ಜ್ಞಾನಸುಧಾದಲ್ಲಿ ಟೀಚರ್ಸ್‌ ಡೇ: ನಿವೃತ್ತ ಶಿಕ್ಷಕರಿಗೆ ಸನ್ಮಾನ

KannadaprabhaNewsNetwork |  
Published : Sep 08, 2026, 03:15 AM IST
ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ ಸನ್ಮಾನ | Kannada Prabha

ಸಾರಾಂಶ

ಜ್ಞಾನಸುಧಾ ಶಿಕ್ಷಣ ಸಂಸ್ಥೆಗೆ ಅತಿಥಿಯಾಗಿ ಬರುವುದಕ್ಕಿಂತ ವಿದ್ಯಾರ್ಥಿಯಾಗಿ ಬರುವುದರಲ್ಲಿ ಸಂತೋಷವಿದೆ ಎಂದು ವಾಣಿಜ್ಯ ತೆರಿಗೆ ಉಪ ಆಯುಕ್ತ ಹೊಳೆಯಪ್ಪ ಎಚ್. ಹೇಳಿದರು.

ಉಡುಪಿ : ಜ್ಞಾನಸುಧಾ ಶಿಕ್ಷಣ ಸಂಸ್ಥೆಗೆ ಅತಿಥಿಯಾಗಿ ಬರುವುದಕ್ಕಿಂತ ವಿದ್ಯಾರ್ಥಿಯಾಗಿ ಬರುವುದರಲ್ಲಿ ಸಂತೋಷವಿದೆ ಎಂದು ವಾಣಿಜ್ಯ ತೆರಿಗೆ ಉಪ ಆಯುಕ್ತ ಹೊಳೆಯಪ್ಪ ಎಚ್. ಹೇಳಿದರು.

ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ ಮಾತನಾಡಿ, ತಮ್ಮ ಉಸಿರನ್ನು ವಿದ್ಯಾರ್ಥಿಗಳ ಉಸಿರಿನೊಂದಿಗೆ ಬೆಸೆಯುವ ಗುರುಗಳನ್ನು ಸದಾ ಸ್ಮರಿಸಬೇಕು ಎಂದರು.ಚಿತ್ರಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಉಮಾ ಮಾಧವಿ, ಮುಟ್ಲುಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ ರಮೇಶ್ ಕಲ್ಮಾಡಿ, ಬ್ರಹ್ಮಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಕುಮುದಾ ಎಸ್. ಹಾಗೂ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕಿ ಉಷಾ ಬಾಯಿ ಅವರನ್ನು ಸನ್ಮಾನಿಸಲಾಯಿತು.ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಟ್ರಸ್ಟಿ ವಿದ್ಯಾ ಸುಧಾಕರ ಶೆಟ್ಟಿ, ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀನಿಧಿ ಭಾಗವತ್, ಜೆ.ಇ.ಎ. ಸಂಯೋಜಕ ಪ್ರವೀಣ್ ಜೋನ್ ಡಿ ಅಲ್ಮೆಡಾ ಮತ್ತಿತರರು ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ಪ್ರಕಾಶ್ ಜೋಗಿ ವಂದಿಸಿದರು. ಭೌತಶಾಸ್ತ್ರ ಉಪನ್ಯಾಸಕ ದರ್ಶನ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಾವ ಪುರುಷಾರ್ಥಕ್ಕಾಗಿ ಬಿಜೆಪಿ ಪಾದಯಾತ್ರೆ?
ಪತ್ರಿಕಾ ವಿತರಕರಿಗೆ ಜೀವನ ಭದ್ರತೆ ಒದಗಿಸಲಿ