ಶಿಕ್ಷಕರ ಕ್ಷೇತ್ರ ಉಪಚುನಾವಣೆ: ನಿಷೇಧಾಜ್ಞೆ ಜಾರಿ

KannadaprabhaNewsNetwork |  
Published : Feb 15, 2024, 01:17 AM IST
14ಕೆಆರ್ ಎಂಎನ್‌ 7.ಜೆಪಿಜಿರಾಮನಗರ ಜಿಲ್ಲಾಧಿಕಾರಿ ಅ‍ವಿನಾಶ್  | Kannada Prabha

ಸಾರಾಂಶ

ರಾಮನಗರ: ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಮತದಾನ ಫೆ.16ರಂದು ನಡೆಯಲಿರುವ ಪ್ರಯುಕ್ತ ಫೆ.14 ಸಂಜೆ 4ರಿಂದ ಫೆ.16ರ ಮಧ್ಯರಾತ್ರಿ 12 ಗಂಟೆವರೆಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144ರಡಿ ರಾಮನಗರ ಜಿಲ್ಲೆಯ ಶಿಕ್ಷಕರ ಕ್ಷೇತ್ರದ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಆದೇಶ ಹೊರಡಿಸಿದ್ದಾರೆ.

ರಾಮನಗರ: ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಮತದಾನ ಫೆ.16ರಂದು ನಡೆಯಲಿರುವ ಪ್ರಯುಕ್ತ ಫೆ.14 ಸಂಜೆ 4ರಿಂದ ಫೆ.16ರ ಮಧ್ಯರಾತ್ರಿ 12 ಗಂಟೆವರೆಗೆ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144ರಡಿ ರಾಮನಗರ ಜಿಲ್ಲೆಯ ಶಿಕ್ಷಕರ ಕ್ಷೇತ್ರದ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಆದೇಶ ಹೊರಡಿಸಿದ್ದಾರೆ.

ರಾಮನಗರ ಜಿಲ್ಲೆಯ ಶಿಕ್ಷಕರ ಕ್ಷೇತ್ರದ ಮತಗಟ್ಟೆ ವ್ಯಾಪ್ತಿಯಲ್ಲಿ ಮೆರವಣಿಗೆ ಹಾಗೂ ಸಭೆ ಸಮಾರಂಭಗಳನ್ನು ನಿಷೇಧಿಸಲಾಗಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು ಸೇರಿ 5 ಜನರಿಗಿಂತ ಹೆಚ್ಚಿನ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಭರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಟಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವಂತಿಲ್ಲ.

ಮತಗಟ್ಟೆಗಳ 200 ಮೀಟರ್ ವ್ಯಾಪ್ತಿಯೊಳಗೆ ಚುನಾವಣಾ ಪ್ರಚಾರ ನಿಷೇಧಿಸಲಾಗಿದೆ. ಈ ಪ್ರದೇಶದಲ್ಲಿ ಬರುವ ಜೆರಾಕ್ಸ್ ಅಂಗಡಿ, ಸೈಬರ್ ಕೆಫೆ, ಬುಕ್ ಸ್ಟಾಲ್‌ಗಳನ್ನು ನಿರ್ಬಂಧಿಸಿದೆ. ಸ್ಪೋಟಕ ವಸ್ತುಗಳು, ಯಾವುದೇ ದಹನ ವಸ್ತುಗಳು, ಇತ್ಯಾದಿಗಳನ್ನು ನಿಷೇಧಿಸಲಾಗಿದೆ.

ಮದುವೆ ಮತ್ತು ಇತರೆ ಮೆರವಣಿಗಳಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸುವುದು ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು/ನಿಯಮಗಳನ್ನು ಪಾಲಿಸುವುದು,

ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ /ಬ್ಯಾನರ್ ಅಥವಾ ಇನ್ನು ಯಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವಿನಾಶ್ ಆದೇಶದಲ್ಲಿ ತಿಳಿಸಿದ್ದಾರೆ.

ಮದ್ಯ ಮಾರಾಟ ನಿಷೇಧ:

ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.16ರಂದು ನಡೆಯುವ ಉಪ ಚುನಾವಣೆಯ ಮತದಾನ ಶಾಂತಿ, ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ನಡೆಸಲು ಅನುಕೂಲವಾಗುವಂತೆ ಫೆ.14ರ ಸಂಜೆ 5 ಗಂಟೆಯಿಂದ ಫೆ.16ರ ಮಧ್ಯರಾತ್ರಿ 12 ಗಂಟೆವರೆಗೆ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಮದ್ಯದ ಸನ್ನದ್ದುಗಳನ್ನು ಮುಚ್ಚಲು, ಮದ್ಯ ಮಾರಾಟ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರನ್ ಆದೇಶ ಹೊರಡಿಸಿದ್ದಾರೆ.(ಮಗ್‌ಶಾಟ್‌ ಫೋಟೊ ಮಾತ್ರ ಬಳಸಿ)

14ಕೆಆರ್ ಎಂಎನ್‌ 7.ಜೆಪಿಜಿ

ರಾಮನಗರ ಜಿಲ್ಲಾಧಿಕಾರಿ ಅ‍ವಿನಾಶ್.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ