ಯಲಬುರ್ಗಾ: ಮಕ್ಕಳ ಶೈಕ್ಷಣಿಕ ಸುಧಾರಣೆಗೆ ಶಿಕ್ಷಣ ಇಲಾಖೆಯಿಂದ ಸಾಕಷ್ಟು ಕಾರ್ಯಕ್ರಮ ಜಾರಿಗೊಳಿಸಿದೆ. ಇದರ ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಶಿಕ್ಷಕರ ಶ್ರಮಿಸಬೇಕು ಎಂದು ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶರಣಗೌಡ ಪೊಲೀಸ್ ಪಾಟೀಲ್ ಹೇಳಿದರು.
ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಹಂತದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಉಂಟಾಗಿರುವ ಅಂತರ ನಿವಾರಿಸಿ,ಅವರ ಕಲಿಕಾ ಸಾಮರ್ಥ್ಯ ಹೆಚ್ಚಿಸುವಲ್ಲಿ ಸೇತುಬಂಧ ಉಪಕ್ರಮ ಮಹತ್ವದ ಪಾತ್ರ ವಹಿಸಲಿದೆ.ಅವಳಿ ತಾಲೂಕಿನ ಶಿಕ್ಷಕರು ಗ್ರಾಮೀಣ ಭಾಗದ ಮಕ್ಕಳಿಗೆ ಪ್ರಗತಿಗೆ ಹೆಚ್ಚು ಶಿಕ್ಷಣ ಕಲಿಕೆಗೆ ವಿಶೇಷ ಬೋಧನೆ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ತಾಲೂಕು ನೌಕರರ ಸಂಘದ ಅಧ್ಯಕ್ಷ ಸಿದ್ದಲಿಂಗಪ್ಪ ಶ್ಯಾಗೋಟಿ, ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಎಸ್.ವಿ. ಧರಣಾ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಗೆ ಉತ್ತಮ ಶಿಕ್ಷಣ ನೀಡಲು ಶಿಕ್ಷಕರು ಹೊಸ ಬೋಧನಾ ವಿಧಾನ ಅಳವಡಿಸಿಕೊಳ್ಳಬೇಕು. ಜತೆಗ ಮಾತೃಭಾಷೆ ಹಾಗೂ ಇತರೆ ಭಾಷೆಗಳ ಮೂಲಕ ಬೋಧನೆ ಮಾಡಿದರೆ ಮಕ್ಕಳ ಕಲಿಕೆ ಸಹಕಾರಯಾಗಲಿದೆ.ಈ ತರಬೇತಿ ಕಾರ್ಯಾಗಾರವು ಶಿಕ್ಷಕರಲ್ಲಿ ಹೊಸ ಉತ್ಸಾಹ ಮೂಡಿಸಿ ಮಕ್ಕಳ ಕಲಿಕೆ ಮತ್ತಷ್ಟು ಪರಿಣಾಮಕಾರಿಯಾಗಿಸುವಲ್ಲಿ ನೆರವಾಗಲಿದೆ ಎಂದರು.ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಸಂಚಾಲಕಿ ಮಂಜುಳಾ ಮಾತನಾಡಿ, ಮಕ್ಕಳಲ್ಲಿ ಓದು, ಬರಹ ಹಾಗೂ ಗಣಿತದ ಮೂಲಭೂತ ಕೌಶಲ್ಯ ಬಲಪಡಿಸಲು ದ್ವಿಭಾಷಾ ಬೋಧನೆ ಅತ್ಯಂತ ಸಹಕಾರಿಯಾಗಿದೆ ಎಂದು ತಿಳಿಸಿದರು.