ ವಿಸ್ತರಣೆ ಅಸಾಧ್ಯ : ರಾಜ್ಯ ಸರ್ಕಾರಕ್ಕೆ ಬಿಎಂಆರ್‌ಸಿಎಲ್‌ ವರದಿ