ಶಿಕ್ಷಣ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಹೊಸ ಬದಲಾವಣೆಗಳು ಆಗುತ್ತಿದ್ದು, ಅದಕ್ಕೆ ಅನುಗುಣವಾಗಿ ಶಿಕ್ಷಕರು ಹೊಸ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ.
ಶಿರಹಟ್ಟಿ: ಬದಲಾಗುತ್ತಿರುವ ಡಿಜಿಟಲ್, ತಾಂತ್ರಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಕರು ಹೊಸತನಕ್ಕೆ ಒಡ್ಡಿಕೊಂಡು ಬೋಧನಾ ಕೌಶಲ್ಯ ಬೆಳೆಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಕರೆ ನೀಡಿದರು.ಪಟ್ಟಣದ ಎಫ್.ಬಿ. ಪೂಜಾರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ೨೦೨೬- ೨೭ನೇ ಸಾಲಿನ ಸಾಂಘಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಹೊಸ ಬದಲಾವಣೆಗಳು ಆಗುತ್ತಿದ್ದು, ಅದಕ್ಕೆ ಅನುಗುಣವಾಗಿ ಶಿಕ್ಷಕರು ಹೊಸ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದರು.
ಶಿಕ್ಷಕರು ಪಠ್ಯಪುಸ್ತಕದ ಬೋಧನೆಗೆ ಮಾತ್ರ ಸೀಮಿತವಾಗದೆ, ವಿದ್ಯಾರ್ಥಿಗಳಲ್ಲಿ ಚಿಂತನಾ ಶಕ್ತಿ, ಸೃಜನಶೀಲತೆ, ನೈತಿಕ ಮೌಲ್ಯಗಳು ಮತ್ತು ವೈಜ್ಞಾನಿಕ ಮನೋಭಾವ ಬೆಳೆಸುವತ್ತ ಹೆಚ್ಚಿನ ಗಮನ ಹರಿಸಬೇಕು. ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು ಪಾಠ ಬೋಧಿಸಿದರೆ ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ ಹೆಚ್ಚುತ್ತದೆ ಎಂದರು.ಆರ್.ಎನ್. ದೇಶಪಾಂಡೆ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ರಮೇಶ ಕಲ್ಲನಗೌಡ್ರ ಮಾತನಾಡಿ, ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಶ್ರಮಿಸುತ್ತಿದ್ದು, ಶಿಕ್ಷಕರು, ಪೋಷಕರು ಮತ್ತು ಸಮಾಜವೂ ಈ ಕಾರ್ಯದಲ್ಲಿ ಕೈಜೋಡಿಸಬೇಕು. ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ವ್ಯಕ್ತಿತ್ವ ವಿಕಸನ, ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಚಾರ್ಯ ಬಿ.ಜಿ. ಗಿರಿತಮ್ಮಣ್ಣವರ, ಕೆ.ಎ. ಬಳಿಗೇರ ಮಾತನಾಡಿದರು. ರಾಜೇಶ್ವರಿ ಕಪ್ಪತ್ತನವರ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಫಕೀರೇಶ ರಟ್ಟಿಹಳ್ಳಿ, ಜಾನು ಲಮಾಣಿ, ಗಂಗಾಧರ ಮೆಣಸಿನಕಾಯಿ, ರಾನಡೆ, ಪ್ರಕಾಶ ಮೇಟಿ, ಬಸವರಾಜ ವಡವಿ ಸೇರಿ ಅನೇಕರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.