ಶಿಕ್ಷಣ ವ್ಯವಸ್ಥೆಗೆ ತಕ್ಕಂತೆ ಶಿಕ್ಷಕರೂ ಬದಲಾಗಬೇಕು

KannadaprabhaNewsNetwork |  
Published : Sep 06, 2024, 01:02 AM IST
5ಎಚ್‍ಆರ್‍ಆರ್ 4 -1 ನಗರದ ಗುರು ಭವನದಲ್ಲಿ ಗುರುವಾರ ನಡೆದ ಶಿಕ್ಷಕ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ನಗರಸಭಾ ಅಧ್ಯಕ್ಷೆ ಕವಿತಾ ಬೇಡರ, ಕ್ಷೇತ್ರಶಿಕ್ಷಣಾಧಿಕಾರಿ ಡಿ.ದುರುಗಪ್ಪ, ಎಚ್.ಚಂದ್ರಪ್ಪ, ಶರಣ ಕುಮಾರ್ ಹೆಗಡೆ ಹಾಗೂ ಇತರರಿದ್ದರು. | Kannada Prabha

ಸಾರಾಂಶ

ಶಿಕ್ಷಣ ವ್ಯವಸ್ಥೆ ಬದಲಾಗಿದೆ. ಅದರಂತೆ ನಾವುಗಳು ಬದಲಾಗಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ಶಿಕ್ಷಕರಿಲ್ಲದೇ ಶಿಕ್ಷಣ ನೀಡುವ ವ್ಯವಸ್ಥೆ ಬಂದರೆ ಆಶ್ಚರ್ಯಪಡಬೇಕಿಲ್ಲ ಎಂದು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಮಂಜುನಾಥ್ ಹೇಳಿದರು.

ಕನ್ನಡಪ್ರಭ ವಾರ್ತೆ ಹರಿಹರ

ಶಿಕ್ಷಣ ವ್ಯವಸ್ಥೆ ಬದಲಾಗಿದೆ. ಅದರಂತೆ ನಾವುಗಳು ಬದಲಾಗಬೇಕು. ಇಲ್ಲದಿದ್ದರೆ ಭವಿಷ್ಯದಲ್ಲಿ ಶಿಕ್ಷಕರಿಲ್ಲದೇ ಶಿಕ್ಷಣ ನೀಡುವ ವ್ಯವಸ್ಥೆ ಬಂದರೆ ಆಶ್ಚರ್ಯಪಡಬೇಕಿಲ್ಲ ಎಂದು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಮಂಜುನಾಥ್ ಹೇಳಿದರು.

ನಗರದ ಗುರು ಭವನದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ, ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಶಿಕ್ಷಕ ವೃತಿಯಲ್ಲಿರುವವರಿಗೆ ಮೊದಲು ಸಹನೆ, ತಾಳ್ಮೆ, ಸಮಯ ಪಾಲನೆ ಹಾಗೂ ಭಾಷೆಯ ಮೇಲೆ ಹಿಡಿತವಿರಬೇಕು. ಆಗ ಮಾತ್ರ ಪರಿಪೂರ್ಣ ಶಿಕ್ಷಕರಾಗಲು ಸಾಧ್ಯ. ಅಜ್ಞಾನದಿಂದ ಸುಜ್ಞಾನದ ಕಡೆ ಕರೆದುಕೊಂಡು ಹೋಗುವವರು ಮಾತ್ರ ಒಬ್ಬ ಪರಿಪೂರ್ಣ ಗುರು ಅಥವಾ ಶಿಕ್ಷಕನಾಗಿರುತ್ತಾನೆ. ಅಂತಹ ವೃತ್ತಿಯಲ್ಲಿರುವ ನಾವುಗಳು ನಿರಂತರ ಅಧ್ಯಯನದ ಮೂಲಕ ವಿದ್ಯಾರ್ಥಿಗಳಿಗೆ ಹೊಸತನವನ್ನು ತುಂಬುವ ಮೂಲಕ ಉಜ್ವಲ ಭವಿಷ್ಯ ರೂಪಿಸೋಣ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಅಧ್ಯಕ್ಷೆ ಕವಿತಾ ಬೇಡರ ಮಾತನಾಡಿ ಹಿಂದುಳಿದ ಮಕ್ಕಳ ಅಭಿವೃದ್ಧಿಗೆ ಶಿಕ್ಷಕರು ಹಾಗೂ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಂತಹ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕೈಲಾದ ಸಹಕಾರ ನೀಡುತ್ತೇನೆ ಎಂದರು.

ಇದೇ ವೇಳೆ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶಿಕ್ಷಕರನ್ನು ಹಾಗೂ ಪ್ರತಿಭಾನ್ವಿತ ವಿಧ್ಯಾರ್ಥೀಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ನಗರದ ಶ್ರೀ ಹರಿಹರೇಶ್ವರ ದೇವಸ್ಥಾನದಿಂದ ಗುರು ಭವನವರೆಗೆ ನಡೆದ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್‍ ಭಾವಚಿತ್ರ ಮೆರಣಿಗೆಗೆ ನಗರಸಭಾ ಅಧ್ಯಕ್ಷೆ ಕವಿತಾ ಬೇಡರ್ ಚಾಲನೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರುಗಪ್ಪ, ಪದವೀಧರೇತರ ಮುಖ್ಯಶಿಕ್ಷಕರ ಸಂಘದ ಬೀರಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕುಬೇಂದ್ರಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವೀರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಎಚ್.ಚಂದ್ರಪ್ಪ, ಕಾರ್ಯದರ್ಶಿ ಶರಣ ಕುಮಾರ್ ಹೆಗಡೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿಜಯ ಮಹಾಂತೇಶ್, ಬಿ.ಆರ್.ಸಿ. ಕೃಷ್ಣಪ್ಪ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಈಶಪ್ಪ ಬೂದಿಹಾಳ, ಸರ್ಕಾರಿ ನೌಕರ ಸಂಘದ ನಿಕಟ ಪೂರ್ವ ಅಧ್ಯಕ್ಷ ಎ.ಕೆ.ಭೂಮೇಶ್, ಎಂ.ಉಮ್ಮಣ್ಣ, ಡಿ.ಎಂ. ಮಂಜುನಾಥಯ್ಯ, ಆಷ್ಪಾಕ್ ಅಹಮದ್, ರೇವಣಸಿದ್ದಪ್ಪ ಅಂಗಡಿ, ಮಂಜಪ್ಪ, ಶಿಕ್ಷಕ ಶಿಕ್ಷಕಿಯರು, ಇಲಾಖೆ ಸಿಬ್ಬಂದಿ ಪಾಲ್ಗೊಂಡದ್ದರು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!