ಗುರುಗಳಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನ: ಶಾಸಕ ಪ್ರಕಾಶ ಕೋಳಿವಾಡ

KannadaprabhaNewsNetwork |  
Published : Mar 10, 2025, 12:18 AM IST
ಫೋಟೊ ಶೀರ್ಷಿಕೆ: 8ಆರ್‌ಎನ್‌ಆರ್1ರಾಣಿಬೆನ್ನೂರಿನ ಶಿಕ್ಷಕರ ಪತ್ತಿನ ಸಹಕಾರಿ ಸಂಘದಲ್ಲಿ ಏರ್ಪಡಿಸಲಾಗಿದ್ದ ಅಂತಾರಾಷ್ಟಿçÃಯ ಮಹಿಳಾ ದಿನಾಚರಣೆ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಸೇವಾ ಸ್ವೀಕಾರ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಶಾಸಕ ಪ್ರಕಾಶ ಕೋಳಿವಾಡ ಉದ್ಘಾಟಿಸಿದರು.  | Kannada Prabha

ಸಾರಾಂಶ

ಸರ್ಕಾರಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸಿ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕು. ಮಕ್ಕಳಿಗೆ ಕೌಶಲ್ಯಗಳ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು.

ರಾಣಿಬೆನ್ನೂರು: ನಮ್ಮ ಸಮಾಜದಲ್ಲಿ ವಿದ್ಯೆ ಕಲಿಸುವ ಗುರುಗಳಿಗೆ ವಿಶೇಷ ಸ್ಥಾನಮಾನವಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ನಗರದ ಶಿಕ್ಷಕರ ಪತ್ತಿನ ಸಹಕಾರಿ ಸಂಘದಲ್ಲಿ ಶನಿವಾರ ದೆಹಲಿ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ರಾಜ್ಯ, ಜಿಲ್ಲಾ, ತಾಲೂಕು ಘಟಕ, ಸ್ಥಳೀಯ ಪಿಕೆಕೆ ಇನಿಷಿಯೇಟಿವ್ಸ್, ನಗರಸಭೆ, ರಾಜ್ಯ ಸರ್ಕಾರಿ ನೌಕರರ ತಾಲೂಕು ಘಟಕದ ಆಶ್ರಯದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ತಾಲೂಕು ಘಟಕದ ನೂತನ ಪದಾಧಿಕಾರಿಗಳ ಸೇವಾ ಸ್ವೀಕಾರ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಮಕ್ಕಳನ್ನು ತಿದ್ದಿ ತೀಡುವ ಕೆಲಸ ಪಾಲಕರಿಗಿಂತ ಹೆಚ್ಚಾಗಿ ಶಿಕ್ಷಕರಿಗಿದೆ. ಯಾವುದೇ ಸಂಘಟನೆ ಯಶಸ್ಸು ಸಾಧಿಸಲು ಅದರಲ್ಲಿ ಒಗ್ಗಟ್ಟು ಇರಬೇಕು. ನಮ್ಮ ಶಿಕ್ಷಣ ಪದ್ಧತಿಯಲ್ಲಿ ವೃತ್ತಿಪರತೆ ತುಂಬಾ ಕಡಿಮೆಯಿದೆ. ಪದವಿ ಮುಗಿಸಿಕೊಂಡು ಬರುವ ಶೇ. 70ರಷ್ಟು ಜನರು ಉದ್ಯೋಗಕ್ಕೆ ಅರ್ಹರಿರುವುದಿಲ್ಲ. ಸರ್ಕಾರಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸಿ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕು. ಮಕ್ಕಳಿಗೆ ಕೌಶಲ್ಯಗಳ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು. ಜೀವನದ ಕೌಶಲ್ಯಗಳನ್ನು ಮಕ್ಕಳಿಗೆ ಹೇಳಿ ಕೊಡಬೇಕಾದ ಅನಿವಾರ್ಯತೆಯಿದೆ. ವೃತ್ತಿ ಕೌಶಲ್ಯ ತರಬೇತಿ ನೀಡಬೇಕು. ಇದರಿಂದ ಮಕ್ಕಳ ಜೀವನ ಅಭಿವೃದ್ಧಿ ಹೊಂದುತ್ತದೆ ಎಂದರು.

ಆವರಗೊಳ್ಳ ಪುರವರ್ಗಮಠದ ಓಂಕಾರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಚಂಪಕ ಬಿಸಲಹಳ್ಳಿ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷೆ ಡಾ. ಲತಾ ಮಳ್ಳೂರ, ಪಿಕೆಕೆ ಇನಿಷಿಯೇಟಿವ್ಸ್ ಅಧ್ಯಕ್ಷೆ ಪೂರ್ಣಿಮಾ ಕೋಳಿವಾಡ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮಂಜುನಾಥ ಕೆಂಚರೆಡ್ಡಿ, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ರಾಜಶ್ರೀ ಸಜ್ಜನರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಸುತ್ತಕೋಟಿ, ಕ್ಷೇತ್ರ ಸಮನ್ವಯಾಧಿಕಾರಿ ಮಂಜುನಾಯ್ಕ ಎಲ್., ರಾಜ್ಯ ಪ್ರಶಸ್ತಿ ಪುರಸ್ಕೃತ ಸಹಾಯಕ ಪ್ರಾಧ್ಯಾಪಕ ಅರುಣಕುಮಾರ ಚಂದನ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಸ್ಥಳೀಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ರೇಣುಕಾ ಬಸೆನಾಯಕರ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಸಬಲೀಕರಣ ಕುರಿತು ಹಾವೇರಿಯ ಕೃಷಿ ಹಾಗೂ ಗ್ರಾಮೀಣ ಯುವಜನ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಪರಿಮಳಾ ಜೈನ ಉಪನ್ಯಾಸ ನೀಡಿದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಕ್ರಿಯಾ ಸಮಿತಿ ಅಧ್ಯಕ್ಷ ಬಿ.ಕೆ. ಕಿತ್ತೂರ, ಎಸ್.ಸಿ. ಷಡಕ್ಷರಿಮಠ, ಜಿ.ಎಲ್. ಪದಕಿ, ಸರೋಜಿನಿ ಭರಮಗೌಡ್ರ, ಪದ್ಮಾವತಿ ಪಾಟೀಲ, ಎಚ್.ಟಿ. ಸಲ್ಮಾಖಾನ್, ಜಿ. ರೇಣುಕಮ್ಮ, ಸುಭಾಸ ಕುರುಬರ, ಬಸವರಾಜ ಧುಳೆಹೊಳಿ, ನಾಗರಾಜ ದೇವಾಂಗದ, ಮಾಲತೇಶ ಸಾವಂತಲವರ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ