ನಾಳೆ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರ ಸ್ಮರಣೆ: ಲಿಂಗರಾಜು

KannadaprabhaNewsNetwork |  
Published : Sep 18, 2026, 03:30 AM IST
ನಾಳೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಅದ್ಧೂರಿ ಶಿಕ್ಷಕರ ದಿನಾಚರಣೆ | Kannada Prabha

ಸಾರಾಂಶ

ಚಾಮರಾಜನಗರ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ-ಶಿಕ್ಷಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.೧೯ರಂದು ಬೆಳಿಗ್ಗೆ ೧೦.೩೦ಕ್ಕೆ ನಗರದ ಸೂರ್ಯೋದಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಲಿಂಗರಾಜು ಎಂಎಲ್‌ಜಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಚಾಮರಾಜನಗರ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ-ಶಿಕ್ಷಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.೧೯ರಂದು ಬೆಳಿಗ್ಗೆ ೧೦.೩೦ಕ್ಕೆ ನಗರದ ಸೂರ್ಯೋದಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಲಿಂಗರಾಜು ಎಂಎಲ್‌ಜಿ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹಲವು ವರ್ಷಗಳಿಂದ ಅನುಭವ, ಸಮರ್ಪಣೆ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಅನೇಕ ಪ್ರತಿಭಾವಂತ ಶಿಕ್ಷಕ-ಶಿಕ್ಷಕಿಯರಿದ್ದಾರೆ. ಆದರೆ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ದೊರೆಯುವ ರೀತಿಯಲ್ಲಿ ಖಾಸಗಿ ಶಾಲಾ ಶಿಕ್ಷಕರಿಗೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ಪ್ರಶಸ್ತಿ ಮತ್ತು ಗೌರವಗಳಲ್ಲಿ ಸಮರ್ಪಕ ಅವಕಾಶ ದೊರೆಯುತ್ತಿಲ್ಲ ಅದ್ದರಿಂದ ಈ ಬಾರಿ ನಾವೇ ಆಚರಿಸುತ್ತಿದ್ದೇವೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಸಮಾರಂಭವನ್ನು ಉದ್ಘಾಟಿಸಲಿದ್ದು, ಜಿಲ್ಲೆಯ ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶಪ್ರಸಾದ್, ಎ.ಆರ್. ಮಂಜುನಾಥ್, ವಿವೇಕಾನಂದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ನಾನು ಅಧ್ಯಕ್ಷತೆ ವಹಿಸುತ್ತೇನೆ ಎಂದರು,

ವಿಶೇಷ ಅಹ್ವಾನಿತರಾಗಿ ಡಿಡಿಪಿಐ ಚಂದ್ರಪಾಟೀಲ್, ರುಪ್ಸಾ ರಾಜ್ಯಾಧ್ಯಕ್ಷ ಡಾ. ಹಾಲನೂರು ಎಸ್. ಲೇಪಾಕ್ಷ ಕುಸಮಾ, ರಾಜ್ಯಾಧ್ಯಕ್ಷ ಡಾ.ಎಸ್. ಸತ್ಯಮೂರ್ತಿ, ಜಿಲ್ಲಾ ಗೌರವಾಧ್ಯಕ್ಷ ಎಸ್. ಬಾಲಸುಬ್ರಹ್ಮಣ್ಯಂ, ಎಂ. ರಾಜೇಂದ್ರನ್, ಎನ್. ನಂಜುಂಡಸ್ವಾಮಿ ಭಾಗವಹಿಸಲಿದ್ದಾರೆ ಎಂದರು.

ಮುಂದಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಸಾಧಿಸಲು ಶ್ರಮಿಸುತ್ತಿರುವ ಶಿಕ್ಷಕರಿಗೆ ಪ್ರೋತ್ಸಾಹ ನೀಡುವುದು ಹಾಗೂ ಅವರಲ್ಲಿ ಹೊಸ ಉತ್ಸಾಹ ಮತ್ತು ಜವಾಬ್ದಾರಿಯನ್ನು ಮೂಡಿಸುವುದು ಕಾರ್ಯಕ್ರಮದ ಮತ್ತೊಂದು ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಉತ್ತಮ ಫಲಿತಾಂಶ, ವ್ಯಕ್ತಿತ್ವ ವಿಕಾಸ, ಮೌಲ್ಯಾಧಾರಿತ ಶಿಕ್ಷಣ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಒಟ್ಟಾರೆ ಕೊಡುಗೆಯನ್ನು ಪರಿಗಣಿಸಿ ೫೦ಕ್ಕೂ ಹೆಚ್ಚು ಶಿಕ್ಷಕ-ಶಿಕ್ಷಕಿಯರಿಗೆ ‘ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ-ಶಿಕ್ಷಕಿ ಪ್ರಶಸ್ತಿ-೨೦೨೬’ ನೀಡಿ ಗೌರವಿಸಲಾಗುವುದು ಎಂದರು,

ಜಿಲ್ಲೆಯ ೧೦೦ಕ್ಕೂ ಹೆಚ್ಚು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಸುಮಾರು ೧,೫೦೦ರಿಂದ ೨,೦೦೦ ಶಿಕ್ಷಕ-ಶಿಕ್ಷಕಿಯರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು,

ಗೌರವಾಧ್ಯಕ್ಷ ಎಂ.ರಾಜೇಂದ್ರನ್, ಕಾರ್ಯದರ್ಶಿ ಡಿ.ಮಂಜುನಾಥ್, ಖಜಾಂಚಿ ಮೋಹನ್, ನಿರ್ದೇಶಕರಾದ ಮಾದೇಶ್, ನಂಜುಂಡಸ್ವಾಮಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಲಿತಾಂಶದ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಪ್ರತಿಭಟನಾ ಸಭೆ
​ಸರ್ಕಾರಿ ಸೌಲಭ್ಯ ಅರ್ಹರಿಗೆ ಮಾತ್ರ ತಲುಪಿಸಿ: ಸಂಸದೆ