ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಸರ್ಕಾರಿ ಪರಿಶಿಷ್ಟ ಜಾತಿ ನೌಕರರ ವೇದಿಕೆ ಹಾಗೂ ಶಿಕ್ಷಣ ಇಲಾಖೆ ಎಲ್ಲಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರದಲ್ಲಿ ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ವ್ಯಕ್ತಿತ್ವ ವಿಕಸನ, ಒತ್ತಡ ನಿರ್ವಹಣೆ ಮತ್ತು ಸಮಯ ನಿರ್ವಹಣೆ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರು ಸಮಾಜದಲ್ಲಿ ಮಾದರಿಯಾಗಿರಬೇಕು, ಎಲ್ಲಾ ಕ್ಷೇತ್ರಗಳು ಕಲುಷಿತಗೊಳ್ಳುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಶಿಕ್ಷಕರ ವೃತ್ತಿ ಪವಿತ್ರವಾಗಿರುವುದರಿಂದ ಚುನಾವಣೆ ಹೊರತುಪಡಿಸಿ ಶಿಕ್ಷಕರು ರಾಜಕೀಯದಲ್ಲಿ ದೂರ ಇರಬೇಕೆಂದು ಸಲಹೆ ನೀಡಿದರು.ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಸಹಕಾರದಿಂದ ಮಳವಳ್ಳಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಹಿನ್ನೆಲೆಯಲ್ಲಿ ಪ್ರತಿಯೊಂದು ಮನೆಯಲ್ಲಿಯೂ ಶಿಕ್ಷಣವಂತರನ್ನು ಕಾಣುವ ಜೊತೆಗೆ ದೊಡ್ಡ ಹುದ್ದೆಗಳನ್ನು ಹೊಂದಿದ್ದರು. ಆದರೆ, ಇತ್ತಿಚಿನ ದಿನಗಳಲ್ಲಿ ತಾಲೂಕಿನಲ್ಲಿ ಉನ್ನತ ಶಿಕ್ಷಣ ಪಡೆದವರ ಸಂಖ್ಯೆ ಕಡಿಮೆಯಾಗುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು ಬೇಸರ ವ್ಯಕ್ತಪಡಿಸಿದರು.
ಶಿಕ್ಷಕರಿಗೆ ವ್ಯಕ್ತಿತ್ವ ವಿಕಾಸನಕ್ಕೆ ಸಹಕಾರಿಯಾಗುವಂತೆ ಐಎಎಸ್ ಐಪಿಎಸ್ ತರಬೇತಿ ನೀಡುವ ಸಂಪನ್ಮೂಲ ವ್ಯಕ್ತಿಯಿಂದ ಕಾರ್ಯಾಗಾರ ನಡೆಸಲಾಗುತ್ತಿದೆ. ಶಿಕ್ಷಕರು ಪ್ರಯೋಜನ ಪಡೆದು ನಿಮ್ಮನ್ನೇ ನಂಬಿರುವ ವಿದ್ಯಾರ್ಥಿಗಳ ಬದುಕಿಗೆ ಆಶಾಕಿರಣವಾಗಬೇಕೆಂದು ಹೇಳಿದರು.
ತಾಂತ್ರಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಸುರೇಶ್‌ಕುಮಾರ್ ಮಾತನಾಡಿ, ಶಿಕ್ಷಣದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ವ್ಯಾಸಂಗ ಮಾಡಲು ಆಸಕ್ತಿ ಮೂಡಿಸುವಂತೆ ಶಿಕ್ಷಕರು ವಿದ್ಯಾರ್ಥಿಗಳ ಮನಸ್ಸನ್ನು ಪರಿವರ್ತಿಸಿ ಶಿಕ್ಷಕರು ಶಿಕ್ಷಣ ನೀಡಬೇಕೆಂದು ತಿಳಿಸಿದರು.
ಬಿಇಒ ಎಸ್ ಚಂದ್ರಪಾಟೀಲ್ ಮಾತನಾಡಿ, ಶಿಕ್ಷಕರನ್ನು ನಂಬಿ ಸಾವಿರಾರು ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸುತ್ತಾರೆ. ಶಿಕ್ಷಕರು ತಮ್ಮಲ್ಲಿರುವ ಪ್ರತಿಮೆ ಅನಾವರಣಗೊಳಿಸಿ ವಿದ್ಯಾರ್ಥಿಗಳಿಗೆ ಗುಣತ್ಮಾಕ ಶಿಕ್ಷಣವನ್ನು ನೀಡಬೇಕೆಂದು ಸಲಹೆ ನೀಡಿದರು