ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ವತಿಯಿಂದ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗುರುಗಳಿಲ್ಲದಿದ್ದರೆ ಸಮಾಜದ ಸ್ಥಿತಿಗತಿಗಳು ಬೇರಡೆಯೇ ಸಾಗುತ್ತಿತ್ತು, ಗುರುವಿಂದಲೆ ಕೆಡಕುಗಳು ಮರೆಯಾಗಿ ಒಳಿತಾಗುತ್ತಿರುವುದು. ಆದುದರಿಂದಲೇ ಪ್ರತಿಯೊಬ್ಬರ ಜೀವನದಲ್ಲಿಯೂ ಗುರು ಮಹತ್ವ ಪೂರ್ಣವಾಗಿದ್ದಾರೆ ಎಂದು ಗುರುವಿನ ಮಹತ್ವ ವಿವರಿಸಿದರು.ಬೇಸರದ ಸಂಗತಿ: ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿರುವುದು ಬೇಸರದ ಸಂಗತಿಯಾಗಿದೆ. ಸರ್ಕಾರಿ ಶಾಲೆಗಳಿಗೆ ಮಕ್ಕಳು ದಾಖಲಾಗಲು ಶಾಲೆಗಳಲ್ಲಿ ಅನೇಕ ಬದಲಾವಣೆ ಹಾಗೂ ನೂತನ ಕಾರ್ಯಕ್ರಮಗಳನ್ನು ತರಲಾಗುತ್ತಿದೆ ಎಂದರು.
ನಿವೃತ್ತರಾಗಿರುವ ಶಿಕ್ಷಕರಿಗೆ ಮತ್ತೆ ಪುನಹ ಅವಕಾಶ ಕಲ್ಪಿಸುವುದರ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ನಿವೃತ್ತಿ ಹೊಂದಿದವರು ಸಹ ಮತ್ತೆ ಪುನಹ ಅತಿಥಿ ಶಿಕ್ಷಕರಾಗಿ ಬೋಧಿಸಲು ಇಚ್ಛಿಸಿದರೆ ಅವರಿಗೆ ಅವಕಾಶ ಕಲ್ಪಿಸುವುದರ ಕುರಿತು ಅಧಿಕಾರಿಗಳಿಗೆ ಸಲಹೆ ನೀಡಿದರು.
ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಮೈಸೂರಿನ ಉಪನ್ಯಾಸಕರಾದ ಎಸ್ ಪಿ ನಾಗರಾಜು ಅವರು ಮಾತನಾಡಿ "ಗುರುವಿಂದ ಬಂಧುಗಳು ಉಪಚರಿಸಬೇಕು, ದೈವಗಳು ಗುರುವಿಂದಲಾದುದು ಪುಣ್ಯ ಲೋಕಕ್ಕೆ, ಗುರುವಿಂದ ಮುಕ್ತಿ ಸರ್ವಜ್ಞ "
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಪ್ರಧಾನ ಕಾರ್ಯದರ್ಶಿ ಚೇತನ್ ರವರು ಮಾತನಾಡಿ, ಅತ್ಯುತ್ತಮ ಸೇವೆ ಸಲ್ಲಿಸಿ ಸಾವಿರಾರು ಮಕ್ಕಳಿಗೆ ಬೆಳಕು ತೋರಿದ ಹಾಗೆಯೇ ಸಮಯಕ್ಕೆ ಸರಿಯಾಗಿ ಆಗಮಿಸಿ ವಿದ್ಯಾರ್ಥಿಗಳ ಬದುಕಲ್ಲಿ ಜ್ಯೋತಿ ಆಗುವ ಶಿಕ್ಷಕರಿಗೆ ನಮನ ಸಲ್ಲಿಸಿದರು. ಎರಡು ಬಾರಿ ಉಪ ರಾಷ್ಟ್ರಪತಿ ಒಂದು ಬಾರಿ ರಾಷ್ಟ್ರಪತಿ ಹಾಗೂ ಕುಲಪತಿಯಾಗಿ ಇದೆಲ್ಲವುದಕ್ಕಿಂತ ಮಿಗಿಲಾಗಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಸರ್ವಪಲ್ಲಿ ರಾಧಾಕೃಷ್ಣನ್ ರವರನ್ನು ಸ್ಮರಿಸುತ್ತಾ ಶಿಕ್ಷಕರ ದಿನಾಚರಣೆಯನ್ನು ನಡೆಸಿದ ಜಿಲ್ಲಾ ಆಡಳಿತ ಹಾಗೂ ಶಾಸಕರಾದ ಮಂತರ್ ಗೌಡ ರವರಿಗೂ ಧನ್ಯವಾದ ಸಲ್ಲಿಸಿದರು.
ನಿವೃತ್ತ ಶಿಕ್ಷಕರಿಗೆ ಇದೇ ಸಂದರ್ಭದಲ್ಲಿ ಶಾಸಕರು ಸನ್ಮಾನಿಸಿದರು.
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಸದಾಶಿವಯ್ಯ ಪಲ್ಲೆದ್, ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್ ದೈಹಿಕ ಶಿಕ್ಷಕರ ಸಂಘ ಅಧ್ಯಕ್ಷರಾದ ಪೂರ್ಣೇಶ್, ಜಿಲ್ಲಾ ಪದವಿ ಪೂರ್ವ ಕಾಲೇಜು, ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದೇವಕಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮೋಹನ್ ಪೆರಾಜೆ ಮತ್ತಿತರರು ಇದ್ದರು.