ಕನ್ನಡ ಭಾಷೆ ಉಳಿವಿಗೆ ಶಿಕ್ಷಕರ ಪಾತ್ರ ಪ್ರಮುಖ: ವಿಜಯಕುಮಾರ ತೇಗಲತಿಪ್ಪಿ

KannadaprabhaNewsNetwork |  
Published : Oct 06, 2026, 01:30 AM IST
ಅಫಜಲಪುರ ಪಟ್ಟಣದ ಶ್ರೀ ಗುರು ಮಳೇಂದ್ರ ಶಿವಾಚಾರ್ಯರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. | Kannada Prabha

ಸಾರಾಂಶ

ಕನ್ನಡ ಉಳಿಸಿ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕಲಬುರಗಿ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಹೇಳಿದರು.

ಕನ್ನಡಪ್ರಭ ವಾರ್ತೆ ಅಫಜಲಪುರ

ಕನ್ನಡ ಉಳಿಸಿ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕಲಬುರಗಿ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಹೇಳಿದರು.

ಪಟ್ಟಣದ ಶ್ರೀ ಮಳೇಂದ್ರ ಶಿವಾಚಾರ್ಯರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಫಜಲಪುರ ತಾಲೂಕು ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸಾರ್ಥಕ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಗೆ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವ ಮೂಲಕ ಕನ್ನಡದ ಬೆಳವಣಿಗೆಗೆ ಪ್ರಮುಖ ಕೊಡುಗೆ ನೀಡುತ್ತಿದ್ದಾರೆ ಎಂದರು.

ಮುಖಂಡ ಬಸಣ್ಣ ಗುಣಾರಿ ಮಾತನಾಡಿ, ಇದುವರೆಗೆ ತಾಲೂಕಿನಲ್ಲಿ ಪುರುಷರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಈ ಬಾರಿ ಮಹಿಳೆ ಅಧ್ಯಕ್ಷರಾಗಿ ಉತ್ತಮ ಕಾರ್ಯ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಫಜಲಪುರ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಇನ್ನಷ್ಟು ಉತ್ತಮವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಸಂಶೋಧಕ ಸಾಹಿತಿ ಮುಡಬಿ ಗುಂಡೇರಾವ ಮಾತನಾಡಿ, ಕಲಬುರಗಿ ಜಿಲ್ಲೆಯಲ್ಲಿ ವಿಜಯಕುಮಾರ ತೇಗಲತಿಪ್ಪಿ ಅವರು ಅಧ್ಯಕ್ಷರಾದ ನಂತರ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿದಂತೆ ಅದ್ಭುತ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ರಾಜ್ಯದಲ್ಲಿ ಕನ್ನಡಕ್ಕಾಗಿ ಇಂತಹ ನಿರಂತರ ಕಾರ್ಯಕ್ರಮಗಳು ನಡೆಯುತ್ತಿರುವುದು ವಿರಳವಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ವೇಗವಾಗಿ ಕನ್ನಡಪರ ಕಾರ್ಯಕ್ರಮಗಳು ನಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಪ್ರಭಾವತಿ ಮೇತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳಲ್ಲಿ ಜ್ಞಾನ, ಸಂಸ್ಕಾರ ಹಾಗೂ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು.

ಸಾನಿಧ್ಯ ವಹಿಸಿ ಶ್ರೀ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿದರು. ಕಸಾಪ ಗೌರವ ಕಾರ್ಯದರ್ಶಿ ಧರ್ಮಣ್ಣ ಧನ್ನಿ, ಚಂದ್ರಶೇಖರ ಕರಜಗಿ, ಶ್ರೀ ಶೈಲ ಮೇತ್ರೆ, ಪ್ರಭು ಪುಲಾರಿ, ಅಬ್ಬಾಸಲಿ ನಧಾಪ, ಸಂಜೀವ ಬಗಲಿ, ರವಿಕಾಂತ ಬಿರಾದಾರ, ಶಿವಾನಂದ ಚಿಂಚೋಳಿ, ಮಹೇಶ ಆಲೆಗಾಂವ, ಕಸಾಪ ತಾಲೂಕು ಅಧ್ಯಕ್ಷೆ ಪ್ರಭಾವತಿ ಮೇತ್ರೆ, ಈರಣ್ಣ ಎಂ. ಗುಣಾರಿ, ಮುರುಗೇಂದ್ರ ಮಸಳಿ, ಪ್ರತಿಭಾ ಮಹೇಂದ್ರಕರ, ಪರಮಾನಂದ ಸರಸಂಬಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ದಾಸಿಮಯ್ಯ ಅವರು ಕನ್ನಡವನ್ನು ತಮ್ಮ ವಚನಗಳಲ್ಲಿ ಸುಂದರವಾಗಿ ವರ್ಣಿಸಿದ್ದಾರೆ. ಬಸವಾದಿ ಶರಣರು, ದಾಸರು ಹಾಗೂ ಸಂತರು ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಮಠ-ಮಂದಿರಗಳೂ ಕನ್ನಡದ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡಿವೆ. ಕನ್ನಡ ಭಾಷೆ ಮತ್ತಷ್ಟು ಬೆಳೆಯಬೇಕು.ಮಠ-ಮಂದಿರಗಳ ಆಶ್ರಯವೂ ಕನ್ನಡದ ಬೆಳವಣಿಗೆಗೆ ಸಹಕಾರಿಯಾಗಿದೆ. ಅಫಜಲಪುರ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಬೆಳವಣಿಗೆಗೆ ನಮ್ಮ ಬೆಂಬಲ ಸದಾ ಇರುತ್ತದೆ ಎಂದು ಶ್ರೀ ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲಿನಪುಡಿ ಕಲಬೆರಕೆ ಪ್ರಕರ: ಸಿಬಿಐಗೆ ವಹಿಸಲು ಆಗ್ರಹಿಸಿ ಪ್ರತಿಭಟನೆ
ಮನ್ಮುಲ್ ಅಕ್ರಮಗಳ ಕುರಿತು ತನಿಖೆಗೆ ಮಾಜಿ ಅಧ್ಯಕ್ಷ ಆಗ್ರಹ