ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಉತ್ತರ ಬಡಾವಣೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ‘ನಮ್ಮ ಶಾಲೆ, ನಮ್ಮ ಜವಾಬ್ದಾರಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯತ್ತದೆ ಎಂಬ ನಂಬಿಕೆಯನ್ನು ಮಕ್ಕಳ ಪೋಷಕರಲ್ಲಿ ಉಂಟು ಮಾಡಿದರೆ, ತಾನಾಗಿಯೇ ಮಕ್ಕಳ ಸಂಖ್ಯೆ ಹೆಚ್ಚಳವಾಗಲಿದೆ. ಈ ನಿಟ್ಟಿನಲ್ಲಿ ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು ಮತ್ತು ಇಲಾಖೆಯ ಜವಾಬ್ದಾರಿಯೂ ಇದೆ ಎಂದರು.ಸರಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಉಚಿತವಾಗಿ ಪುಸ್ತಕ, ಬಿಸಿಯೂಟ, ಕ್ಷೀರಭಾಗ್ಯ, ಶೂ ಭಾಗ್ಯ ನೀಡುತ್ತಿದೆ. ಅಲ್ಲದೆ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಿಸಲು ಚಕ್ಕಿ, ಬಾಳೆ ಹಣ್ಣು ಮತ್ತು ಮೊಟ್ಟೆಯನ್ನು ನೀಡುತ್ತಿದೆ. ನಾನು ಕೂಡ ಶಾಲೆಯಲ್ಲಿ ಕೊಡುತ್ತಿದ್ದ ಗೋಧಿ ನುಚ್ಚಿನ ಉಪ್ಪಿಟ್ಟು ತಿಂದು ಕಲಿತವನು ಎಂದರು.
ಮಹಾನಗರ ಪಾಲಿಕೆ ಮಾಜಿ ಕೌನ್ಸಿಲರ್ ಮಂಜುನಾಥ್ ಮಾತನಾಡಿ, ಒಂದು ಶಾಲೆಯ ಬೆಳವಣಿಗೆಗೆ ಎಲ್ಲರ ಪಾತ್ರವೂ ಮುಖ್ಯ. 2018ರಿಂದಲೂ ಈ ಶಾಲೆಯ ಎಸ್.ಡಿ.ಎಂ.ಸಿ ಸದಸ್ಯನಾಗಿ ಕಾರ್ಯನಿರ್ವಹಿಸುತ್ತಾ, ಶಾಲೆಯ ಭೌತಿಕ ಬೆಳವಣಿಗೆಗೆ ಹಲವು ಸಹಕಾರ ನೀಡಿದ್ದೇವೆ. ಸರಕಾರ ಕೂಡ ಶಾಲೆಯಲ್ಲಿರುವ ಶಿಕ್ಷಕರ ಕೊರತೆಯನ್ನು ನೀಗಿಸಬೇಕು. ಗುಣಮಟ್ಟದ ಶಿಕ್ಷಣದ ಭರವಸೆಯನ್ನು ಶಿಕ್ಷಕರು ಮೂಡಿಸಬೇಕಿದೆ ಎಂದರು.
ಮುಖ್ಯ ಶಿಕ್ಷಕ ಡಿ.ಶಿವಸ್ವಾಮಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಗಂಗಾಧರ್, ಅಕ್ಷರ ದಾಸೋಹ ಅಧಿಕಾರಿ ಸುಧಾಕರ್, ಎಸ್.ಡಿ.ಎಂ.ಸಿ ಅಧ್ಯಕ್ಷ ಓಬಯ್ಯ, ಉಪಾಧ್ಯಕ್ಷ ಜಭೀನಾಭಾನು, ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ತಿಮ್ಮೇಗೌಡ, ಎಸ್.ಡಿ.ಎಂ.ಸಿ ಸದಸ್ಯರು, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಪೋಷಕರು ಭಾಗವಹಿಸಿದ್ದರು.