ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಹೇಮಗಿರಿ ಬಿಜಿಎಸ್ ಸಂಸ್ಥೆಯಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಮಾತನಾಡಿ, ಶಿಕ್ಷಣ ಸಂಸ್ಥೆಗಳನ್ನು ನಡೆಸುವ ಜವಾಬ್ದಾರಿ ಹೊತ್ತಿರುವವರು ಕೂಡಾ ಶೈಕ್ಷಣಿಕ ಅರ್ಹತೆ ಮೇಲೆ ಶಿಕ್ಷಕರ ನೇಮಕವನ್ನು ಮಾಡಿಕೊಳ್ಳುತ್ತಾರೆ. ಆದರೆ, ಮಕ್ಕಳಿಗೆ ಪಾಠವನ್ನು ಹೇಳಲು ಕೇವಲ ಪದವಿಗಳು ಮಾತ್ರ ನೆರವಾಗುವುದಿಲ್ಲ ಎಂದರು.
ಶಿಕ್ಷಕರಿಗೂ ಕೂಡಾ ಶಿಕ್ಷಣ ತಜ್ಞರಿಂದ ಪ್ರತಿ ತಿಂಗಳು ಪುನರ್ ಮನನ ಶಿಬಿರಗಳನ್ನು ಆಯೋಜಿಸಿ ಅವರನ್ನು ಕೂಡಾ ಒರೆಗೆ ಹಚ್ಚುವರಿ ಕೆಲಸ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಬಿಜಿಎಸ್ ಸಂಸ್ಥೆಯಿಂದ ವಯಸ್ಸಿನ ಅಂತರವಿದೆ. ಪ್ರತಿಯೊಬ್ಬ ಶಿಕ್ಷಕರಿಗೂ ಕೂಡಾ ಹೊಸತನ ಅಳವಡಿಸಿಕೊಂಡು ಮಕ್ಕಳಿಗೆ ಪಾಠವನ್ನು ಕಲಿಸಲು ಇಂತಹ ಪ್ರಯತ್ನ ಮಾಡುತ್ತಿದ್ದೇವೆ ಎಂದರು.ಕಾಲೇಜು ಶಿಕ್ಷಣ ಇಲಾಖೆ ನಿವೃತ್ತ ಪತ್ರಾಂಕಿತ ವ್ಯವಸ್ಥಾಪಕ ಬಳ್ಳೇಕೆರೆ ಮಂಜುನಾಥ್ ಮಾತನಾಡಿ, ಶಿಕ್ಷಕ ವೃತ್ತಿ ಕೇವಲ ಪಾಠ ಬೋಧನೆಗೆ ಸೀಮಿತವಾಗಿಲ್ಲ. ಶಿಕ್ಷಕ ಸದಾ ಸಂಶೋಧಕನಾಗಿರಬೇಕು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರು ನಿರಂತರ ಅಧ್ಯಯನ ಮತ್ತು ಸಂಶೋಧನಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಆನಂದ್ ಚಾಲನೆ ನೀಡುವರು. ಮೆರವಣಿಗೆಯು ವೇದಿಕೆ ಕಾರ್ಯಕ್ರಮದವರೆಗೂ ಸಾಗಲಿದೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಉಪಸ್ಥಿತಿಯಲ್ಲಿ ಶಾಸಕ ಪಿ.ರವಿಕುಮಾರ್ ಸಮಾರಂಭ ಉದ್ಘಾಟಿಸುವರು. ಸಂಸ್ಥೆ ಅಧ್ಯಕ್ಷ ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಚಿಂತಕ ಸುರೇಶ್ ಗೌತಮ್ ಪ್ರಧಾನ ಭಾಷಣ ಮಾಡುವರು. ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್, ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕುಮಾರ್ ಕೊಪ್ಪ ಆಗಮಿಸುವರು ಎಂದರು.