ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಗುರುವಾರ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ವಿಮಾನದ ಬಾಲದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಆತಂಕದ ವಾತಾವರಣ ಸೃಷ್ಟಿಯಾಗುವಂತಾಗಿತ್ತು.
ಕನ್ನಡಪ್ರಭ ವಾರ್ತೆ ಬೆಂಗಳೂರುಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಗುರುವಾರ ಏರ್ ಇಂಡಿಯಾ ವಿಮಾನ ಲ್ಯಾಂಡಿಂಗ್ ವೇಳೆ ವಿಮಾನದ ಬಾಲದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಆತಂಕದ ವಾತಾವರಣ ಸೃಷ್ಟಿಯಾಗುವಂತಾಗಿತ್ತು.
ದೆಹಲಿಯಿಂದ ಬೆಂಗಳೂರಿಗೆ ಬಂದ ಎಐ2651 ಸಂಖ್ಯೆಯ ಏರ್ ಇಂಡಿಯಾ ವಿಮಾನವು ಕೆಐಎನಲ್ಲಿ ಲ್ಯಾಂಡಿಂಗ್ ಮಾಡುವಾಗ ವಿಮಾನದ ಬಾಲದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು. ಇದರಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಂತಿಮವಾಗಿ ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ವಿಮಾನದಲ್ಲಿ 180ಕ್ಕೂ ಹೆಚ್ಚಿನ ಪ್ರಯಾಣಿಕರು ಮತ್ತು ವಿಮಾನ ಸಿಬ್ಬಂದಿಯಿದ್ದರು. ವಿಮಾನ ಲ್ಯಾಂಡ್ ಆದ ನಂತರ ಅದನ್ನು ಸೇವೆಗೆ ನಿಯೋಜಿಸದೆ ವಿವರವಾದ ತಪಾಸಣೆಗಾಗಿ ಕಳುಹಿಸಲಾಯಿತು. ಹಾಗೆಯೇ, ಎಸ್‌ಒಪಿ ಅನುಗುಣವಾಗಿ ಸಂಬಂಧಿತ ನಿಯಂತ್ರಕ ಅಧಿಕಾರಿಗಳು ವಿಮಾನದಲ್ಲಿನ ದೋಷ ಕಾಣಿಸಿಕೊಂಡ ಕುರಿತಂತೆ ತನಿಖೆಯನ್ನು ನಡೆಸಲಿದ್ದಾರೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.