ಹುಬ್ಬಳ್ಳಿ:
ತಾಲೂಕಿನ ಅಂಚಟಗೇರಿ ಗ್ರಾಮದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಏರ್ಪಡಿಸಿದ್ದ ಶಿಕ್ಷಣ ಸೇವಾ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೆಲವು ಮಕ್ಕಳು ಮನೆಯಲ್ಲಿ ತಂದೆ-ತಾಯಿಯ ಮಾತು ಕೇಳುವುದಿಲ್ಲ. ಆದರೆ, ಶಾಲೆಯಲ್ಲಿ ಶಿಕ್ಷಕರ ಮಾತನ್ನು ಚಾಚೂ ತಪ್ಪದೇ ಕೇಳುತ್ತಾರೆ. ಹೀಗಾಗಿ, ಶಿಕ್ಷಕರು ಮಕ್ಕಳಿಗೆ ಪಠ್ಯದ ಜತೆಗೆ ನೈತಿಕ ಶಿಕ್ಷಣ ಬೋಧಿಸಬೇಕು. ಇಲಾಖೆಯಿಂದ ಶಿಕ್ಷಕರಿಗೆ ಜವಾಬ್ದಾರಿ ನೀಡುವ ಜತೆಗೆ ಅವರ ಕೆಲಸವನ್ನು ಗೌರವಿಸುವ ಉದ್ದೇಶದಿಂದ ಶಿಕ್ಷಣ ಸನ್ಮಾನ ಕಾರ್ಯಕ್ರಮದ ಮೂಲಕ ಅವರನ್ನು ಗೌರವಿಸಲಾಗುತ್ತಿದೆ ಎಂದರು.ವಸತಿ ಶಾಲೆ ಪ್ರಾಚಾರ್ಯ ವಿಶ್ವನಾಥ ಹುಲಸದಾರ ಮಾತನಾಡಿದರು. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಜಿಲ್ಲೆಯ ವಿವಿಧ ವಸತಿ ಶಾಲೆಗಳ ಉತ್ತಮ ಶಿಕ್ಷಕರು, ಪ್ರಾಚಾರ್ಯರು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.