ತಾಂತ್ರಿಕವಾಗಿ ಅಖಂಡ ತಾಲೂಕು ಮುಂದುವರಿಬೇಕು

KannadaprabhaNewsNetwork |  
Published : Jul 09, 2025, 12:18 AM IST
2 | Kannada Prabha

ಸಾರಾಂಶ

2013ರಲ್ಲಿ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದು ಸಂಚಲನ ಮೂಡಿಸಿದ್ದರು. ಅದನ್ನು ಮುಂದುವರೆಸಲು ಇದೀಗ ಹೊಸ ಪರಿಕರಗಳನ್ನು ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂದಗಿ

2013ರಲ್ಲಿ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದು ಸಂಚಲನ ಮೂಡಿಸಿದ್ದರು. ಅದನ್ನು ಮುಂದುವರೆಸಲು ಇದೀಗ ಹೊಸ ಪರಿಕರಗಳನ್ನು ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಕೃಷಿ ಇಲಾಖೆ ಪ್ರಾಂಗಣದಲ್ಲಿ ಜಿಪಂ, ಕೃಷಿ ಇಲಾಖೆ, ಇಂಡಿಯ ಕೃಷಿ ವಿಜ್ಞಾನ ಕೇಂದ್ರ, ಸಿಂದಗಿಯ ಕೃಷಿಕ ಸಮಾಜ ಹಾಗೂ ಅಲಮೇಲ ಸಹಯೋಗದಲ್ಲಿ ಕೃಷಿ ಯಂತ್ರೋಪಕರಣಗಳ ವಿತರಣೆ ಹಾಗೂ ಮುಂಗಾರು ಹಂಗಾಮಿನ ತಾಂತ್ರಿಕ ಮಾಹಿತಿ ಕಾರ್ಯಕ್ರಮಕ್ಕೆ ಶಾಸಕ ಅಶೋಕ ಮನಗೂಳಿ ಚಾಲನೆ ನೀಡಿ ಮಾತನಾಡಿದರು. ದೇವರ ಹಿಪ್ಪರಗಿ, ಆಲಮೇಲ, ಸಿಂದಗಿ ಅಖಂಡ ತಾಲೂಕು ಪರಿಪೂರ್ಣ ನೀರಾವರಿ ಕ್ಷೇತ್ರವಾಗಿರುವುದರಿಂದ ತಾಂತ್ರಿಕವಾಗಿ ಬಹಳಷ್ಟು ಮುಂದುವರೆಯಬೇಕಾಗಿದೆ. ಅಲ್ಲದೆ, ರೋಗ ರುಜಿನಗಳ ನಿಯಂತ್ರಣಕ್ಕೆ ಕೃಷಿ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಹೇಳಿದ ಅವರು, ನಮ್ಮ ಸರ್ಕಾರದಲ್ಲಿ ಹಗಲು ಹೊತ್ತಿನಲ್ಲೇ 7 ಗಂಟೆಗಳ ವಿದ್ಯುತ್ ನೀಡಲಾಗುತ್ತಿದೆ. ಹೈನುಗಾರಿಕೆ ಹೆಚ್ಚಿಸಬೇಕೆನ್ನುವ ನಿಟ್ಟಿನಲ್ಲಿ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಲ್ಲಿಯೂ ಹಸುವಿನ ಯೋಜನೆ ಜಾರಿಗೆ ತರಲಾಗಿದೆ. ಆದರೆ ಯಾವ ರೈತರು ಹಸುಗಳನ್ನು ಖರೀದಿ ಮಾಡಿಲ್ಲ. ಅದಕ್ಕೆ ಪ್ರತಿಯೊಬ್ಬರು ಹಸುಗಳನ್ನು ಖರೀದಿಸುವಂತೆ ಕರೆ ನಿಡಿದರು.

ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ, ಜಂಟಿ ನಿರ್ದೆಶಕ ಶಿವನಗೌಡ ಪಾಟೀಲ ಮಾತನಾಡಿದರು.

ಕೃಷಿಕ ಸಮಾಜದ ಅಧ್ಯಕ್ಷ ಶಿವಪ್ಪಗೌಡ ಬಿರಾದಾರ, ಆಲಮೇಲ ಅಧ್ಯಕ್ಷ ನಿಂಗನಗೌಡ ಪಾಟೀಲ, ಸದಸ್ಯರಾದ ಬಸಯ್ಯ ಹಿರೇಮಠ, ಬಿ.ಜಿ.ನೆಲ್ಲಗಿ, ರಮೇಶ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಕೆಡಿಪಿ ಸದಸ್ಯರಾದ ನೂರಹ್ಮದ ಅತ್ತಾರ, ಖಾದರ ಬಂಕಲಗಿ, ಪಸು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಶಿವಶರಣ ಯಲಗೋಡ, ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಅಶೋಕ ಕೊಳಾರಿ, ಬಾಗಪ್ಪಗೌಡ ಪಾಟೀಲ, ಶೈಲಜಾ ಸ್ಥಾವರಮಠ, ಗಂಗಾಧರ ಚಿಂಚೋಳಿ ಸೇರಿದಂತೆ ಹಲವರು ವೇದಿಕೆ ಮೇಲಿದ್ದರು.

ಕೃಷಿ ಇಲಾಖೆ ಸಹಾಯಕ ನಿರ್ದೆಶಕ ಡಾ.ಎಚ್.ವೈ.ಸಿಂಗೆಗೋಳ ಸ್ವಾಗತಿಸಿದರು. ಇಂಡಿ ಉಪನಿರ್ದೇಶಕ ಚಂದ್ರಕಾಂತ ಪವಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಅಧಿಕಾರಿ ಶಿವಾನಂದ ಹೂನಳ್ಳಿ ನಿರೂಪಿಸಿ, ವಂದಿಸಿದರು.

ಕನ್ನಡಪ್ರಭ ವಾರ್ತೆ ಸಿಂದಗಿ2013ರಲ್ಲಿ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ರೈತರಿಗಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದು ಸಂಚಲನ ಮೂಡಿಸಿದ್ದರು. ಅದನ್ನು ಮುಂದುವರೆಸಲು ಇದೀಗ ಹೊಸ ಪರಿಕರಗಳನ್ನು ನೀಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ