ಮಕ್ಕಳ ಉತ್ತಮರಾಗಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯ: ನ್ಯಾಯಾಧೀಶ ಟಿ.ಇನ್ ಇನವಳ್ಳಿ

KannadaprabhaNewsNetwork | Published : Jun 13, 2024 12:48 AM

ಸಾರಾಂಶ

ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಈ ಸಮಾಜದಾಗಿದೆ. ಬಾಲಕಾರ್ಮಿಕರಾಗುವುದನ್ನು ತಡೆಯಬೇಕಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಇನ್ ಇನವಳ್ಳಿ ತಿಳಿಸಿದರು. ಹಾಸನದಲ್ಲಿ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಾಲ ಕಾರ್ಮಿಕ ವಿರೋಧಿ ದಿನ । ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ

ಕನ್ನಡಪ್ರಭ ವಾರ್ತೆ ಹಾಸನ

ಮಕ್ಕಳ ಭವಿಷ್ಯ ಉತ್ತಮವಾಗಿ ರೂಪಿಸುವಲ್ಲಿ ತಂದೆ ತಾಯಿ, ಶಿಕ್ಷಕರ ಪ್ರಮುಖ ಪಾತ್ರವಿದ್ದು, ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಈ ಸಮಾಜದಾಗಿದೆ. ಬಾಲಕಾರ್ಮಿಕರಾಗುವುದನ್ನು ತಡೆಯಬೇಕಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಟಿ.ಇನ್ ಇನವಳ್ಳಿ ತಿಳಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಹಾಗೂ ವಿವಿಧ ಸಂಘ ಸಂಸ್ಥೆಗಳು ಹಾಸನ ಜಂಟಿಯಾಗಿ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಈ ಪಿಡುಗನ್ನು ತೊಡೆಯಲು ಕಾಯ್ದೆ ಕಾನೂನುಗಳ ಬಗ್ಗೆ ಅರಿವು ಶಿಕ್ಷಕರಿಗೆ ಬೇಕಿದೆ. ಇದರಿಂದ ಸಮಾಜವು ಉತ್ತಮ ಮಾರ್ಗದಲ್ಲಿ ಸಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಬಾಲಕಾರ್ಮಿಕರನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರುವುದು ಎಲ್ಲರ ಹೊಣೆಗಾರಿಕೆಯಾಗಿದೆ. ಎಲ್ಲರೂ ಸಮರ್ಥವಾಗಿ ನಿಭಾಯಿಸಿದಲ್ಲಿ ಬಾಲಕಾರ್ಮಿಕ ಪದ್ದತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ, ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಪುಟ್ಟಸ್ವಾಮಿ ಕೆ.ಎಂ. ಬಾಲಕಾರ್ಮಿಕ ಪದ್ದತಿಯ ನಿರ್ಮೂಲನೆಯ ಪ್ರತಿಜ್ಞಾವಿಧಿ ಬೋಧನೆ ಮಾಡಿದರು.

ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿಯ ಬಗ್ಗೆ ಅರಿವು ಅಗತ್ಯವಿದ್ದು ಸಮಾಜದ ಎಲ್ಲ ವರ್ಗದ ಎಲ್ಲಾ ಹಂತದ ಜನರಿಗೆ ತಮ್ಮ ಜವಾಬ್ದಾರಿಯ ಬಗ್ಗೆ ತಿಳಿಸುವ ಮೂಲಕ ಈ ಪಿಡುಗನ್ನು ತೊಲಗಿಸಬೇಕಾಗಿದೆ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಡಿ.ಟಿ.ಪ್ರಸನ್ನ ಮಾತನಾಡಿ, ೧೯೫೬ ರಲ್ಲಿಯೇ ಬಾಲಕಾರ್ಮಿಕ ನಿಷೇಧ ಕಾಯ್ದೆ ಜಾರಿಯಾಗಿದ್ದರೂ ಸಹ ಈ ಪಿಡುಗು ಇನ್ನೂ ಜೀವಂತವಾಗಿದೆ. ಎಲ್ಲರ ಸಹಯೋಗ, ಸಹಕಾರ, ಸಮನ್ವಯ ವಹಿಸಿದ್ದಲ್ಲಿ ಮಾತ್ರವೇ ಈ ಸಮಸ್ಯೆಯನ್ನು ನೀಗಿಸಲು ಸಾಧ್ಯ ಎಂದು ತಿಳಿಸಿದರು.

ಡಾ.ವಿನುತ, ಡಾ.ಸುರೇಶ, ಡಾ.ವೆಂಕಟನರಸಯ್ಯ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಎಚ್.ಟಿ.ಕೋಮಲ, ಅಪರ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಹೇಮಗಂಗೋತ್ರಿಯ ಉಪನ್ಯಾಸಕರಾದ ಡಾ.ಮಹೇಶ್, ಕೃಷ್ಣೇಗೌಡ, ಕಾರ್ಮಿಕ ಅಧಿಕಾರಿ ಯಮುನಾ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಸ್ವಯಂ ಸೇವಕರು ಇದ್ದರು.

Share this article