ಆಧುನಿಕ ಭಾರತ ನಿರ್ಮಾಣಕ್ಕೆ ಶಿಕ್ಷಕರ ಶ್ರಮ: ಲೆ.ಜ. ಅರುಣ್ ಅನಂತನಾರಾಯಣ್

KannadaprabhaNewsNetwork |  
Published : Aug 16, 2025, 12:03 AM IST
ವಿದ್ಯಾಗಿರಿಯ ಕೆ.ವಿ. ಸುಬ್ಬಣ್ಣ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ನಡೆದ 79ನೇ ಸ್ವಾತಂತ್ರ‍್ಯ ದಿನಾಚರಣೆ | Kannada Prabha

ಸಾರಾಂಶ

ವಿದ್ಯಾಗಿರಿಯ ಕೆ.ವಿ. ಸುಬ್ಬಣ್ಣ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ 79ನೇ ಸ್ವಾತಂತ್ರ‍್ಯ ದಿನಾಚರಣೆ ನಡೆಯಿತು. ಭಾರತೀಯ ಸೇನೆ ನಿವೃತ್ತ ಅಧಿಕಾರಿ ಲೆ. ಜನರಲ್ ಅರುಣ್ ಅನಂತನಾರಾಯಣ್ ಧ್ವಜಾರೋಹಣಗೈದು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ರೂಪಿಸಿ ಆಧುನಿಕ ಭಾರತ ನಿರ್ಮಿಸುವಲ್ಲಿ ಶ್ರಮವಹಿಸುತ್ತಿದ್ದಾರೆ ಎಂದು ಭಾರತೀಯ ಸೇನೆ ನಿವೃತ್ತ ಅಧಿಕಾರಿ ಲೆ. ಜನರಲ್ ಅರುಣ್ ಅನಂತನಾರಾಯಣ್ ಹೇಳಿದರು.

ವಿದ್ಯಾಗಿರಿಯ ಕೆ.ವಿ. ಸುಬ್ಬಣ್ಣ ಬಯಲು ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ ನಡೆದ 79ನೇ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಧ್ವಜಾರೋಹಣಗೈದು ಮಾತನಾಡಿದರು.

ನಿಜವಾದ ಸ್ವಾತಂತ್ರ‍್ಯ ಎಂದರೆ ಅಭಿವೃದ್ಧಿ, ಇದು ಪ್ರತಿಯೊಬ್ಬರಿಗೂ ತಲುಪಿದಾಗ ಹಾಗೂ ಪ್ರತಿಯೊಬ್ಬರೂ ಈ ಅಗತ್ಯ ಸೌಲಭ್ಯಗಳನ್ನು ಪಡೆದಾಗ ಸಾಧ್ಯವಾಗುವುದು ಎಂದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಸಂಸ್ಥೆಯ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ.ವಿನಯ ಆಳ್ವ, ಡಾ. ಗ್ರೀಷ್ಮಾ, ಡಾ.ಹನಾ, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ಉಪನ್ಯಾಸಕ ರಾಜೇಶ್ ಡಿಸೋಜ ಹಾಗೂ ವೇಣುಗೋಪಾಲ ಶೆಟ್ಟಿ ನಿರೂಪಿಸಿದರು.

-----------

ಜಿಟಿ ಜಿಟಿ ಮಳೆಯ ನಡುವೆಯೂ ವ್ಯವಸ್ಥಿತ ಆಚರಣೆಎನ್‌ಸಿಸಿ ಕೆಡೆಟ್ ಸೀನಿಯರ್ ಅಂಡರ್ ಆಫೀಸರ್ ಅರ್ಚನಾ ನಾಗರಾಜ್ ಅವರಿಂದ ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಎನ್‌ಸಿಸಿ ಜೂನಿಯರ್ ಅಂಡರ್ ಆಫೀಸರ್‌ಗಳಾದ ಸಂಜುಶ್ರೀ, ಗೀತಾ, ನಯನಾ ಹಾಗೂ ರಾಣಿ ಅತಿಥಿಗಳನ್ನು ವೇದಿಕೆಗೆ ಕರೆತಂದರು. ಪರೇಡ್ ಕಮಾಂಡರ್ ಭರತ್ ಗೌಡ ಅವರಿಂದ ವರದಿ ಪಡೆದು ಧ್ವಜರೋಹಣ ಮಾಡಲಾಯಿತು. ಜಿಟಿ ಜಿಟಿ ಮಳೆಯ ನಡುವೆಯೂ ವಿಚಲಿತರಾಗದೆ ವಂದೇ ಮಾತರಂ, ರಾಷ್ಟ್ರ ಗೀತೆ ಹಾಗೂ ದೇಶ ಭಕ್ತಿಗೀತೆ ಕೋಟಿ ಕಂಠೋನ್ಸೆ ಹಾಡುಗಳನ್ನು ಹಾಡುವ ಮೂಲಕ ವಿದ್ಯಾರ್ಥಿಗಳು ಸಂಭ್ರಮಿಸಿದರು.

ನಂತರ ಅಜಯ್ ವಾರಿಯರ್ ತಂಡದಿಂದ ಸಂಗೀತ ರಸಮಂಜರಿ ಕಾರ‍್ಯಕ್ರಮ ಆಯೋಜಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ