ಬೇಸಿಗೆ ತರಗತಿ ಆದೇಶ ರದ್ದುಪಡಿಸುವಂತೆ ಶಿಕ್ಷಕರ ಆಗ್ರಹ

KannadaprabhaNewsNetwork |  
Published : May 16, 2024, 12:53 AM IST
15ಎಚ್‌ವಿಆರ್‌1 | Kannada Prabha

ಸಾರಾಂಶ

ಎಸ್ಸೆಸ್ಸೆಲ್ಸಿ ಪರೀಕ್ಷೆ -1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನೆ ತರಗತಿಗಳನ್ನು ಮೇ 15 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನೀಡಿರುವ ಆದೇಶವನ್ನು ರದ್ದು ಪಡಿಸುವಂತೆ ಬುಧವಾರ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಹಾವೇರಿ

ಎಸ್ಸೆಸ್ಸೆಲ್ಸಿ ಪರೀಕ್ಷೆ -1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನೆ ತರಗತಿಗಳನ್ನು ಮೇ 15 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನೀಡಿರುವ ಆದೇಶವನ್ನು ರದ್ದು ಪಡಿಸುವಂತೆ ಕೋರಿ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ಸಹ ಶಿಕ್ಷಕರ ಸಂಘದ ಸಹಯೋಗದಲ್ಲಿ ಡಿಡಿಪಿಐ ಮೂಲಕ ಸರ್ಕಾರಕ್ಕೆ ಬುಧವಾರ ಮನವಿ ಸಲ್ಲಿಸಲಾಯಿತು.

ಶಿಕ್ಷಣ ಇಲಾಖೆಯು ರಜಾ ಸಹಿತ ಇಲಾಖೆಯಾಗಿದ್ದು, ಮೇ 7ರ ವರೆಗೂ ಎಲ್ಲ ಶಿಕ್ಷಕರು ಚುನಾವಣೆ ಕರ್ತವ್ಯ, ಬಿಎಲ್ಓ, ಮಸ್ಟರಿಂಗ್‌ ಸೇರಿದಂತೆ ಹಲವು ಕರ್ತವ್ಯ ನಿರ್ವಹಿಸಿದ್ದಾರೆ. ಅದಕ್ಕೂ ಪೂರ್ವ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯ ಮಾಡಿದ್ದಾರೆ. ಇದೀಗ ತಾನೆ ರಜೆ ಸಿಕ್ಕಿದ್ದು, ಹಲವಾರು ವೈಯಕ್ತಿಕ ಕೆಲಸ, ವೈದ್ಯಕೀಯ ಉಪಚಾರ, ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ. ಬಿರು ಬೇಸಿಗೆಯಲ್ಲಿ ತರಗತಿ ನಡೆಸಲು ಆದೇಶ ಮಾಡಿರುವುದು ಅವೈಜ್ಞಾನಿಕವಾಗಿದೆ. ಅಲ್ಲದೇ ಪದವಿಪೂರ್ವ ಉಪನ್ಯಾಸಕರಿಗೆ ಇಲ್ಲದ ಆದೇಶ ಕೇವಲ ಪ್ರೌಢ ಶಾಲಾ ಶಿಕ್ಷಕರಿಗೆ ಏಕೆ ಎಂಬ ಪ್ರಶ್ನೆ ಎದ್ದಿದೆ. ಇದು ಶಿಕ್ಷಕರ ನಡುವಿನ ತಾರತಮ್ಯ ನೀತಿ ಎಂದು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಕೊಡಲೇ ಈ ಆದೇಶ ರದ್ದುಪಡಿಸಿ ಶಿಕ್ಷಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಲಾಯಿತು. ಡಿಪಿಪಿಐ ಸುರೇಶ ಹುಗ್ಗಿ ಮನವಿಪತ್ರ ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್‌.ಪಿ. ಬಣಕಾರ, ಸಹ ಶಿಕ್ಷಕರ ಸಂಘ ಅಧ್ಯಕ್ಷ ಮಲ್ಲಿಕಾರ್ಜುನ ಶಾಂತಗಿರಿ, ಎನ್.ಎನ್. ಕುಂದೂರು, ರಾಕೇಶ್ ಜಿಗಳಿ, ರಮೇಶ ಮಲ್ಲಾಡದ, ಸುರೇಶ ಕಲ್ಮನಿ, ಎಸ್.ಡಿ. ಪರಡ್ಡಿ, ರವಿ ಇಟಗಿ, ವಿ. ರವಿ, ಬಸವರಾಜ ಮೆಡ್ಲೇರಿ, ಎಂ. ಎಸ್. ಕುಂಬಾರ ಇತರರು ಉಪಸ್ಥಿತರಿದ್ದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ