ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶಿಕ್ಷಣ ಇಲಾಖೆಯಿಂದ ನಡೆದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಣವನ್ನು ನೀಡುವ ಜವಾಬ್ದಾರಿಯನ್ನು ಶಿಕ್ಷಕರಿಗೆ ಸಂವಿಧಾನಾತ್ಮಕದಡಿ ನೀಡಲಾಗಿದೆ. ಕೇವಲ ಶಿಕ್ಷಣ ನೀಡುವ ಶಿಕ್ಷಕರಾಗದೇ ಬದುಕನ್ನು ಕಲಿಸುವ ಗುರುಗಳಾಗಬೇಕು ಎಂದರು.
ಈ ಹಿಂದೆ ಶೈಕ್ಷಣಿಕವಾಗಿ ಮಳವಳ್ಳಿ ಮೈಸೂರು ಮಹಾರಾಜರ ಸಹಕಾರದಿಂದ ಹೆಚ್ಚಿನ ವಿದ್ಯಾವಂತರನ್ನು ಕಾಣಬಹುದಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಉನ್ನತ ಹುದ್ದೆ ಆಲಂಕರಿಸುವವರ ಸಂಖ್ಯೆ ಕಡಿಮೆಯಾಗುತ್ತಿರುವುದನ್ನು ಗಮನಿಸಿ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಿ ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಮಲ್ಪಿ ಮೀಡಿಯಾ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಶಿಕ್ಷಕರು ರಾಜಕೀಯದಿಂದ ದೂರ ಉಳಿದು ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕು ಎಂದರು.ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಶಿಕ್ಷಕರಿಗೆ ವೃತ್ತಿಯಲ್ಲಿ ಗೌರವವಿರಬೇಕು. ವೃತ್ತಿಯಿಂದ ನಿವೃತ್ತಿಯಾದರೂ ಕೂಡ ಪ್ರವೃತ್ತಿಯಿಂದ ಸಮಾಜಕ್ಕೆ ಬೆಳಕನ್ನು ಕೊಡುವ ಮಾರ್ಗದರ್ಶಕರಾಗಬೇಕು. ಜೀವನ ಮೌಲ್ಯಗಳಿಗೆ ಒತ್ತು ನೀಡಬೇಕು. ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯದ ಬೀಜವನ್ನು ಬಿತ್ತಬೇಕೆಂದು ಸಲಹೆ ನೀಡಿದರು.
ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಅವರು ಜಾತಿ ಧರ್ಮ, ಗಂಡು ಹೆಣ್ಣು ಎನ್ನದೇ ಶಿಕ್ಷಣವನ್ನು ನೀಡಿದ ಮಹಾತಾಯಿಯಾಗಿದ್ದಾರೆ. ಮೇಲ್ವರ್ಗದ ಅವಮಾನಗಳನ್ನು ಸಹಿಸಿಕೊಂಡು ಸಮಾಜಕ್ಕೆ ಶಿಕ್ಷಣ ನೀಡಿದ ಹಿನ್ನೆಲೆಯಲ್ಲಿ ಇಂದಿಗೂ ಅವರನ್ನು ಸ್ಮರಿಸಿಕೊಳ್ಳುತ್ತಿದೇವೆ. ಶಿಕ್ಷಣ ತಜ್ಞ ಹಾಗೂ ಭಾರತದ ಉಪರಾಷ್ಟ್ರಪತಿ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟುಹಬ್ಬದ ನೆನಪಿಗಾಗಿ ಶಿಕ್ಷಕರ ದಿನಾಚರಣೆ ಆಯೋಜಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಪ್ರತಿಭಾವಂತ ಶಿಕ್ಷಕರನ್ನು ಅಭಿನಂದಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಲೊಕೇಶ್, ತಾಪಂ ಇಒ ಶ್ರೀನಿವಾಸ್, ಡಿವೈಎಸ್‌ಪಿ ಯಶ್ವಂತಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜು, ಡಯಟ್ ಉಪ ನಿರ್ದೇಶಕ ಕೆ.ಯೋಗೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ ಉಮಾ, ಕ್ಷೇತ್ರ ಸಮನ್ವಯಾಧಿಕಾರಿ ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಸೇರಿದಂತೆ ಇತರರು ಇದ್ದರು.