ಕನ್ನಡಪ್ರಭವಾರ್ತೆ, ಹಾಸನ
ನಗರದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ ಹಾಗೂ ಸ್ಕಿಲ್ ಆ್ಯಂಡ್ ಕನ್ಸಲ್ಟೆನ್ಸಿ ಸೆಂಟರ್ ಸಹಯೋಗದಲ್ಲಿ ಆಯೋಜಿಸಿದ್ದ ಬಿಲ್ಡಿಂಗ್ ಇನ್ಫರ್ಮೇಶನ್ ಮಾಡಲಿಂಗ್ (ಬಿ.ಎಂ.ಐ.) ಕುರಿತ ಮೂರು ದಿನಗಳ ಸಾಫ್ಟ್‌ವೇರ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,
ನಿರ್ಮಾಣ ಕ್ಷೇತ್ರದಲ್ಲಿ ಡಿಜಿಟಲ್ ಪರಿವರ್ತನೆ ಅನಿವಾರ್ಯವಾಗಿದ್ದು, ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ತಂತ್ರಜ್ಞಾನವನ್ನು ಮೂಲಸೌಕರ್ಯ ಯೋಜನೆಗಳಲ್ಲಿ ಕಡ್ಡಾಯಗೊಳಿಸಲಾಗಿದೆ. ಇದೇ ರೀತಿಯಲ್ಲಿ ಭಾರತದಲ್ಲಿಯೂ ಇದರ ಅಳವಡಿಕೆ ವೇಗ ಪಡೆಯುತ್ತಿದೆ ಎಂದು ಅವರು ಹೇಳಿದರು. ಇಂತಹ ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿ ಆಗಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಮುಖ್ಯ ಅತಿಥಿಯಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಚ್.ಜೆ. ಅಮರೇಂದ್ರ, ಬಿ.ಎಂ.ಐ. ತಂತ್ರಜ್ಞಾನವು ನಿರ್ಮಾಣ ಕ್ಷೇತ್ರದಲ್ಲಿ ಯೋಜನೆ, ವಿನ್ಯಾಸ ಹಾಗೂ ಕಾರ್ಯಗತಗೊಳಿಸುವಿಕೆಯನ್ನು ಸುಧಾರಿಸುತ್ತಿದೆ ಎಂದು ಹೇಳಿದರು.
ಸ್ಕಿಲ್ ಆ್ಯಂಡ್ ಕನ್ಸಲ್ಟೆನ್ಸಿ ಸೆಂಟರ್ ಮುಖ್ಯಸ್ಥರಾದ ಡಾ. ಎ.ಜೆ. ಕೃಷ್ಣಯ್ಯ ಮಾತನಾಡಿ, ಇಂತಹ ಕಾರ್ಯಕ್ರಮಗಳು ಶೈಕ್ಷಣಿಕ ಹಾಗೂ ಉದ್ಯಮದ ಅವಶ್ಯಕತೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.