ಶಿಕ್ಷಕರಲ್ಲಿದೆ ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ

KannadaprabhaNewsNetwork |  
Published : May 12, 2026, 02:15 AM IST
ಶಿಕ್ಷಕರ ಕೌಶಲ್ಯಾಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಾಸ ಉದ್ದೇಶದಿಂದ ಐದು ದಿನಗಳ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರೆಯಿತು. | Kannada Prabha

ಸಾರಾಂಶ

ದೇಶದ ಭವಿಷ್ಯ ಶಾಲಾ ಕೊಠಡಿಗಳಲ್ಲೇ ರೂಪುಗೊಳ್ಳುತ್ತದೆ ಎಂದು ಅನೇಕ ಮಹನೀಯರು ಹೇಳಿದ್ದಾರೆ. ಆ ಭವಿಷ್ಯವನ್ನು ರೂಪಿಸುವ ಶಕ್ತಿ ಶಿಕ್ಷಕರ ಕೈಯಲ್ಲಿದೆ. ಆದ್ದರಿಂದ ಶಿಕ್ಷಕರನ್ನು ಸದೃಢ, ಸೃಜನಾತ್ಮಕ ಹಾಗೂ ಆತ್ಮವಿಶ್ವಾಸಿ ವ್ಯಕ್ತಿಗಳನ್ನಾಗಿ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ.

ಧಾರವಾಡ:

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಅಧೀನದಲ್ಲಿರುವ ರಾಜೀವ್ ಗಾಂಧಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ಹಾಗೂ ರಾಜೀವ್ ಗಾಂಧಿ ವಿದ್ಯಾಲಯ ಸಿಬಿಎಸ್ಇ ಶಾಲೆ ಸಹಯೋಗದಲ್ಲಿ ರಾಷ್ಟ್ರೋತ್ಥಾನ ಪರಿಷತ್‌ ಹಾಗೂ ಪ್ರಶಿಕ್ಷಣ ಭಾರತಿ ವತಿಯಿಂದ ಶಿಕ್ಷಕರ ಕೌಶಲ್ಯಾಭಿವೃದ್ಧಿ ಮತ್ತು ವ್ಯಕ್ತಿತ್ವ ವಿಕಾಸ ಉದ್ದೇಶದಿಂದ ಐದು ದಿನಗಳ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರೆಯಿತು.

ನಗರದ ಹೋಮಿಯೋಪಥಿ ಸೆಮಿನಾರ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಯುಕೆಟಿ ಮಂಗಳೂರು ಟ್ರಸ್ಟಿ ಅಶ್ವಿನಿ ಎನ್. ನಾಯಕ ಉದ್ಘಾಟಿಸಿ, ದೇಶದ ಭವಿಷ್ಯ ಶಾಲಾ ಕೊಠಡಿಗಳಲ್ಲೇ ರೂಪುಗೊಳ್ಳುತ್ತದೆ ಎಂದು ಅನೇಕ ಮಹನೀಯರು ಹೇಳಿದ್ದಾರೆ. ಆ ಭವಿಷ್ಯವನ್ನು ರೂಪಿಸುವ ಶಕ್ತಿ ಶಿಕ್ಷಕರ ಕೈಯಲ್ಲಿದೆ. ಆದ್ದರಿಂದ ಶಿಕ್ಷಕರನ್ನು ಸದೃಢ, ಸೃಜನಾತ್ಮಕ ಹಾಗೂ ಆತ್ಮವಿಶ್ವಾಸಿ ವ್ಯಕ್ತಿಗಳನ್ನಾಗಿ ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

ಪಾಲಿಕೆಯ ಸಭಾನಾಯಕ ಈರೇಶ ಅಂಚಟಗೇರಿ ಮಾತನಾಡಿ, ಶಿಕ್ಷಕರು ಸಮಾಜ ನಿರ್ಮಾಣದ ಶಿಲ್ಪಿಗಳು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಕರು ಕೇವಲ ಪಾಠ ಬೋಧನೆಗೆ ಸೀಮಿತವಾಗದೇ, ವಿದ್ಯಾರ್ಥಿಗಳಲ್ಲಿ ಮೌಲ್ಯಾಧಾರಿತ ಶಿಕ್ಷಣ, ನಾಯಕತ್ವ ಗುಣ ಹಾಗೂ ಸೃಜನಾತ್ಮಕ ಚಿಂತನೆ ಬೆಳೆಸುವ ಜವಾಬ್ದಾರಿ ಹೊಂದಿದ್ದಾರೆ. ಇಂತಹ ಅಭಿಮುಖೀಕರಣ ಕಾರ್ಯಕ್ರಮಗಳು ಶಿಕ್ಷಕರ ವೃತ್ತಿಪರ ಸಾಮರ್ಥ್ಯ ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದರು.

ರಾಜೀವ್ ಗಾಂಧಿ ಸಿಬಿಎಸ್ಇ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಬಸವರಾಜ ತಾಳಿಕೋಟಿ ಅಧ್ಯಕ್ಷತೆ ವಹಿಸಿದ್ದರು. ಗೌರವ ಅತಿಥಿಗಳಾಗಿ ಕಾರ್ಯದರ್ಶಿ ಎಸ್. ರಾಧಾಕೃಷ್ಣನ್ ಹಾಗೂ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಜಿ.ಜಿ. ಹಿರೇಮಠ ಇದ್ದರು. ಮುಖ್ಯ ಉಪನ್ಯಾಸಕರಾಗಿ ರಾಷ್ಟ್ರೋತ್ಥಾನ ಪರಿಷತ್ ಪ್ರಶಿಕ್ಷಣ ಭಾರತಿ ಕ್ರಿಯಾ ಸಮಿತಿ ಸದಸ್ಯರಾದ ವೇದವತಿ ಪುರೋಹಿತ್ ಶಿಕ್ಷಕರ ಅಭಿವೃದ್ಧಿ, ಬೋಧನಾ ವಿಧಾನಗಳು ಹಾಗೂ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣದ ಕುರಿತು ಉಪನ್ಯಾಸ ನೀಡಿದರು. ಪ್ರಾಂಶುಪಾಲರಾದ ವೀಣಾ ತುಪ್ಪದ, ಡಾ. ಗ್ರೆಟ್ಟಾ ಕೆ., ಡಾ. ಆನಂದ ಹೊಸೂರ ಹಾಗೂ ಮಧುಮತಿ ಗುರವ ಇದ್ದರು.

11ಡಿಡಬ್ಲೂಡಿ8

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮರ್ಪಕವಾಗಿ ಬಸ್ ಸಂಚಾರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕುಡಿವ ನೀರಿನ ಸಮಸ್ಯೆ