ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿ ಮರೆಯಬಾರದು: ಸತೀಶ ನಾಯಕ ಭಾವಿಕೇರಿ

KannadaprabhaNewsNetwork |  
Published : Jun 15, 2026, 03:30 AM IST
13ಎಚ್.ಎಲ್.ವೈ-1: ಶುಕ್ರವಾರ ಸಂಜೆ ಪಟ್ಟಣದ ಕಾರ್ಮೆಲ್ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ತಾಲೂಕಿನ ಶಿಕ್ಷಕರ ಪರವಾಗಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರನ್ನು ಮತ್ತು ಹಳಿಯಾಳ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಶಿರಸಿ ಶೈಕ್ಷಣಿಕ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಸತೀಶ ನಾಯಕ ಭಾವಿಕೇರಿ ಹಾಗೂ ಹಳಿಯಾಳ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ ನಾಯಕ ಹಾಗೂ ಪದಾಧಿಕಾರಿಗಳನ್ನು ಪಟ್ಟಣದ ಕಾರ್ಮೆಲ್ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಗೌರವಿಸಲಾಯಿತು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಿಗೆ ಸನ್ಮಾನ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಹಳಿಯಾಳ

ಶಿರಸಿ ಶೈಕ್ಷಣಿಕ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಸತೀಶ ನಾಯಕ ಭಾವಿಕೇರಿ ಹಾಗೂ ಹಳಿಯಾಳ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ ನಾಯಕ ಹಾಗೂ ಪದಾಧಿಕಾರಿಗಳನ್ನು ಪಟ್ಟಣದ ಕಾರ್ಮೆಲ್ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಸತೀಶ ನಾಯಕ ಭಾವಿಕೇರಿ, ಮಕ್ಕಳ ಸೇವೆಯನ್ನು ಮಾಡಲು ಸರ್ಕಾರ ನಮಗೆ ವೇತನ ನೀಡುತ್ತಿದೆ ಎಂಬುವುದನ್ನು ನಾವು ಯಾವತ್ತೂ ಮರೆಯಬಾರದು. ಆದರೆ ಶಿಕ್ಷಕರಿಗೆ ಇಂದು ಕಲಿಸುವುದನ್ನು ಬಿಟ್ಟು ಬೇರೆ ಅನ್ಯ ಹೊರೆಯನ್ನು ಹಾಕಲಾಗಿದೆ ಎಂಬ ಸತ್ಯವೂ ನಮಗೆ ಗೊತ್ತು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಶಿಕ್ಷಕರು ಅನ್ಯ ಜವಾಬ್ದಾರಿಯನ್ನು ನಿಭಾಯಿಸುವುದರೊಂದಿಗೆ ಗುಣಮಟ್ಟದ ಶಿಕ್ಷಣ ನೀಡುವ ತಮ್ಮ ಪ್ರಾಥಮಿಕ ಜವಾಬ್ದಾರಿಯನ್ನು ಮರೆಯಬಾರದು ಎಂದರು.

ಹಳಿಯಾಳ ತಾಲೂಕಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ ನಾಯಕ ಮಾತನಾಡಿ ತಾಲೂಕಿನಲ್ಲಿ ಕ್ರಿಯಾಶೀಲ ಸಮರ್ಪಣಾ ಮನೋಭಾವದ ಶಿಕ್ಷಕ ವೃಂದವು ಇದೇ. ಇದರ ಪರಿಣಾಮ ಗುಣಮಟ್ಟದ ಶಿಕ್ಷಣವನ್ನು ತಾಲೂಕಿನಲ್ಲಿ ನೀಡಲಾಗುತ್ತಿದೆ. ಹೀಗಿರುವಾಗ ಶಿಕ್ಷಕರ ಸಮಸ್ಯೆಗಳಿಗೆ ಬೇಡಿಕೆಗಳಿಗೆ ಸ್ಪಂಧಿಸುವ ಜವಾಬ್ದಾರಿಯು ನಮ್ಮದಾಗಿದೆ. ಸೇವಾ ಸಂಬಂಧಿತ ಯಾವುದೇ ಸಮಸ್ಯೆಗಳಿದ್ದರೇ ಒಂದು ಕರೇ ಮಾಡಿ ನಾವು ತಕ್ಷಣ ಬರುತ್ತೆವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಇಒ ಪ್ರಮೋದ ಮಹಾಲೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ನಾಯಕ ಭಾವಿಕೇರಿ, ಜಿಲ್ಲಾ ಸಹ ಕಾರ್ಯದರ್ಶಿ ರಮೇಶ ಪಾಟೀಲ, ಹಳಿಯಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ ನಾಯಕ, ಕಾರ್ಯದರ್ಶಿ ಉದಯ ನಾಯಕ, ಉಪಾಧ್ಯಕ್ಷ ವೆಂಕಟೇಶ್ ನಾಯಕ, ಮಮತಾ ಕಾಮತ, ಖಜಾಂಚಿ ಆನಂದಕುಮಾರ ತೋರ್ಲೆಕರ, ಸಹ ಕಾರ್ಯದರ್ಶಿ ನಫೀಸಾಬೇಗಂ ಅತ್ತಾಲುಲ್ಲಾ ರೆಹಮಾನಬಾಯಿ, ಸಂಘಟನಾ ಕಾರ್ಯದರ್ಶಿ ಶ್ವೇತಾ ಸೊಲ್ಲಾಪುರಿಯವರನ್ನು ಸನ್ಮಾನಿಸಲಾಯಿತು.

ಶಿಕ್ಷಕರ ಸೊಸೈಟಿಯ ನಿರ್ದೇಶಕ ಗೋಪಾಲ ತೋರ್ಲೆಕರ, ಕ್ಷೇತ್ರ ಸಮನ್ವಾಯಾಧಿಕಾರಿ ಮಹಾದೇವಿ ಚೌಗುಲಾ, ತಾಲೂಕ ದೈಹಿಕ ಶಿಕ್ಷಣ ಪರಿವೀಕ್ಷಕಿ ಜ್ಯೋತಿಪ್ರಭಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಸ್.ಎಸ್. ನೂಲಿನ್, ಬಿ.ಆರ್.ಸಿ ಕೇಂದ್ರದ ವಿಷ್ಣು ನಾಯಕ ಹಾಗೂ ಶಿಕ್ಷಕ ಸಂಘದ ಪ್ರಮುಖರು ಇದ್ದರು.

ಶಿಕ್ಷಕರಾದ ಗಣಪತಿ ನಾಯಕ, ಕಿರಣ ಯಗಟಿ, ರಾಧಾ ಬಿ., ಸಚಿನ ಕೊರಿಯಾರ್, ಮಹೇಶ ನಾಯಕ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲೆ ಪ್ರಾರಂಭವಾದರೂ ಶಿಥಿಲ ಕೊಠಡಿಯಲ್ಲಿಯೇ ಮಕ್ಕಳಿಗೆ ಪಾಠ
ಮಣ್ಣಿನ ಫಲವತ್ತತೆ ರಕ್ಷಣೆ ಪ್ರತಿ ರೈತರ ಜವಾಬ್ದಾರಿ: ಚೇತನಾ ಪಾಟೀಲ