ಕನ್ನಡಪ್ರಭ ವಾರ್ತೆ ಹಾಸನ
ನಗರದ ಹಾಸನಾಂಬಾ ಕಲಾಕ್ಷೇತ್ರದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹಾಸನ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಹಾಗೂ ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿ, ಶಿಕ್ಷಕರ ಮೂಲ ಕರ್ತವ್ಯ ಮಕ್ಕಳಿಗೆ ಶಿಕ್ಷಣ ನೀಡುವುದಾಗಿದೆ. ಆದರೆ ಕಳೆದ ಕೆಲವು ತಿಂಗಳಿನಿಂದ ರಾಜ್ಯದ ಶಿಕ್ಷಕರನ್ನು ಎಸ್‌ಐಆರ್, ಬಿಎಲ್‌ಒ ಸೇರಿದಂತೆ ಹಲವು ಸರ್ಕಾರಿ ಕಾರ್ಯಗಳಿಗೆ ನಿಯೋಜಿಸಲಾಗುತ್ತಿದೆ. ಇದರಿಂದ ಶಿಕ್ಷಕರು ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡಲು ಅಗತ್ಯವಾದ ಸಮಯವನ್ನು ಕಳೆದುಕೊಳ್ಳುವಂತಾಗಿದೆ. ಒಂದೆಡೆ ಪಠ್ಯಕ್ರಮ ಪೂರ್ಣಗೊಳಿಸುವ ಒತ್ತಡ, ಮತ್ತೊಂದೆಡೆ ವಿವಿಧ ಇಲಾಖೆಗಳ ಬೋಧನೇತರ ಕಾರ್ಯಗಳ ಜವಾಬ್ದಾರಿ ಶಿಕ್ಷಕರ ಮೇಲೆ ಬೀಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು.
ಶಿಕ್ಷಕರನ್ನು ಶಿಕ್ಷಣೇತರ ಕಾರ್ಯಗಳಿಗೆ ನಿಯೋಜಿಸುವುದರಿಂದ ನೇರವಾಗಿ ಮಕ್ಕಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ. ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜು ಹಂತದ ಬೋಧನಾ ಸಿಬ್ಬಂದಿ ತಮ್ಮ ಮೂಲ ಕರ್ತವ್ಯದಲ್ಲಿ ತೊಡಗಿಸಿಕೊಂಡಾಗ ಮಾತ್ರ ಶೈಕ್ಷಣಿಕ ಗುಣಮಟ್ಟ ಹೆಚ್ಚಲು ಸಾಧ್ಯ. ಆದ್ದರಿಂದ ಬೋಧನಾ ಸಿಬ್ಬಂದಿಯನ್ನು ಅನಗತ್ಯವಾಗಿ ಇತರೆ ಇಲಾಖೆಗಳ ಕಾರ್ಯಗಳಿಗೆ ಬಳಸಿಕೊಳ್ಳುವುದನ್ನು ತಪ್ಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ವಯೋಮಿತಿಯನ್ನು ಪರಿಗಣಿಸಿ ಶಿಕ್ಷಕರಿಗೆ ವಿನಾಯಿತಿ ನೀಡುವ ವ್ಯವಸ್ಥೆ ರೂಪಿಸುವ ಅಗತ್ಯವಿದೆ ಎಂದು ಹೇಳಿದರು. ಶಿಕ್ಷಕರನ್ನು ಇತರೆ ಸರ್ಕಾರಿ ಕಾರ್ಯಗಳಿಗೆ ನಿಯೋಜಿಸುವ ಸಂದರ್ಭದಲ್ಲಿ ಅವರ ಸುರಕ್ಷತೆಯನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಅನ್ಯ ಇಲಾಖೆಯ ಕರ್ತವ್ಯ ನಿರ್ವಹಿಸುವ ವೇಳೆ ಶಿಕ್ಷಕರು ಮೃತಪಟ್ಟರೆ ಅವರ ಕುಟುಂಬಕ್ಕೆ ₹ ೧ ಕೋಟಿ ಪರಿಹಾರ ನೀಡುವ ಐತಿಹಾಸಿಕ ಮಸೂದೆಯನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸುವ ನಿಟ್ಟಿನಲ್ಲಿ ಸಿದ್ಧತೆ ನಡೆದಿದೆ. ಮಸೂದೆಗೆ ಅನುಮೋದನೆ ದೊರೆತರೆ ಶಿಕ್ಷಕರಿಗೆ ಸರ್ಕಾರದ ವತಿಯಿಂದ ಹೆಚ್ಚಿನ ಭದ್ರತೆ ದೊರೆಯಲಿದೆ ಎಂದು ತಿಳಿಸಿದರು.ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು:
ಬೋಧನಾ ಕಾರ್ಯಕ್ಕೆ ಅಡ್ಡಿಯಾಗದಿರಲಿ:
ಕಾರ್ಯಕ್ರಮದಲ್ಲಿ ಸೇವೆಯಿಂದ ನಿವೃತ್ತರಾದ ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ದೀರ್ಘಕಾಲ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಶಿಕ್ಷಕರ ಸೇವೆಯನ್ನು ಸ್ಮರಿಸಲಾಯಿತು. ಶಿಕ್ಷಕರಿಗೆ ಅಭಿನಂದನಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್. ಎಸ್. ಚೇತನ್, ಹಾಸನ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್. ಕೃಷ್ಣಮೂರ್ತಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಪಿ. ಕೃಷ್ಣಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಸುಂದರೇಶ್, ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ. ರಘು, ಎಸ್‌ಸಿ/ಎಸ್‌ಟಿ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ ದೊಡ್ಡಮಗ್ಗೆ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜು, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀಕಾಂತ್, ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಆರ್. ಆಶಾ, ಚೈತ್ರಾ ಮಂಜೇಗೌಡ, ನಾಯಕರಹಳ್ಳಿ ಮಂಜೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್, ನಾರಾಯಣ್, ವರದರಾಜು, ಗೌರವಾಧ್ಯಕ್ಷ ಅಣ್ಣಪ್ಪ, ಆನಂದ್, ಉಮೇಶ್, ದಿನೇಶ್, ಪ್ರಧಾನ ಕಾರ್ಯದರ್ಶಿ ವಿ.ಜಿ. ದ್ಯಾವೇಗೌಡ, ತಾಲೂಕು ಅಧ್ಯಕ್ಷ ಗೌಡಲೋಹಿತ್, ಉಪಾಧ್ಯಕ್ಷ ಮೋಹನ್ ಕುಮಾರ್, ವಿಜಯ್ ಸೇರಿದಂತೆ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ವಾಣಿ ಪ್ರಾರ್ಥಿಸಿದರು.