ತೆಗ್ಗಿ ಅಂಗನವಾಡಿಗೆ ರಾಜ್ಯಮಟ್ಟದ ಪ್ರಶಸ್ತಿ ಗರಿ

KannadaprabhaNewsNetwork |  
Published : Nov 29, 2025, 11:45 PM IST
ಪೋಟೋ: 28 ಜಿಎಲ್‌ಡಿ1 :  ಬೆಂಗಳೂರಿನ ಅರಮನೆ ಮೈದಾನದಲ್ಲಿ  ಶುಕ್ರವಾರ ನ.28  ರಂದು ನಡೆದ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ  ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾದ ಲಕ್ಷ್ಮೀ ಹೆಬ್ಬಾಳಕರ ಅವರು   ಬಸವರಾಜೇಶ್ವರಿ ಕುಬಕಡ್ಡಿ ಹಾಗೂ  ಮಂಜವ್ವ ಮಸನಪ್ಪ ಕೆಂಗಾರ ಆವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.  | Kannada Prabha

ಸಾರಾಂಶ

ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ತೆಗ್ಗಿ ಗ್ರಾಮದ ಅಂಗನವಾಡಿ ಕೇಂದ್ರ-2ರ ಅಂಗನವಾಡಿ ಕಾರ್ಯಕರ್ತೆ ಬಸವರಾಜೇಶ್ವರಿ ಭೀ. ಕುಡುಕಡ್ಡಿ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಹಾಗೂ ಅದೇ ಅಂಗನವಾಡಿಯ ಸಹಾಯಕಿ ಮಂಜವ್ವ ಮಸನಪ್ಪ ಕೆಂಗಾರ ಅತ್ಯುತ್ತಮ ಸಹಾಯಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಗುಳೇದಗುಡ್ಡ

ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ತೆಗ್ಗಿ ಗ್ರಾಮದ ಅಂಗನವಾಡಿ ಕೇಂದ್ರ-2ರ ಅಂಗನವಾಡಿ ಕಾರ್ಯಕರ್ತೆ ಬಸವರಾಜೇಶ್ವರಿ ಭೀ. ಕುಡುಕಡ್ಡಿ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಹಾಗೂ ಅದೇ ಅಂಗನವಾಡಿಯ ಸಹಾಯಕಿ ಮಂಜವ್ವ ಮಸನಪ್ಪ ಕೆಂಗಾರ ಅತ್ಯುತ್ತಮ ಸಹಾಯಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ನ.28ರಂದು ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಬಸವರಾಜೇಶ್ವರಿ ಕುಬಕಡ್ಡಿ ಹಾಗೂ ಮಂಜವ್ವ ಮಸನಪ್ಪ ಕೆಂಗಾರ ಆವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಪ್ರಶಸ್ತಿ ಪಡೆದ ಗುಳೇದಗುಡ್ಡ ತಾಲೂಕಿನ ತೆಗ್ಗಿ ಅಂಗನವಾಡಿ ಕೇಂದ್ರ-2 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಅವರಿಗೆ ಬಾಗಲಕೋಟೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ಬದಾಮಿ ತಾಲೂಕ ಸಿಡಿಪಿಓ, ಕಟಗೇರಿ ವಲಯ ಅಂಗನವಾಡಿ ಮೇಲ್ವಿಚಾರಕರು, ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಮತಕ್ಷೇತ್ರದ ಗುಳೇದಗುಡ್ಡ ತಾಲೂಕಿನ ತೆಗ್ಗಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿದ್ದು ಖುಷಿ ತಂದಿದೆ. ಉಳಿದ ಅಂಗನವಾಡಿಯವರೂ ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು.

-ಭೀಮಸೇನ ಚಿಮ್ಮನಕಟ್ಟಿ ಶಾಸಕರು ಬಾದಾಮಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರೇಜ್‌ ಮೆಕಾನಿಕ್‌ ಕೊಲೆ ಕೇಸ್‌: 7 ಆರೋಪಿಗಳ ಸೆರೆ
ಪೋಟೋ ಫ್ರೇಮ್‌ನಲ್ಲಿ ಅಡಗಿಸಿಟ್ಟುಸಾಗಿಸುತ್ತಿದ್ದ 37 ಲಕ್ಷದ ಗಾಂಜಾ ಜಪ್ತಿ