ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ಶಾಲೆಗಳ ಶಿಕ್ಷಕರಿಗೆ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ತಮ್ಮ ಮಕ್ಕಳು ಅಕ್ಷರದ ಜ್ಞಾನದ ಬೆಳಕಿನ ಶಕ್ತಿಯ ಮೂಲಕ ಸಾಧನೆ ಮಾಡಬೇಕು ಎಂಬ ಆಸೆಯೂ ಪೋಷಕರಲ್ಲಿ ಸಾಮಾನ್ಯವಾಗಿದೆ ಎಂದರು.
ಈ ಹಿಂದೆ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಿ ಕೈ ತೊಳೆದುಕೊಳ್ಳುತ್ತಿದ್ದ ಪೋಷಕರು ಇಂದು ತಮ್ಮ ಮಕ್ಕಳು ಒಳ್ಳೆಯ ಶಿಕ್ಷಣ ಪಡೆದುಕೊಂಡು ವೈದ್ಯರು, ಇಂಜಿನಿಯರ್ ಗಳು ಸೇರಿದಂತೆ ಒಳ್ಳೆಯ ಹುದ್ದೆಗಳನ್ನು ಅಲಂಕರಿಸಿ ಸಾಧಕರಾಗಬೇಕು ಎಂಬ ಕನಸನ್ನು ಹೊತ್ತು ಲಕ್ಷಾಂತರ ರುಪಾಯಿ ಹಣವನ್ನು ನೀರಿನಂತೆ ಖರ್ಚು ಮಾಡಿ ಶಿಕ್ಷಣ ಕೊಡಿಸುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಗುರಿ ಮುಟ್ಟಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿ ಡಾ.ಪ್ರಜ್ವಲ್ ಮಾತನಾಡಿ, ಶಿಕ್ಷಕರು ಪ್ರತಿನಿತ್ಯವೂ ಹೊಸ ಹೊಸ ವಿಚಾರಗಳನ್ನು ಓದಿ ಅರ್ಥ ಮಾಡಿಕೊಂಡು ತಮ್ಮ ಬೋಧನಾ ಸಾಮರ್ಥ್ಯ ಹೆಚ್ಚಿಸಿಕೊಂಡು ಪಾಠ- ಪ್ರವಚನಗಳಲ್ಲಿ ತೊಡಗಬೇಕು. ಸೂಕ್ತ ಮಾರ್ಗದರ್ಶನ ಹಾಗೂ ತರಬೇತಿ ನೀಡಿ ಮಕ್ಕಳ ಯಶಸ್ಸು ಹಾಗೂ ಕೀರ್ತಿಗೆ ಪೂರಕವಾಗಿ ತಮ್ಮನ್ನು ಸಮರ್ಪಣೆ ಮಾಡಿಕೊಂಡು ಕೆಲಸ ಮಾಡಿ ಎಂದು ತಿಳಿಸಿದರು.