ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಚಿಣ್ಯ ಸರ್ಕಲ್ ಸಮೀಪದ ಭೂಸಮುದ್ರ ಗೇಟ್ ಬಳಿ ವಿಬ್‌ಗಯಾರ್ ಪಬ್ಲಿಕ್ ಶಾಲೆಯಲ್ಲಿ ಪಾಂಡವಪುರದ ಸಿರಿ ದಂತ ಆರೈಕೆ ಸಂಸ್ಥೆ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಉಚಿತ ದಂತ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಚಿಕ್ಕ ವಯಸ್ಸಿನ ಮಕ್ಕಳು ಅತಿಯಾದ ಸಿಹಿ ಪದಾರ್ಥ ಸೇವನೆ ಮಾಡುವುದರಿಂದ ಮತ್ತು ಸರಿಯಾದ ಬ್ರಷಿಂಗ್ ಅಭ್ಯಾಸದ ಕೊರತೆಯಿಂದ ಬಾಲ್ಯದಲ್ಲಿಯೇ ಹಲ್ಲಿನ ಹಾನಿ ಹೆಚ್ಚಾಗುತ್ತಿದೆ. ಆದ್ದರಿಂದ ಪ್ರತಿನಿತ್ಯ ಎರಡು ಬಾರಿ ಬ್ರಷ್ ಮಾಡಿ ಹಲ್ಲುಗಳನ್ನು ಸ್ವಚ್ಛಗೊಳಿಸಿಕೊಳ್ಳುವ ಜೊತೆಗೆ ಕನಿಷ್ಠ ಆರು ತಿಂಗಳಿಗೊಮ್ಮೆ ದಂತ ವೈದ್ಯರನ್ನು ಸಂಪರ್ಕಿಸಿ ಹಲ್ಲುಗಳ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯವಶ್ಯಕ ಎಂದು ಸಲಹೆ ನೀಡಿದರು.ಶಾಲೆ ಮುಖ್ಯ ಶಿಕ್ಷಕ ಟಿ.ಎಸ್.ಅಭಿಲಾಷ್ ಮಾತನಾಡಿ, ಶಾಲೆಗೆ ಬರುವ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಮಕ್ಕಳ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಆರೋಗ್ಯ ಮತ್ತು ದಂತ ತಪಾಸಣೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಶಿಬಿರದಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ದಂತ ತಪಾಸಣೆ ಮಾಡಲಾಯಿತು. ಶಾಲೆ ಆಡಳಿತಾಧಿಕಾರಿ ಎಂ.ಡಿ.ಮರಿಸ್ವಾಮಿಗೌಡ ಸೇರಿದಂತೆ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಇದ್ದರು.